AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯ ಪಡಿತರಕ್ಕೆ ಯಾವುದೇ ಶುಲ್ಕ ಪಡೆಯುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ: ಸಚಿವ ಉಮೇಶ್ ಕತ್ತಿ

3 ವರ್ಷಗಳಲ್ಲಿ 2,28,188 ಅನರ್ಹ ಬಿಪಿಎಲ್​ ಕಾರ್ಡ್​ಗಳನ್ನು ರದ್ದು ಮಾಡಲಾಗಿದೆ. ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ಮಿತಿ ಇದ್ದರೆ, ಅಂತಹವರಿಗೆ ಬಿಪಿಎಲ್ ಕಾರ್ಡ್‌ಗಳನ್ನು ಕೊಡಲಾಗುತ್ತಿದೆ. ಹಿಂದಿನ ಸರ್ಕಾರ ಆದಾಯದ ಮಿತಿ ಹೇರಿದೆ ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಸದ್ಯ ಪಡಿತರಕ್ಕೆ ಯಾವುದೇ ಶುಲ್ಕ ಪಡೆಯುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ: ಸಚಿವ ಉಮೇಶ್ ಕತ್ತಿ
ಉಮೇಶ್​ ಕತ್ತಿ
preethi shettigar
|

Updated on: Mar 09, 2021 | 3:21 PM

Share

ಬೆಂಗಳೂರು: ರಾಜ್ಯದಲ್ಲಿ ಒಟ್ಟು 1,27,74,496 ಪಡಿತರ ಕಾರ್ಡ್‌ಗಳಿವೆ, ಅಂತ್ಯೋದಯ ಕಾರ್ಡ್‌ಗಳ ಸಂಖ್ಯೆ 10,90,951 ಆದ್ಯತಾ ಪಡಿತರ ಚೀಟಿಗಳ ಸಂಖ್ಯೆ 1,16,83,545 ಆದ್ಯತಾ ಪಡಿತರ ಕಾರ್ಡ್‌ಗೆ 5ಕೆ.ಜಿ ಅಕ್ಕಿ, 2 ಕೆ.ಜಿ ಗೋಧಿ ನೀಡಲಾಗುತ್ತಿದೆ. ಅಂತ್ಯೋದಯ ಕಾರ್ಡ್‌ಗೆ 35 ಕೆ.ಜಿ ಅಕ್ಕಿ ಕೊಡಲಾಗುತ್ತಿದೆ ಎಂದು ವಿಧಾನಪರಿಷತ್‌ನಲ್ಲಿ ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ.

3 ವರ್ಷಗಳಲ್ಲಿ 2,28,188 ಅನರ್ಹ ಬಿಪಿಎಲ್​ ಕಾರ್ಡ್​ಗಳನ್ನು ರದ್ದು ಮಾಡಲಾಗಿದೆ. ಕುಟುಂಬದ ವಾರ್ಷಿಕ ಆದಾಯ ₹1.20 ಲಕ್ಷ ಮಿತಿ ಇದ್ದರೆ, ಅಂತಹವರಿಗೆ ಬಿಪಿಎಲ್ ಕಾರ್ಡ್‌ಗಳನ್ನು ಕೊಡಲಾಗುತ್ತಿದೆ. ಹಿಂದಿನ ಸರ್ಕಾರ ಆದಾಯದ ಮಿತಿ ಹೇರಿದೆ ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಇದನ್ನೂ ಓದಿ:Food Department website: ಆಹಾರ ಇಲಾಖೆಯ ವೆಬ್​ಸೈಟ್​ ಹ್ಯಾಕ್ ಮಾಡಿ ಪಡಿತರ ಲೂಟಿ; ನಾಲ್ವರು ಜೈಲಿಗೆ

ಸದ್ಯ ಪಡಿತರಕ್ಕೆ ಯಾವುದೇ ಶುಲ್ಕ ಪಡೆಯುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಈಗ ಕೊಡುತ್ತಿರುವಂತೆ ಉಚಿತ ರೇಷನ್ ಕೊಡಲಾಗುತ್ತದೆ. ಮುಂದಿನ ದಿನಗಳಲ್ಲಿ ಆದಾಯ ಮಿತಿ ಪರಿಷ್ಕರಣೆ ಮಾಡಿ ರೇಷನ್ ಕಾರ್ಡ್ ಜಾರ್ಜ್ ಮಾಡಬೇಕಾ? ಬೇಡವಾ? ಎನ್ನುವ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಸದಸ್ಯ ಪಿ.ಆರ್.ರಮೇಶ್ ಪ್ರಶ್ನೆಗೆ ವಿಧಾನಪರಿಷತ್‌ನಲ್ಲಿ ಆಹಾರ ಸಚಿವ ಉಮೇಶ್ ಕತ್ತಿ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’

Follow Us
preethi shettigar
preethi shettigar
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ