ಬೆಂಗಳೂರು: ರಾಜ್ಯದಲ್ಲಿ ಒಟ್ಟು 1,27,74,496 ಪಡಿತರ ಕಾರ್ಡ್‌ಗಳಿವೆ, ಅಂತ್ಯೋದಯ ಕಾರ್ಡ್‌ಗಳ ಸಂಖ್ಯೆ 10,90,951 ಆದ್ಯತಾ ಪಡಿತರ ಚೀಟಿಗಳ ಸಂಖ್ಯೆ 1,16,83,545 ಆದ್ಯತಾ ಪಡಿತರ ಕಾರ್ಡ್‌ಗೆ 5ಕೆ.ಜಿ ಅಕ್ಕಿ, 2 ಕೆ.ಜಿ ಗೋಧಿ ನೀಡಲಾಗುತ್ತಿದೆ. ಅಂತ್ಯೋದಯ ಕಾರ್ಡ್‌ಗೆ 35 ಕೆ.ಜಿ ಅಕ್ಕಿ ಕೊಡಲಾಗುತ್ತಿದೆ ಎಂದು ವಿಧಾನಪರಿಷತ್‌ನಲ್ಲಿ ಆಹಾರ ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ.
3 ವರ್ಷಗಳಲ್ಲಿ 2,28,188 ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲಾಗಿದೆ. ಕುಟುಂಬದ ವಾರ್ಷಿಕ ಆದಾಯ ₹1.20 ಲಕ್ಷ ಮಿತಿ ಇದ್ದರೆ, ಅಂತಹವರಿಗೆ ಬಿಪಿಎಲ್ ಕಾರ್ಡ್‌ಗಳನ್ನು ಕೊಡಲಾಗುತ್ತಿದೆ. ಹಿಂದಿನ ಸರ್ಕಾರ ಆದಾಯದ ಮಿತಿ ಹೇರಿದೆ ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಇದನ್ನೂ ಓದಿ:Food Department website: ಆಹಾರ ಇಲಾಖೆಯ ವೆಬ್ಸೈಟ್ ಹ್ಯಾಕ್ ಮಾಡಿ ಪಡಿತರ ಲೂಟಿ; ನಾಲ್ವರು ಜೈಲಿಗೆ
ಸದ್ಯ ಪಡಿತರಕ್ಕೆ ಯಾವುದೇ ಶುಲ್ಕ ಪಡೆಯುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಈಗ ಕೊಡುತ್ತಿರುವಂತೆ ಉಚಿತ ರೇಷನ್ ಕೊಡಲಾಗುತ್ತದೆ. ಮುಂದಿನ ದಿನಗಳಲ್ಲಿ ಆದಾಯ ಮಿತಿ ಪರಿಷ್ಕರಣೆ ಮಾಡಿ ರೇಷನ್ ಕಾರ್ಡ್ ಜಾರ್ಜ್ ಮಾಡಬೇಕಾ? ಬೇಡವಾ? ಎನ್ನುವ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಸದಸ್ಯ ಪಿ.ಆರ್.ರಮೇಶ್ ಪ್ರಶ್ನೆಗೆ ವಿಧಾನಪರಿಷತ್‌ನಲ್ಲಿ ಆಹಾರ ಸಚಿವ ಉಮೇಶ್ ಕತ್ತಿ ಉತ್ತರ ನೀಡಿದ್ದಾರೆ.
ಇದನ್ನೂ ಓದಿ: ‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್ ದರ್ಬಾರ್ ನಡೆಸಿ’