AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ, ರಂಜಾನ್ ಹಬ್ಬದ ಪ್ರಯುಕ್ತ ರಾಜ್ಯದ ಈ ಜಿಲ್ಲೆಗಳಿಗೆ ಬೆಂಗಳೂರು, ಮೈಸೂರಿನಿಂದ ವಿಶೇಷ ರೈಲು

ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆ ಬೆಂಗಳೂರು ಮತ್ತು ಮೈಸೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ವಿಶೇಷ ರೈಲುಗಳ ಸಂಖ್ಯೆ, ಸಮಯ ಮತ್ತು ದಿನಾಂಕ, ನಿಲುಗಡೆ ಕುರಿತಾದ ಮಾಹಿತಿ ಇಲ್ಲಿದೆ. ಇನ್ನೂ ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್‌ಸೈಟ್‌ಗೆ ಭೇಟಿ ನೀಡಬೇಕೆಂದು ನೈಋತ್ಯ ರೈಲ್ವೆ ತಿಳಿಸಿದೆ.

ಯುಗಾದಿ, ರಂಜಾನ್ ಹಬ್ಬದ ಪ್ರಯುಕ್ತ ರಾಜ್ಯದ ಈ ಜಿಲ್ಲೆಗಳಿಗೆ ಬೆಂಗಳೂರು, ಮೈಸೂರಿನಿಂದ ವಿಶೇಷ ರೈಲು
ಕೆಎಸ್​ಆರ್​ ಬೆಂಗಳೂರು
Follow us
ವಿವೇಕ ಬಿರಾದಾರ
|

Updated on:Mar 23, 2025 | 7:54 AM

ಬೆಂಗಳೂರು, ಮಾರ್ಚ್​ 23: ಯುಗಾದಿ (Ugadi) ಮತ್ತು ರಂಜಾನ್ (Ramzan) ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ ವಲಯವು ಬೆಂಗಳೂರು ಮತ್ತು ಮೈಸೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷೆ ರೈಲುಗಳನ್ನು ಓಡಿಸಲಿದೆ. ಹಾಗೇ, ಚೆನ್ನೈಗೂ ವಿಶೇಷ ಸಂಪರ್ಕ ಕಲ್ಪಿಸಲಿದೆ. ಯಾವ್ಯಾವ ಜಿಲ್ಲೆಗಳಿಗೆ ವಿಶೇಷ ರೈಲು ಇಲ್ಲಿದೆ ಮಾಹಿತಿ.

  • ಬೆಂಗಳೂರು ಟು ಕಲಬುರಗಿ

ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ ಮಾಡಲಿದೆ ಎಂದು ನೈಋತ್ಯ ರೈಲ್ವೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ
Image
ಚಲಿಸುತ್ತಿರುವ ರೈಲಿನಿಂದ ಬೀಳುತ್ತಿದ್ದ ಮಹಿಳೆಯ ರಕ್ಷಣೆ
Image
ಬೆಂಗಳೂರು ಭುವನೇಶ್ವರ ವಿಶೇಷ ರೈಲು ಟ್ರಿಪ್ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ
Image
ಭಾರತದಲ್ಲಿ ವಿಶ್ವದ ಅತಿಶಕ್ತಿಶಾಲಿ ಹೈಡ್ರೋಜನ್ ರೈಲು
Image
ಎಕ್ಸಪ್ರೆಸ್​ ರೈಲು ತುಮಕೂರಿನ ಸಂಪಿಗೆ ರಸ್ತೆ ಮತ್ತು ತಿಪಟೂರಿನಲ್ಲೂ ನಿಲುಗಡೆ
  • ರೈಲು ಸಂಖ್ಯೆ 06519: ಎಎಂವಿಟಿ ಬೆಂಗಳೂರು-ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಮಾರ್ಚ್ 28 ರಂದು ರಾತ್ರಿ 9:15ಕ್ಕೆ ಎಸ್‌ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 07:40ಕ್ಕೆ ಕಲಬುರಗಿ ತಲುಪಲಿದೆ.
  • ರೈಲು ಸಂಖ್ಯೆ 06520: ಕಲಬುರಗಿ-ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ಮಾರ್ಚ್ 29 ರಂದು ಬೆಳಿಗ್ಗೆ 9.35ಕ್ಕೆ, ಕಲಬುರಗಿಯಿಂದ ಹೊರಟು, ಅದೇ ದಿನ ರಾತ್ರಿ 8:00 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ತಲುಪಲಿದೆ.

ಈ ರೈಲು 1-ಎಸಿ ಟು ಟೈರ್, 1-ಎಸಿ ತ್ರಿ ಟೈರ್​, 11- ಸ್ಲೀಪರ್​ ಕ್ಲಾಸ್​, 4 ಸಾಮಾನ್ಯ ದ್ವಿತೀಯ ದರ್ಜೆ ಎಸ್ಎಲ್‌ಆರ್/ಡಿ ಬೋಗಿಗಳು ಸೇರಿದಂತೆ 19 ಬೋಗಿಗಳನ್ನು ಒಳಗೊಂಡಿರುತ್ತದೆ. ಕಾಯ್ದಿರಿಸುವಿಕೆ, ಆಗಮನ ಮತ್ತು ನಿರ್ಗಮನ ಸಮಯ ಮತ್ತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬೈಟ್ಲಿ ಭೇಟಿ ನೀಡಿ ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್​ಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.

  • ಮೈಸೂರು ಟು ಕಾರವಾರ ನಡುವೆ ವಿಶೇಷ ರೈಲು

  • ರೈಲು ಸಂಖ್ಯೆ 06203: ಮೈಸೂರು-ಕಾರವಾರ ವಿಶೇಷ ಎಕ್ಸ್ಪ್ರೆಸ್ ರೈಲು ಮಾರ್ಚ್​ 28ರಂದು ರಾತ್ರಿ 9.35ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಸಂಜೆ 4.15ಕ್ಕೆ, ಕಾರವಾರ ತಲುಪಲಿದೆ.
  • ಪುನಃ ಇದೇ ರೈಲು (06204): ಮಾರ್ಚ್​ 29ರಂದು ರಾತ್ರಿ 11.30ಕ್ಕೆ, ಕಾರವಾರದಿಂದ ಹೊರಟು, ಮರುದಿನ ಸಂಜೆ 4.40ಕ್ಕೆ ಮೈಸೂರು ತಲುಪಲಿದೆ. ಈ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಕುಣಿಗಲ್, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕವುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಟ್ವಿಟರ್ ಪೋಸ್ಟ್​

  • ಬೆಂಗಳೂರು ಟು ಚೆನ್ನೈ ವಿಶೇಷ ರೈಲು

  • ರೈಲು ಸಂಖ್ಯೆ 07319: ಕೆಎಸ್​ಆರ್ ಬೆಂಗಳೂರು-ಡಾ.ಎಂಜಿಆರ್​ ಚೆನ್ನೈ ಸೆಂಟ್ರಲ್​ ವಿಶೇಷ ಎಕ್ಸ್‌ಪ್ರೆಸ್ ರೈಲು ಕೆಎಸ್‌ಆರ್ ಬೆಂಗಳೂರಿನಿಂದ ಮಾರ್ಚ್​ 28 ರಂದು ಬೆಳಿಗ್ಗೆ 08:05ಕ್ಕೆ ಹೊರಟು, ಅದೇ ದಿನ ಮಧ್ಯಾಹ್ನ 2:40ಕ್ಕೆ ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ.
  • ರೈಲು ಸಂಖ್ಯೆ 07320: ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್‌ಆರ್ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಮಾರ್ಚ್​ 28 ರಂದು ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಮಧ್ಯಾಹ್ನ 3.40ಕ್ಕೆ ಹೊರಟು, ಅದೇ ದಿನ ರಾತ್ರಿ 10.50ಕ್ಕೆ ಕೆಎಸ್‌ಆರ್ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ರೈಲು ಕಾಯ್ದಿರಿಸುವಿಕೆ, ಆಗಮನ ಮತ್ತು ನಿರ್ಗಮನ ಸಮಯ ಮತ್ತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್‌ಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.

ಇದನ್ನೂ ಓದಿ: ಬೆಂಗಳೂರು ಜನರಿಗೆ ಸಿಹಿ ಸುದ್ದಿ: 2 ಹೊಸ ರೈಲು ನಿಲ್ದಾಣ ನಿರ್ಮಾಣ!

  • ಚಲಗೇರಿಯಲ್ಲಿ ವಿಶೇಷ ನಿಲುಗಡೆ

ರೈಲು ಸಂಖ್ಯೆ 17391/17392: ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ-ಕೆಎಸ್‌ಆ‌ರ್ ಬೆಂಗಳೂರು ದೈನಂದಿನ ಎಕ್ಸ್ ಪ್ರೆಸ್ ರೈಲುಗಳಿಗೆ ಹರಿಹರ ಮತ್ತು ರಾಣಿಬೆನ್ನೂರು ನಿಲ್ದಾಣಗಳ ನಡುವೆ ಇರುವ ಚಲಗೇರಿ ನಿಲ್ಯಾಣದಲ್ಲಿದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಏಪ್ರಿಲ್ 1, 2025 ರಿಂದ ಜೂನ್ 30ರವರೆಗೆ ಮೂರು ತಿಂಗಳ ಕಾಲ ಮುಂದುವರಿಸಲಾಗುತ್ತಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:50 am, Sun, 23 March 25

ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!