ಬೆಂಗಳೂರು, ಮಾರ್ಚ್ 23: ಯುಗಾದಿ (Ugadi) ಮತ್ತು ರಂಜಾನ್ (Ramzan) ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ ವಲಯವು ಬೆಂಗಳೂರು ಮತ್ತು ಮೈಸೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷೆ ರೈಲುಗಳನ್ನು ಓಡಿಸಲಿದೆ. ಹಾಗೇ, ಚೆನ್ನೈಗೂ ವಿಶೇಷ ಸಂಪರ್ಕ ಕಲ್ಪಿಸಲಿದೆ. ಯಾವ್ಯಾವ ಜಿಲ್ಲೆಗಳಿಗೆ ವಿಶೇಷ ರೈಲು ಇಲ್ಲಿದೆ ಮಾಹಿತಿ.
ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ ಮಾಡಲಿದೆ ಎಂದು ನೈಋತ್ಯ ರೈಲ್ವೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಈ ರೈಲು 1-ಎಸಿ ಟು ಟೈರ್, 1-ಎಸಿ ತ್ರಿ ಟೈರ್, 11- ಸ್ಲೀಪರ್ ಕ್ಲಾಸ್, 4 ಸಾಮಾನ್ಯ ದ್ವಿತೀಯ ದರ್ಜೆ ಎಸ್ಎಲ್‌ಆರ್/ಡಿ ಬೋಗಿಗಳು ಸೇರಿದಂತೆ 19 ಬೋಗಿಗಳನ್ನು ಒಳಗೊಂಡಿರುತ್ತದೆ. ಕಾಯ್ದಿರಿಸುವಿಕೆ, ಆಗಮನ ಮತ್ತು ನಿರ್ಗಮನ ಸಮಯ ಮತ್ತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬೈಟ್ಲಿ ಭೇಟಿ ನೀಡಿ ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್‌ಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.
ಟ್ವಿಟರ್ ಪೋಸ್ಟ್
Kindly note:
To manage the extra rush of passengers during the upcoming #Ugadi and #Ramzan festivals, the Railway Board has approved the operation of a one-trip special express train between Sir M. Visvesvaraya Terminal, Bengaluru and Kalaburagi.#SWRupdates pic.twitter.com/Gv3eTdppRr— South Western Railway (@SWRRLY) March 22, 2025
ರೈಲು ಕಾಯ್ದಿರಿಸುವಿಕೆ, ಆಗಮನ ಮತ್ತು ನಿರ್ಗಮನ ಸಮಯ ಮತ್ತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್‌ಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.
ಇದನ್ನೂ ಓದಿ: ಬೆಂಗಳೂರು ಜನರಿಗೆ ಸಿಹಿ ಸುದ್ದಿ: 2 ಹೊಸ ರೈಲು ನಿಲ್ದಾಣ ನಿರ್ಮಾಣ!
ರೈಲು ಸಂಖ್ಯೆ 17391/17392: ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ-ಕೆಎಸ್‌ಆರ್ ಬೆಂಗಳೂರು ದೈನಂದಿನ ಎಕ್ಸ್ ಪ್ರೆಸ್ ರೈಲುಗಳಿಗೆ ಹರಿಹರ ಮತ್ತು ರಾಣಿಬೆನ್ನೂರು ನಿಲ್ದಾಣಗಳ ನಡುವೆ ಇರುವ ಚಲಗೇರಿ ನಿಲ್ಯಾಣದಲ್ಲಿದ್ದ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಏಪ್ರಿಲ್ 1, 2025 ರಿಂದ ಜೂನ್ 30ರವರೆಗೆ ಮೂರು ತಿಂಗಳ ಕಾಲ ಮುಂದುವರಿಸಲಾಗುತ್ತಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.
Published On - 7:50 am, Sun, 23 March 25