ಉಡುಪಿ: ನಂದನವನ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
Udupi: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಂದನವನ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಪ್ರಕರಣ ವರದಿಯಾಗಿದೆ. ಬುಧವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಉಡುಪಿ: ಉಡುಪಿ (Udupi) ಜಿಲ್ಲೆಯ ಬೈಂದೂರು ತಾಲೂಕಿನ (baindur taluk) ನಂದನವನ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ (stabbing) ನಡೆಸಿರುವ ಪ್ರಕರಣ ವರದಿಯಾಗಿದೆ. ಗಾಯಾಳು ಪ್ರಸನ್ನಗೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸನ್ನ ತನ್ನ ಸ್ನೇಹಿತ ಮನೋಜ್ ಖಾರ್ವಿ ಜೊತೆ ಊಟಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ಬುಧವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಪ್ರಸನ್ನ ಮತ್ತು ಮನೋಜ್ ಅವರಿಬ್ಬರೂ ಹೋಟೆಲ್ ಬಳಿ ತೆರಳಿದ್ದಾಗ ಅಲ್ಲಿ ನಿಂತಿದ್ದ ಸುದರ್ಶನ ಹಾಗೂ ಯತೀಶ್ ಇವರಿಬ್ಬರ ನಡುವೆ ವಾಗ್ವಾದ ಶುರು ಮಾಡಿದ್ದಾರೆ. ಸುದರ್ಶನ ಚೂರಿಯಿಂದ ಪ್ರಸನ್ನ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದಾನೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.