AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್, ತಮ್ಮ‌ ರಕ್ಷಣೆಗೆ ತಾವೇ ನಿರ್ಮಿಸಿಕೊಂಡ ಮೀನುಗಾರರು

ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್, ತಮ್ಮ‌ ರಕ್ಷಣೆಗೆ ತಾವೇ ನಿರ್ಮಿಸಿಕೊಂಡ ಮೀನುಗಾರರು

ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Feb 04, 2026 | 4:29 PM

Share

ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್  (Boat Ambulance) ನಿರ್ಮಾಣವಾಗಿದೆ. ಈ ಹಿಂದೆ ಬೋಟ್ ಆಂಬ್ಯುಲೆನ್ಸ್ ಆರಂಭಿಸುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು. ಆದ್ರೆ, ಇನ್ನು ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಇದೀಗ ಸರ್ಕಾರಕ್ಕೆ ಸೆಡ್ಡು ಹೊಡೆದ ಮೀನುಗಾರರು, ತಮ್ಮ‌ ರಕ್ಷಣೆಗೆ ತಾವೇ ಬೋಟ್ ಆಂಬ್ಯುಲೆನ್ಸ್ ನಿರ್ಮಿಸಿಕೊಂಡಿದ್ದಾರೆ. ಸರ್ಕಾರದ ಯೋಜನೆಗೆ ಕಾಯದೇ ನಾಡದೋಣಿ ಮತ್ತು ಗಿಲ್ ನೆಟ್ ಮೀನುಗಾರರ ಸಂಘದವರು ಮೊದಲ ಬೋಟ್ ಆಂಬುಲೆನ್ಸ್ ನಿರ್ಮಿಸಿದ್ದಾರೆ. ಮಂಗಳೂರಿನ ಉಳ್ಳಾಲ ವಲಯದ ಮೀನುಗಾರರ ಮಾದರಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಮಂಗಳೂರು, (ಫೆಬ್ರವರಿ 04): ಕರಾವಳಿಯಲ್ಲಿ ಮೊದಲ ಬೋಟ್ ಆಂಬ್ಯುಲೆನ್ಸ್  (Boat Ambulance) ನಿರ್ಮಾಣವಾಗಿದೆ. ಈ ಹಿಂದೆ ಬೋಟ್ ಆಂಬ್ಯುಲೆನ್ಸ್ ಆರಂಭಿಸುವ ಬಗ್ಗೆ ಸರ್ಕಾರ ಭರವಸೆ ನೀಡಿತ್ತು. ಆದ್ರೆ, ಇನ್ನು ಕಾರ್ಯರೂಪಕ್ಕೆ ಬಂದಿಲ್ಲ. ಹೀಗಾಗಿ ಇದೀಗ ಸರ್ಕಾರಕ್ಕೆ ಸೆಡ್ಡು ಹೊಡೆದ ಮೀನುಗಾರರು, ತಮ್ಮ‌ ರಕ್ಷಣೆಗೆ ತಾವೇ ಬೋಟ್ ಆಂಬ್ಯುಲೆನ್ಸ್ ನಿರ್ಮಿಸಿಕೊಂಡಿದ್ದಾರೆ. ಸರ್ಕಾರದ ಯೋಜನೆಗೆ ಕಾಯದೇ ನಾಡದೋಣಿ ಮತ್ತು ಗಿಲ್ ನೆಟ್ ಮೀನುಗಾರರ ಸಂಘದವರು ಮೊದಲ ಬೋಟ್ ಆಂಬುಲೆನ್ಸ್ ನಿರ್ಮಿಸಿದ್ದಾರೆ. ಮಂಗಳೂರಿನ ಉಳ್ಳಾಲ ವಲಯದ ಮೀನುಗಾರರ ಮಾದರಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಈ ಬೋಟ್ ಆಂಬ್ಯುಲೆನ್ಸ್ ಮೂಲಕ ಮೀನುಗಾರರ ಜೀವ ರಕ್ಷಣೆ ಕಾರ್ಯ ನಡೆಯಲಿದೆ. ನದಿ, ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ಸಂದರ್ಭ ಅವಘಡ ಸಂಭವಿಸಿದ್ರೆ ತುರ್ತು ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ಬಳಕೆ ಮಾಡಲಾಗುತ್ತೆ. ಇನ್ನು ಸಮುದ್ರದ ಮಧ್ಯೆ ಆರೋಗ್ಯ ಸಮಸ್ಯೆ ಎದುರಾದರೂ ಸಹ ಈ ಬೋಟ್ ಆಂಬ್ಯುಲೆನ್ಸ್‌ ನೆರವಿಗೆ ಬರಲಿದೆ. ಇನ್ನು ಈ ಬೋಟ್ ಆಂಬ್ಯುಲೆನ್ಸ್ ಏನೆಲ್ಲಾ ಇದೆ ಎನ್ನುವ ಮಾಹಿತಿ ವಿಡಿಯೋನಲ್ಲಿ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ