Umesh Katti: ಅರಣ್ಯ ಸಚಿವ ಉಮೇಶ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

| Updated By: ಅಕ್ಷಯ್​ ಪಲ್ಲಮಜಲು​​

Updated on: Sep 07, 2022 | 11:30 AM

ಸಚಿವ ಉಮೇಶ ಕತ್ತಿ (Umesh Katti) ಹೃದಯಾಘಾತದಿಂದ ನಿಧನರಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ (narendra modi) ಅವರಯ ಸಂತಾಪ ಸೂಚಿಸಿದ್ದಾರೆ.

Umesh Katti: ಅರಣ್ಯ ಸಚಿವ ಉಮೇಶ ಕತ್ತಿ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ
PM Modi condoled the demise of Forest Minister Umesh Katti
Follow us on

ಬೆಂಗಳೂರು: ಅರಣ್ಯ ಸಚಿವ ಉಮೇಶ ಕತ್ತಿ (Umesh Katti) ಹೃದಯಾಘಾತದಿಂದ ನಿಧನರಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ (narendra modi) ಅವರಯ ಸಂತಾಪ ಸೂಚಿಸಿದ್ದಾರೆ. ಉಮೇಶ ಕತ್ತಿ  ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬಕ್ಕೆ ಮತ್ತು ಕಾರ್ಯಕರ್ತರಿಗೆ ದುಃಖ ತಡೆದುಕೊಳ್ಳವ ಶಕ್ತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಂತಾಪ

ಜನಪ್ರಿಯ ಶಾಸಕರು, ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಶ್ರೀ ಉಮೇಶ್​ ಕತ್ತಿ ಅವರು ಹಠಾತ್ ವಿಧಿವಶರಾದ ಸುದ್ದಿ ತಿಳಿದು ಅತ್ಯಂತ ದುಃಖ ಮತ್ತು ಆಘಾತವಾಗಿದೆ. ಸುದೀರ್ಘ ಕಾಲ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿದ್ದ ಹಿರಿಯ ನಾಯಕ ನಮ್ಮನ್ನಗಲಿರುವುದು ರಾಜ್ಯಕ್ಕೆ ದೊಡ್ದ ನಷ್ಟ ಎಂದು ಟ್ವೀಟ್ ಮಾಡಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಸಂತಾಪ

ಕರ್ನಾಟಕ ಸಚಿವರಾದ ಶ್ರೀ ಉಮೇಶ ಕತ್ತಿಯವರ ನಿಧನದಿಂದ ದುಃಖವಾಗಿದೆ. ರಾಜ್ಯಕ್ಕೆ ತುಂಬಲಾರದ ನಷ್ಟ. ಅವರ ಸದ್ಗತಿಗಾಗಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸಚಿವ ಭಗವಂತ್ ಖೂಬಾ ಸಂತಾಪ

ಆತ್ಮೀಯರಾಗಿದ್ದ ಹಿರಿಯ ಸಚಿವರಾದ ಶ್ರೀ ಉಮೇಶ್ ಕತ್ತಿಯವರು ನಿಧನರಾದ ಸುದ್ದಿ ತಿಳಿದು ತುಂಬಾ ಆಘಾತವಾಗಿದೆ. ಸದಾ ಕನ್ನಡಿಗರು ಹಾಗೂ ಕರ್ನಾಟಕದ ಕುರಿತು ಚಿಂತಿಸುತ್ತಿದ್ದ ಹಾಗೂ ನಾಡಿನ ಏಳಿಗೆಗಾಗಿ ಶ್ರಮಿಸುತ್ತಿದ್ದ ಅವರು ತುಂಬ ಬೇಗ ನಮ್ಮನ್ನು ಅಗಲಿದ್ದಾರೆ.

ಸಚಿವ ಶ್ರೀರಾಮುಲು ಸಂತಾಪ

ನನ್ನ ಸಂಪುಟದ ಸಹೋದ್ಯೋಗಿ ಹಾಗೂ ಹಿರಿಯ ಸಚಿವರಾಗಿದ್ದ ಶ್ರೀಯುತ ಉಮೇಶ್ ವಿ.ಕತ್ತಿ ಅವರ ಹಠಾತ್ ನಿಧನದ ಸುದ್ದಿ ಕೇಳಿ ನಿಜಕ್ಕೂ ದಿಗ್ರ್ಭಂತನಾಗಿದ್ದೇನೆ.! ಈ ಆಘಾತಕಾರಿ ಸುದ್ದಿ ಕೇಳಿ ನನಗೆ ಯಾವ ರೀತಿ ದುಃಖ ವ್ಯಕ್ತಪಡಿಸಬೇಕು ಎಂಬುದೇ ತೋಚದಾಗಿದೆ. ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುವೆ ಎಂದು ಟ್ವೀಟ್ ಮಾಡಿದ್ದಾರೆ.

ಪೇಜಾವರ ಶ್ರೀ ಸಂತಾಪ 

ಸಚಿವ ಉಮೇಶ್ ಕತ್ತಿ ನಿಧನಕ್ಕೆ ಪೇಜಾವರ ಶ್ರೀ ಸಂತಾಪ ಸೂಚಿಸಿದ್ದಾರೆ. ಸಚಿವ ಉಮೇಶ್ ಕತ್ತಿ ಹಠಾತ್ ನಿಧನ ದುಃಖ ತಂದಿದೆ. ಉಮೇಶ್​ ಕತ್ತಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುವೆ ಎಂದು ಹೇಳಿದ್ದಾರೆ. ಕುಟುಂಬಸ್ಥರಿಗೆ ದುಃಖ ಸಹಿಸುವ ಶಕ್ತಿ ದೇವರು ನೀಡಲಿ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸಂತಾಪ 

ಕರ್ನಾಟಕ ಸರ್ಕಾರದ ಹಿರಿಯ ಸಚಿವರು ಹಾಗು ಪಕ್ಷದ ನಾಯಕರಾದ ಶ್ರೀ ಉಮೇಶ್ ಕತ್ತಿಯವರ ಅಕಾಲಿಕ ಸಾವು ಅತ್ಯಂತ ದುಃಖದ ವಿಷಯ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಂತಾಪ

ಪಕ್ಷದ ಹಿರಿಯ ನಾಯಕರು, ಕರ್ನಾಟಕ ರಾಜ್ಯದ ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವರೂ, ಆಪ್ತರಾದ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನ ಅತೀವ ದುಖವನ್ನುಂಟು ಮಾಡಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಅವರ ನಿಧನದ ದುಃಖವನ್ನು ಸಹಿಸುವ ಶಕ್ತಿಯನ್ನು ಬಂಧು ಮಿತ್ರರಿಗೆ ನೀಡಲಿ ಎಂದು ಪ್ರಾರ್ಥನೆ ಎಂದು ಶೋಭಾ ಕರಂದ್ಲಾಜೆ ಸಂತಾಪ ತಿಳಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಸಂತಾಪ

ಸಂಪುಟ ಸಹೋದ್ಯೋಗಿ, ಅರಣ್ಯ ಸಚಿವರಾಗಿದ್ದ ಶ್ರೀ ಉಮೇಶ್ ಕತ್ತಿ ಯವರ ಧಿಡೀರ್ ನಿಧನದ ಸುದ್ದಿ ತಿಳಿದು, ದಿಗ್ಭ್ರಮೆ ಗೊಂಡಿದ್ದೇನೆ. ಕತ್ತಿ ಯವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬ ವರ್ಗಕ್ಕೆ, ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ, ಎಂದು ಪ್ರಾರ್ಥಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸಂತಾಪ ಸೂಚಿಸಿದ್ದಾರೆ.

ಸಚಿವ ವಿ. ಸೋಮಣ್ಣ ಸಂತಾಪ

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ, ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ, ಹೃದಯಾಘಾತದಿಂದ ನಿಧನರಾದ ರಾಜ್ಯ ಅರಣ್ಯ ಮತ್ತು ಆಹಾರ ಖಾತೆ ಸಚಿವರಾದ ಶ್ರೀ ಉಮೇಶ್ ಕತ್ತಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು, ಅವರ ಕುಟುಂಬದವರಿಗೆ ಸಾಂತ್ವನ ಹೇಳಲಾಯಿತು ಎಂದು ವಿ. ಸೋಮಣ್ಣ ಸಂತಾಪ ತಿಳಿಸಿದ್ದಾರೆ.

 

Published On - 10:00 am, Wed, 7 September 22