ದುಬೈನಲ್ಲಿ ವಾಸವಾಗಿದ್ದ ಕುಂದಾಪುರ ಮೂಲದ ಯುವಕ ಸಾವು

ದುಬೈನಲ್ಲಿ ವಾಸವಾಗಿದ್ದ ಕುಂದಾಪುರದ ಮೂಲದ ಯುವಕ ಬಿಸಿಲಿನ ಝಳ ತಾಳಲಾರದೆ ಮೃತಪಟ್ಟಿದ್ದಾರೆ. ಕುಂದಾಪುರದ ವಿಠಲವಾಡಿ ನಿವಾಸಿ ಯುವಕ ಶಾನ್‌ ಡಿಸೋಜಾ ಮೃತ ದುರ್ದೈವಿ. ಯುವಕ ಶಾನ್‌ ಡಿಸೋಜಾ ಅವರಿಗೆ ತಂದೆ, ತಾಯಿ ಮತ್ತು ಇಬ್ಬರು ಸಹೋದರರು ಇದ್ದಾರೆ.

ದುಬೈನಲ್ಲಿ ವಾಸವಾಗಿದ್ದ ಕುಂದಾಪುರ ಮೂಲದ ಯುವಕ ಸಾವು
ಮೃತ ಯುವಕ ಶಾನ್‌ ಡಿಸೋಜಾ
Edited By: ವಿವೇಕ ಬಿರಾದಾರ

Updated on: Sep 16, 2024 | 12:54 PM

ಉಡುಪಿ, ಸೆಪ್ಟೆಂಬರ್​ 16: ದುಬೈನಲ್ಲಿ (Dubai) ವಾಸವಾಗಿದ್ದ ಕುಂದಾಪುರದ (Kundapur) ಮೂಲದ ಯುವಕ ಬಿಸಿಲಿನ ಝಳ ತಾಳಲಾರದೆ ಮೃತಪಟ್ಟಿದ್ದಾರೆ. ಕುಂದಾಪುರದ ವಿಠಲವಾಡಿ ನಿವಾಸಿ ಯುವಕ ಶಾನ್‌ ಡಿಸೋಜಾ (19 ವರ್ಷ) ಮೃತ ದುರ್ದೈವಿ. ದುಬೈಯಿಂದ ಸುಮಾರು 115 ಕಿ.ಮೀ. ದೂರದಲ್ಲಿರುವ ರಾಸ್‌ ಅಲ್‌ ಖೈಮಾದ ಸೈಂಟ್‌ ಮೆರೀಸ್‌ ಚರ್ಚ್‌ ಬಳಿ ಮನೆಯಲ್ಲಿ ವಾಸವಾಗಿದ್ದರು. ಖಾಸಗಿ ಕಂಪೆನಿಯಲ್ಲಿ ಮ್ಯಾನೆಜರ್‌ ಆಗಿದ್ದ ಶಾನ್, ಅಲ್ಲಿಯೇ ಕಾಲೇಜು ವಿದ್ಯಾಭ್ಯಾಸ ಮಾಡುತ್ತಿದ್ದರು. ಬಿಸಿಲಿನ ತಾಪ ಮೂರ್ಚೆ ಹೋಗಿ ಆರ್‌ಎಕೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ರವಿವಾರ ಮೃತರಾಗಿದ್ದಾರೆ. ಯುವಕ ಶಾನ್‌ ಡಿಸೋಜಾ ಅವರಿಗೆ ತಂದೆ, ತಾಯಿ ಮತ್ತು ಇಬ್ಬರು ಸಹೋದರರು ಇದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆಚ್ಚಿನ ಮಾಹಿತಿ ಅಪ್ಡೇಟ್​ ಮಾಡಲಾಗುತ್ತಿದೆ..

 

ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us