ಉಡುಪಿಯಲ್ಲಿ ಶೀಘ್ರದಲ್ಲೇ ಎಫ್​​ಎಂ ರೇಡಿಯೋ ಕೇಂದ್ರ ಸ್ಥಾಪನೆ: ಕೇಂದ್ರ ಸಚಿವ ಅನುರಾಗ್ ಠಾಕೂರ್

| Updated By: ವಿವೇಕ ಬಿರಾದಾರ

Updated on: Dec 25, 2022 | 6:17 PM

ಉಡುಪಿಯ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರವನ್ನು ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಉದ್ಘಾಟಿಸಿದರು.

ಉಡುಪಿಯಲ್ಲಿ ಶೀಘ್ರದಲ್ಲೇ ಎಫ್​​ಎಂ ರೇಡಿಯೋ ಕೇಂದ್ರ ಸ್ಥಾಪನೆ: ಕೇಂದ್ರ ಸಚಿವ ಅನುರಾಗ್ ಠಾಕೂರ್
ಕೇಂದ್ರ ಸಚಿವ ಅನುರಾಗ್ ಠಾಕೂರ್
Follow us on

ಉಡುಪಿ: ಜಿಲ್ಲೆಯ ಜನರ ಬಹು ದಿನಗಳ ಬೇಡಿಕೆಯಾದ ಎಫ್​​ಎಂ ರೇಡಿಯೋ ಕೇಂದ್ರವನ್ನು (FM Radio Station) ಮುಂದಿನ ನಾಲ್ಕು ತಿಂಗಳ ಒಳಗಾಗಿ ಸ್ಥಾಪಿಸಲಾಗುತ್ತದೆ. ಜೊತೆಗೆ ರಾಜ್ಯಾದ್ಯಂತ ವಿಜ್ಞಾನ ಸಂಶೋಧನಾ ಕೇಂದ್ರವನ್ನು (Science Research Center) ಸ್ಥಾಪಿಸಲು ಕೇಂದ್ರದಿಂದ ಬೆಂಬಲ ನೀಡುವುದಾಗಿ ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ (Anurag Thakur) ಭರವಸೆ ನೀಡಿದ್ದಾರೆ.

ಉಡುಪಿಯ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರವನ್ನು (Sports Science Centre) ಉದ್ಘಾಟಿಸಿ ಮಾತನಾಡಿದ ಅವರು ಈ ಕ್ರೀಡಾ ವಿಜ್ಞಾನ ಕೇಂದ್ರವು ಕ್ರೀಡಾ ವಿಜ್ಞಾನಿಗಳು ಮತ್ತು ಕ್ರೀಡಾಪಟುಗಳನ್ನು ಒಟ್ಟುಗೂಡಿಸುತ್ತದೆ. ಮುಂದಿನ ದಿನಗಳಲ್ಲಿ,  ಹಲವು ಕ್ರೀಡಾ ವಿಜ್ಞಾನ ಕೇಂದ್ರಗಳು ರಾಜ್ಯಕ್ಕೆ ಬರಲಿವೆ ಎಂದು ಹೇಳಿದರು.

ಇದನ್ನೂ ಓದಿ: ಅವರೇನು ಕೊಲೆ ಮಾಡಿದ್ರಾ, ದರೋಡೆ ಮಾಡಿದ್ರಾ? ಕೆಂಪಣ್ಣ ಬಂಧನಕ್ಕೆ ಸಿದ್ಧರಾಮಯ್ಯ ಕೆಂಡಾಮಂಡಲ

ಕ್ರೀಡೆಯನ್ನು ಉತ್ತೇಜಿಸಲು ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಎಲ್ಲ ರೀತಿಯ ನೆರವು ನೀಡಲಾಗುವುದು. ಕಾರ್ಯಕ್ರಮದ ನಂತರ ಕ್ರೀಡಾಪಟುಗಳೊಂದಿಗೆ ಮಾತನಾಡಿದ ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಏನೆಲ್ಲ ನಿರೀಕ್ಷೆಗವೆ ಎಂದು ತಿಳಿದರು. ಈ ವೇಳೆ ಕ್ರೀಡಾಪಟುಗಳನ್ನು ಸರ್ಕಾರ ಮಾತ್ರ ಉತ್ತೇಜಿಸಿದರೆ ನಡೆಯಲ್ಲ. ಪೋಷಕರು ಕೂಡ ಮಕ್ಕಳನ್ನು ಉತ್ತೇಜಿಸಿ ಕ್ರೀಡಾಪಟುಗಳನ್ನಾಗಿ ಮಾಡಬೇಕು. ಇದಕ್ಕೆ ಕೇಂದ್ರ ಸರ್ಕಾರ ಸಕಲ ಸೌಲಭ್ಯ ಒದಗಿಸುವುದು ಎಂದರು.

ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಡಾ.ಕೆ.ಸಿ.ನಾರಾಯಣ ಗೌಡ, ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾ ರಾವ್ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:16 pm, Sun, 25 December 22