ಉಡುಪಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ಸಮುದ್ರಕ್ಕೆ ಇಳಿಯದಂತೆ ಸೂಚನೆ
ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತಗೊಂಡಿರುವ ಹಿನ್ನೆಲೆ ಮುಂದಿನ 4 ದಿನ ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ, ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮೀನುಗಾರರು ಹಾಗೂ ಜನರು ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಿ ಆದೇಶಿಸಿದೆ.
ಉಡುಪಿ, ಅ.16: ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತಗೊಂಡಿರುವ ಹಿನ್ನೆಲೆ ಮುಂದಿನ 4 ದಿನ ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ (India Meteorological Department) ಮುನ್ಸೂಚನೆ ನೀಡಿದೆ. ಅದರಂತೆ, ಉಡುಪಿ (Udupi) ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮೀನುಗಾರರು ಹಾಗೂ ಜನರು ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಿ ಆದೇಶಿಸಿದೆ.
ಮುಂದಿನ 4 ದಿನಗಳ ಕಾಲ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಸಾಧ್ಯತೆ ಇದೆ. ಅಕ್ಟೋಬರ್ 20 ರವರೆಗೂ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆಯು ಎಚ್ಚರಿಸಿದ್ದು, ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.
ಇದನ್ನೂ ಓದಿ: Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಅಕ್ಟೋಬರ್ 21ರವರೆಗೆ ಮಳೆ
ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಸಮುದ್ರದಲ್ಲಿ ಚಂಡಮಾರುತ ಬೀಸುವ ಸಂಭವವಿರುವುದರಿಂದ ಅಲೆಗಳ ಎತ್ತರ ಹೆಚ್ಚಾಗಲಿದೆ ಮತ್ತು ಗಾಳಿಯ ವೇಗವು ಗಂಟೆಗೆ 40-45 ರಿಂದ 55 ಕಿ.ಮೀ. ಇರುವುದರಿಂದ ಸಮುದ್ರವು ಪ್ರಕ್ಷುಬ್ದತೆಯಿಂದ ಕೂಡಿರುತ್ತದೆ. ಹೀಗಾಗಿ ಮುಂದಿನ 4 ದಿನಗಳ ವರೆಗೆ ಕರಾವಳಿ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ ಎಂದು ಪ್ರಾಧಿಕಾರವು ಆದೇಶದಲ್ಲಿ ತಿಳಿಸಿದೆ.
ಸಮುದ್ರದ ಹತ್ತಿರ ಓಡಾಡುವುದು ಮತ್ತು ಆಟವಾಡುವುದನ್ನು ಕೂಡ ನಿಷೇಧಿಸಲಾಗಿದೆ. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಾದಲ್ಲಿ ಟೋಲ್ ಫ್ರೀ-1077, ದೂರವಾಣಿ ಸಂಖ್ಯೆ-0820-2574802ಕ್ಕೆ ಸಂಪರ್ಕಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:46 pm, Mon, 16 October 23