AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಪೆಯಲ್ಲಿ ಮೀನಿನ ಬೆಲೆ ಪಾತಾಳಕ್ಕೆ! ಮಾಂಜಿ, ಅಂಜಲ್ ಬೆಲೆ ಎಷ್ಟಿದೆ ಗೊತ್ತಾ? : ಮೀನಿನ ದರ ಪಟ್ಟಿ ಇಲ್ಲಿದೆ ನೋಡಿ

ಏಷ್ಯಾದ ಅತಿ ದೊಡ್ಡ ಮೀನುಗಾರಿಕಾ ಬಂದರು ಮಲ್ಪೆಯಲ್ಲಿ ಯುದ್ಧದ ಪ್ರಭಾವದಿಂದ ಮೀನುಗಾರಿಕೆ ಉದ್ಯಮ ತೀವ್ರ ಸಂಕಷ್ಟದಲ್ಲಿದೆ. ಕರಾವಳಿ ಮೀನುಗಾರರು, ವಿಶೇಷವಾಗಿ ಮಹಿಳೆಯರು ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಹೋಟೆಲ್‌ಗಳ ಮುಚ್ಚುಗಡೆ, ರಫ್ತು ಸ್ಥಗಿತ ಮತ್ತು LPG ವ್ಯತ್ಯಯದಿಂದ ಮೀನಿನ ದರ ಪಾತಾಳಕ್ಕೆ ಕುಸಿದಿದ್ದು, ಲಕ್ಷಾಂತರ ರೂಪಾಯಿ ವಹಿವಾಟು ಸ್ಥಗಿತಗೊಂಡಿದೆ. ಈ ಬಿಕ್ಕಟ್ಟು ಮೀನುಗಾರರ ಜೀವನಾಡಿಗೇ ಸವಾಲಾಗಿದೆ.

ಮಲ್ಪೆಯಲ್ಲಿ ಮೀನಿನ ಬೆಲೆ ಪಾತಾಳಕ್ಕೆ! ಮಾಂಜಿ, ಅಂಜಲ್ ಬೆಲೆ ಎಷ್ಟಿದೆ ಗೊತ್ತಾ? : ಮೀನಿನ ದರ ಪಟ್ಟಿ ಇಲ್ಲಿದೆ ನೋಡಿ
ಸಾಂದರ್ಭಿಕ ಚಿತ್ರ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on:Mar 21, 2026 | 3:14 PM

Share

ಉಡುಪಿ, ಮಾ.21: ಎಲ್ಲೋ ನಡೆಯುತ್ತಿರುವ ಯುದ್ಧವು ಕರಾವಳಿಯ ಮೀನುಗಾರರ ಬದುಕನ್ನು ಅಲ್ಲೋಲಕಲ್ಲೋಲಗೊಳಿಸಿದೆ. ಏಷ್ಯಾದ ಅತಿ ದೊಡ್ಡ ಮೀನುಗಾರಿಕಾ ಬಂದರು ಎನಿಸಿಕೊಂಡಿರುವ ಮಲ್ಪೆಯಲ್ಲಿ ಇಂದು ಮೀನುಗಾರಿಕೆ ಉದ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಹೋಟೆಲ್‌ಗಳ ಮುಚ್ಚುಗಡೆ ಮತ್ತು ರಫ್ತು ಸ್ಥಗಿತದಿಂದಾಗಿ ಮೀನಿನ ದರ ಪಾತಾಳಕ್ಕೆ ಕುಸಿದಿದೆ.

ಮಾರುಕಟ್ಟೆಯಲ್ಲಿ ಪ್ರತಿ ಮೀನಿನ ದರದಲ್ಲಿ ಸುಮಾರು 100 ರಿಂದ 200 ರೂಪಾಯಿ ಇಳಿಕೆಯಾಗಿದೆ. ಮೀನುಗಾರ ಮಹಿಳೆಯರಿಗೆ ಅಸಲು ಕೂಡ ಸಿಗದಂತಾಗಿದ್ದು, ವ್ಯಾಪಾರದಲ್ಲಿ ಭಾರೀ ನಷ್ಟ ಅನುಭವಿಸುತ್ತಿದ್ದಾರೆ.ಅಡುಗೆ ಅನಿಲದ (LPG) ವ್ಯತ್ಯಯ ಮತ್ತು ಯುದ್ಧದ ಪ್ರಭಾವದಿಂದಾಗಿ ಪ್ರತಿದಿನ ಮೀನು ಊಟದ ಹೋಟೆಲ್‌ಗಳು ಮುಚ್ಚುತ್ತಿವೆ. ಹೋಟೆಲ್ ಮಾಲೀಕರು ಮಾರುಕಟ್ಟೆಗೆ ಬಾರದ ಕಾರಣ ಲಕ್ಷಾಂತರ ರೂಪಾಯಿ ಮೌಲ್ಯದ ವಹಿವಾಟು ಸ್ಥಗಿತಗೊಂಡಿದೆ.

ಇದನ್ನೂ ಓದಿ: ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಅಮಾನವೀಯ ಹಲ್ಲೆ; ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!

ಮೀನಿನ ದರ ಪಟ್ಟಿ (ಹಳೆ ದರ vs ಹೊಸ ದರ)

ಮೀನಿನ ಹೆಸರು ಹಳೆಯ ದರ (ಪ್ರತಿ ಕೆಜಿಗೆ) ಹೊಸ ದರ (ಪ್ರತಿ ಕೆಜಿಗೆ) ಇಳಿಕೆಯಾದ ಮೊತ್ತ
ಮಾಂಜಿ (ಪಾಂಫ್ರೆಟ್) ₹ 1550 ₹ 1400 ₹ 150
ಅಂಜಲ್ (ಸೀ ಫಿಶ್) ₹ 1100 ₹ 1000 ₹ 100
ದೊಡ್ಡ ಬಂಗುಡೆ ₹ 300 ₹ 260 ₹ 40
ಡಿಸ್ಕೋ ಮೀನು ₹ 180 ₹ 140 ₹ 40
ರಾಣಿ ಮೀನು ₹ 280 ₹ 245 ₹ 35
ಚಿಕ್ಕ ಬಂಗುಡೆ ₹ 210 ₹ 180 ₹ 30
ಸಿಗಡಿ (Prawns) ₹ 340 ₹ 320 ₹ 20

ಇಲ್ಲಿದೆ ನೋಡಿ ವಿಡಿಯೋ: 

ಮಲ್ಪೆಯಿಂದ ಕೇರಳದ ಹೋಟೆಲ್‌ಗಳಿಗೆ ಕೋಟ್ಯಂತರ ರೂಪಾಯಿ ಮೌಲ್ಯದ ಮೀನು ರಫ್ತಾಗುತ್ತಿತ್ತು. ಆದರೆ ಈಗ ಕೇರಳದಲ್ಲೂ ಹೋಟೆಲ್‌ಗಳು ಬಂದ್ ಆಗಿರುವುದರಿಂದ ಮೀನಿನ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ. ಯುದ್ಧದ ಹಿನ್ನೆಲೆಯಲ್ಲಿ ಅಡುಗೆ ಅನಿಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯವು ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ನೀಡಿದೆ. ಇದು ಪರೋಕ್ಷವಾಗಿ ಮೀನುಗಾರಿಕಾ ಮಾರುಕಟ್ಟೆಯ ಮೇಲೆ ಪ್ರಭಾವ ಬೀರಿದೆ.”ಯುದ್ಧ ಮುಗಿದರೆ ಸಾಕು, ಮರಳಿ ಜೀವನ ಮೊದಲಿನಂತಾಗಲಿ” ಎಂದು ಮೀನುಗಾರ ಮಹಿಳೆಯರು ಪ್ರಾರ್ಥಿಸುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:13 pm, Sat, 21 March 26

Follow Us
ಪ್ರಜ್ವಲ್ ಅಮೀನ್​, ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?