ಉಡುಪಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ಸಮುದ್ರಕ್ಕೆ ಇಳಿಯದಂತೆ ಸೂಚನೆ

| Updated By: Rakesh Nayak Manchi

Updated on: Oct 16, 2023 | 10:52 PM

ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತಗೊಂಡಿರುವ ಹಿನ್ನೆಲೆ ಮುಂದಿನ‌ 4 ದಿನ ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ, ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮೀನುಗಾರರು ಹಾಗೂ ಜನರು ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಿ ಆದೇಶಿಸಿದೆ.

ಉಡುಪಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ, ಸಮುದ್ರಕ್ಕೆ ಇಳಿಯದಂತೆ ಸೂಚನೆ
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಸಮುದ್ರಕ್ಕೆ ಇಳಿಯದಂತೆ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ (ಸಾಂದರ್ಭಿಕ ಚಿತ್ರ)
Follow us on

ಉಡುಪಿ, ಅ.16: ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತಗೊಂಡಿರುವ ಹಿನ್ನೆಲೆ ಮುಂದಿನ‌ 4 ದಿನ ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ (India Meteorological Department) ಮುನ್ಸೂಚನೆ ನೀಡಿದೆ. ಅದರಂತೆ, ಉಡುಪಿ (Udupi) ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮೀನುಗಾರರು ಹಾಗೂ ಜನರು ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಿ ಆದೇಶಿಸಿದೆ.

ಮುಂದಿನ‌ 4 ದಿನಗಳ ಕಾಲ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಸಾಧ್ಯತೆ ಇದೆ. ಅಕ್ಟೋಬರ್ 20 ರವರೆಗೂ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆಯು ಎಚ್ಚರಿಸಿದ್ದು, ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

ಇದನ್ನೂ ಓದಿ: Karnataka Rain: ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಅಕ್ಟೋಬರ್ 21ರವರೆಗೆ ಮಳೆ

ಭಾರತೀಯ ಹವಾಮಾನ ಇಲಾಖೆಯ ವರದಿಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಸಮುದ್ರದಲ್ಲಿ ಚಂಡಮಾರುತ ಬೀಸುವ ಸಂಭವವಿರುವುದರಿಂದ ಅಲೆಗಳ ಎತ್ತರ ಹೆಚ್ಚಾಗಲಿದೆ ಮತ್ತು ಗಾಳಿಯ ವೇಗವು ಗಂಟೆಗೆ 40-45 ರಿಂದ 55 ಕಿ.ಮೀ. ಇರುವುದರಿಂದ ಸಮುದ್ರವು ಪ್ರಕ್ಷುಬ್ದತೆಯಿಂದ ಕೂಡಿರುತ್ತದೆ. ಹೀಗಾಗಿ ಮುಂದಿನ 4 ದಿನಗಳ ವರೆಗೆ ಕರಾವಳಿ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ ಎಂದು ಪ್ರಾಧಿಕಾರವು ಆದೇಶದಲ್ಲಿ ತಿಳಿಸಿದೆ.

ಸಮುದ್ರದ ಹತ್ತಿರ ಓಡಾಡುವುದು ಮತ್ತು ಆಟವಾಡುವುದನ್ನು ಕೂಡ ನಿಷೇಧಿಸಲಾಗಿದೆ. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಾದಲ್ಲಿ ಟೋಲ್​ ಫ್ರೀ-1077, ದೂರವಾಣಿ ಸಂಖ್ಯೆ-0820-2574802ಕ್ಕೆ ಸಂಪರ್ಕಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:46 pm, Mon, 16 October 23