ಮೇಕೆದಾಟು ಪಾದಯಾತ್ರೆ ಹಿನ್ನೆಲೆ ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್ ಅಳವಡಿಕೆ; ತೆರವುಗೊಳಿಸುವಂತೆ ಬಿಬಿಎಂಪಿ ಸೂಚನೆ
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ 2.O 3ನೇ ದಿನಕ್ಕೆ ಕಾಲಿಟ್ಟಿದೆ. ನಿನ್ನೆ ಕೆಂಗೇರಿಗೆ ತಲುಪಿರುವ ಕಾಂಗ್ರೆಸ್ ಪಾದಯಾತ್ರೆ, ಇಂದು ಬೆಳಗ್ಗೆ 9 ಗಂಟೆಗೆ ಪೂರ್ಣಿಮ ಕನ್ವೆಂಷನ್ ಹಾಲ್‌ನಿಂದ ಹೊರಟು ಬಿಟಿಎಂ ಲೇಔಟ್‌ಗೆ ತಲುಪಲಿದೆ.
ಬೆಂಗಳೂರು: ಕಾಂಗ್ರೆಸ್ ಪಾದಯಾತ್ರೆ ಹಿನ್ನಲೆ ನಗರದಲ್ಲಿ ಫ್ಲೆಕ್ಸ್ ( Flex )ಅಳವಡಿಕೆ ಮಾಡಲಾಗಿದೆ. ಬೆಂಗಳೂರಿನ ಆರ್ ಆರ್ ನಗರ, ಕೆಂಗೇರಿ,ಮೈಸೂರು ರಸ್ತೆ, ನಾಯಂಡಹಳ್ಳಿ ಸೇರಿದಂತೆ ಪಾದಯಾತ್ರೆ ಸಾಗುವ ಮಾರ್ಗದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್‌ಗಳು, ಬಂಟಿಂಗ್ ಅಳವಡಿಕೆ ಮಾಡಲಾಗಿದೆ. ಫ್ಲೆಕ್ಸ್ ಬ್ಯಾನರ್ ತೆರವು ಮಾಡಲು ಬಿಬಿಎಂಪಿ ಪೊಲೀಸ್ ನೆರವು ಕೇಳಿದೆ. ಪೊಲೀಸ್ ಅಧಿಕಾರಿಗಳ ಜೊತೆಗೂಡಿ ಬಿಬಿಎಂಪಿ ಮುಖ್ಯ ಆಯುಕ್ತರಿಂದ ಫ್ಲೆಕ್ಸ್ ಗಳನ್ನ ತೆರವು ಮಾಡಲು ಸೂಚನೆ ನೀಡಲಾಗಿದೆ. ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ನಡೆಯುತ್ತಿದೆ. ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ 2.O 3ನೇ ದಿನಕ್ಕೆ ಕಾಲಿಟ್ಟಿದೆ. ನಿನ್ನೆ ಕೆಂಗೇರಿಗೆ ತಲುಪಿರುವ ಕಾಂಗ್ರೆಸ್ ಪಾದಯಾತ್ರೆ, ಬೆಳಗ್ಗೆ 9 ಗಂಟೆಗೆ ಪೂರ್ಣಿಮ ಕನ್ವೆಂಷನ್ ಹಾಲ್‌ನಿಂದ ಹೊರಡಲಿದೆ. ಬೆಂಗಳೂರಿನಲ್ಲಿ ಇಂದು ಕೆಂಗೇರಿಯಿಂದ ಬಿಟಿಎಂ ಲೇಔಟ್‌ವರೆಗೆ ಕಾಂಗ್ರೆಸ್ ಪಾದಯಾತ್ರೆ ನಡೆಯಲಿದ್ದು, ಬೆಂಗಳೂರಿನಲ್ಲಿ ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜ್ಞಾನಭಾರತಿ ಮೆಟ್ರೋ ನಿಲ್ದಾಣ, ನಾಯಂಡಹಳ್ಳಿ, ಕತ್ರಿಗುಪ್ಪೆ ಮುಖ್ಯರಸ್ತೆ ಜಂಕ್ಷನ್, ಕದಿರೇನಹಳ್ಳಿ ಜಂಕ್ಷನ್, ವೆಂಕಟಾದ್ರಿ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನದ ಊಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಮತ್ತೇ ಸಂಜೆ 4-00 ಗಂಟೆಗೆ ಪಾದಯಾತ್ರೆ ಆರಂಭಗೊಳ್ಳಲಿದ್ದು, ಬನಶಂಕರಿ ದೇವಾಲಯ, ಜಯದೇವ ಆಸ್ಪತ್ರೆ, ಅದೈತ್ ಪೆಟ್ರೋಲ್ ಬಂಕ್, ಬಿಟಿಎಂ ಲೇಔಟ್‌ನಲ್ಲಿ ಇಂದು ರಾತ್ರಿ ವಾಸ್ತವ್ಯ ಮಾಡಲಿದೆ.
ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸಿರುವ ಪಾದಯಾತ್ರೆ ಬೆಂಗಳೂರಿಗೆ ಪ್ರವೇಶಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಕಮೀಶನರ್ ಅನುಮತಿ ನಿರಾಕರಿಸಿದ್ದು ಮತ್ತು ರಾಮನಗರ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿ ನಿಷೇದಾಜ್ಞೆ ಹೇರಿದ್ದರ ಬಗ್ಗೆ ಡಿಕೆಶಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಪಾದಯಾತ್ರೆ ಮುಂದುವರಿಸುತ್ತಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಗಮನಕ್ಕೆ ತರಲಾಗಿದೆ. ಅವರು ಟ್ರಾಫಿಕ್ ಗಮನದಲ್ಲಿಟ್ಟುಕೊಂಡು ಪಾದಯಾತ್ರೆ ಮಾಡಿ ಎಂದು ತಮ್ಮ ಸಮ್ಮತಿ ಸೂಚಿಸಿದ್ದಾರೆ. ಕೋವಿಡ್-19 ಸಂಬಂಧಿಸಿದ ಎಲ್ಲ ನಿಯಮಾವಳಿಗಳನ್ನು ಪಾಲಿಸಲಾಗುವುದು ಮತ್ತು ಹೆಚ್ಚು ಜನಜಂಗುಳಿಯಾಗದ ಹಾಗೆ ಎಚ್ಚರವಹಿಸಲಾಗುವುದು ಅಂತ ಅವರಿಗೆ ಭರವಸೆ ನೀಡಿಯೇ ಎರಡನೇ ಹಂತದ ಪಾದಯಾತ್ರೆಯನ್ನು ಆರಂಭಿಸಲಾಗಿದೆ ಎಂದು ಶಿವಕುಮಾರ ಹೇಳಿದ್ದಾರೆ.
ಮುಖ್ಯಮಂತ್ರಿಗಳ ಬಜೆಟ್ ಮಂಡನೆಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ನಮ್ಮ ಪಾದಯಾತ್ರೆಯನ್ನು ಎರಡು ದಿನ ಮೊಟಕುಗೊಳಿಸಿದ್ದೇವೆ. ನಮ್ಮಿಂದಾಗುವ ಎಲ್ಲ ಸಹಕಾರವನ್ನು ನಾವು ನೀಡುತ್ತಿದ್ದೇವೆ. ಮುಖ್ಯಮಂತ್ರಿಗಳು ಸಹ ತಮ್ಮ ಅಧಿಕಾರಿಗಳಿಗೆ ಸೂಚಿಸಿರುವವುದಾಗಿ ಹೇಳಿದ್ದಾರೆ. ಆದರೆ, ನಮ್ಮ ಪಾದಯಾತ್ರೆ ಶುರುವಾದ ಕೂಡಲೇ ಇವರು ಹೊಸ ನಿಯಮಗಳನ್ನು ಜಾರಿಗೆ ತರುತ್ತಾರೆ. ಹಾಗಾದರೆ, ಕೊವಿಡ್ ನಿಯಮಗಳನ್ನು ಉಲ್ಲಂಘಿಸಿದ ಈಶ್ವರಪ್ಪ ಮತ್ತು ರಾಘವೇಂದ್ರನನ್ನು ಇವರು ಯಾಕೆ ಬಂಧಿಸಲಿಲ್ಲ, ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಯಾಕೆ? ಅವರ ವಿರುದ್ಧ ಯಾಕಿನ್ನೂ ಎಫ್ ಐ ಆರ್ ದಾಖಲಿಸಿಲ್ಲ? ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ವಿರುದ್ಧ ಯಾಕೆ ಕ್ರಮ ತೆಗೆದುಕೊಂಡಿಲ್ಲ?’ ಎಂದು ಶಿವಕುಮಾರ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:
Adipurush: ‘ಆದಿಪುರುಷ್’ ಚಿತ್ರತಂಡದಿಂದ ಬಿಗ್ ಅಪ್ಡೇಟ್; ₹ 400 ಕೋಟಿ ಬಜೆಟ್ನ ಚಿತ್ರ ತೆರೆಗೆ ಬರೋದು ಯಾವಾಗ?