ಬೆಂಗಳೂರು: ಮುಸ್ಲಿಂ ಅರ್ಜಿದಾರರಿಗೆ ವಿವಾಹ ಪ್ರಮಾಣಪತ್ರ ನೀಡಲು ವಕ್ಫ್ ಮಂಡಳಿಗೆ ಅಧಿಕಾರ ನೀಡುವ ಸರ್ಕಾರದ ಆದೇಶವು ಕಾನೂನಿನಲ್ಲಿ ಕೇಳರಿಯದ ವಿಷಯವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಇಂದು ಮೌಖಿಕವಾಗಿ ಪ್ರತಿಕ್ರಿಯೆ ನೀಡಿದೆ. ಈ ಆದೇಶವನ್ನು ಪ್ರಶ್ನಿಸಿ ಎ. ಆಲಂ ಪಾಷಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ ಅರವಿಂದ್ ಅವರಿದ್ದ ವಿಭಾಗೀಯ ಪೀಠ, ಆಕ್ಷೇಪಣೆಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.
ಸೆಪ್ಟೆಂಬರ್ 30ರಂದು ಮದುವೆ ಪ್ರಮಾಣಪತ್ರ ನೀಡಲು ವಕ್ಫ್ ಮಂಡಳಿಗೆ ಅಧಿಕಾರ ನೀಡುವ ಆದೇಶವು ಕಾನೂನಿನಲ್ಲಿ ಪ್ರಸ್ತಾಪವಾಗದ ವಿಷಯವಾಗಿದೆ. ವಕ್ಫ್ ಕಾಯ್ದೆಯಡಿ ಪ್ರಮಾಣಪತ್ರಗಳನ್ನು ನೀಡುವ ಅಧಿಕಾರವನ್ನು ನಮಗೆ ತೋರಿಸಿ ಎಂದು ನ್ಯಾಯಪೀಠವು ಸೂಚಿಸಿದೆ.
ಇದನ್ನೂ ಓದಿ: Karnataka Rains: ಕರ್ನಾಟಕದ ಈ 5 ಜಿಲ್ಲೆಗಳಲ್ಲಿ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್
ಸರ್ಕಾರದ ಅಲ್ಪಸಂಖ್ಯಾತ, ವಕ್ಫ್ ಮತ್ತು ಹಜ್ ಇಲಾಖೆಯ ಅಧೀನ ಕಾರ್ಯದರ್ಶಿಯವರ ಕೈಯಲ್ಲಿ ಸೆಪ್ಟೆಂಬರ್ 2023ರ 30ರಂದು ಹೊರಡಿಸಲಾದ ಸರ್ಕಾರಿ ಆದೇಶವು ವಕ್ಫ್ ಕಾಯಿದೆ, 1995ರಲ್ಲಿ ಒಳಗೊಂಡಿರುವ ನಿಬಂಧನೆಗಳಿಗೆ ಅಸಮಂಜಸವಾಗಿದೆ ಎಂದು ಘೋಷಿಸಲು ಮನವಿ ಮಾಡಲಾಗಿತ್ತು ಎಂದು ಲೈವ್ ಲಾ ವರದಿ ಮಾಡಿದೆ.
ರಾಜ್ಯ ಸರ್ಕಾರವು ತನ್ನ ಆಕ್ಷೇಪಣೆಗಳನ್ನು ಸಲ್ಲಿಸಲು ಎರಡು ವಾರಗಳ ಕಾಲಾವಕಾಶ ಕೋರಿದಾಗ ಹೈಕೋರ್ಟ್ ಆ ಮನವಿಯನ್ನು ಪುರಸ್ಕರಿಸದೆ ನವೆಂಬರ್ 21ಕ್ಕೆ ವಿಚಾರಣೆಯನ್ನು ಮುಂದೂಡಿತು.
ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ