AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜೋಶಿ ಕಿಡಿ

ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜಗಾರ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ (VB G RAM G) ಮಸೂದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನೆ ನಡೆಸಿದೆ. ಇದಕ್ಕೆ ಬಿಜೆಪಿ ನಾಯಕರು ಸಹ ವಿಬಿಜಿ ರಾಮ್ ಜಿ ಎಂದು ಹೆಸರು ಬದಲಾವಣೆ ಮಾಡಿದ್ದಕ್ಕೆ ಸರ್ಮಥಿಸಿಕೊಳ್ಳುತ್ತಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜೋಶಿ ಕಿಡಿ
Pralhad Joshi
ರಮೇಶ್ ಬಿ. ಜವಳಗೇರಾ
|

Updated on:Jan 04, 2026 | 5:55 PM

Share

ಹುಬ್ಬಳ್ಳಿ, (ಜನವರಿ 04) : ವಿಬಿಜಿ ರಾಮ್ ಜಿ (ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ) ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಾ ರಾಜ್ಯದ ಕೂಲಿ ಕಾರ್ಮಿಕರ ದಾರಿತಪ್ಪಿಸುತ್ತಿದೆ. ನರೇಗಾ ಯೋಜನೆಯನ್ನು ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ಎಂದು ಪರಿವರ್ತನೆಗೊಳಿಸಲಾಗಿದ್ದು, ಇದರಲ್ಲಿಯೂ ಪ್ರತಿಪಕ್ಷದವರು ರಾಜಕೀಯ ಮಾಡುತ್ತಿರುವುದು ಅವರ ಮೌಢ್ಯವನ್ನು ತೋರಿಸುತ್ತದೆ. ಯೋಜನೆ ಪಾರದರ್ಶಕವಾಗಿ ಮತ್ತು ಸಮರ್ಥವಾಗಿ ಜಾರಿಯಾಗುವುದನ್ನು ಸಹಿಸದ ಪ್ರತಿಪಕ್ಷಗಳು ಈ ಯೋಜನೆಯ ಬಗ್ಗೆ ಸುಳ್ಳು ವದಂತಿಗಳನ್ನು ಹರಡುತ್ತಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (pralhad joshi) ವಾಗ್ದಾಳಿ ನಡೆಸಿದ್ದಾರೆ.

ನರೇಗಾ ಯೋಜನೆಯಲ್ಲಿ ಪ್ರತಿವರ್ಷ ನೂರು ದಿನಗಳ ಉದ್ಯೋಗ ಖಾತರಿಯಿತ್ತು . ಈಗ 125 ದಿನಗಳಿಗೆ ಹೆಚ್ಚಳ ಮಾಡಲಾಗಿದೆ. ಇದರಿಂದ ಗ್ರಾಮೀಣ ಜನರಿಗೆ ಉದ್ಯೋಗವಕಾಶದ ಭರವಸೆಯೊಂದಿಗೆ ಆದಾಯದ ಭದ್ರತೆಯು ಹೆಚ್ಚಾಗಲಿದೆ (ಪ್ರತಿದಿನ ಕೂಲಿ 370 ರೂ ಆಗಿದೆ). ಮುಂದೆಯೂ ಆಯಾ ಗ್ರಾಮ ಪಂಚಾಯತಗಳೇ ಯೋಜನೆಯ ಕೇಂದ್ರವಾಗಿರಲಿದೆ. ಆದರೆ ಇದನ್ನು ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತದೆ ಎಂಬ ಭೀತಿಯನ್ನು ಕಾಂಗ್ರೆಸ್ ಮೂಡಿಸುತ್ತಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ರಾಹುಲ್ ಗಾಂಧಿ, ಸಿದ್ದರಾಮಯ್ಯ ಡ್ರಾಮಾ ಬಿಟ್ಟು ವಾಸ್ತವತೆ ಒಪ್ಪಿಕೊಳ್ಳಲಿ; ಪ್ರಲ್ಹಾದ್ ಜೋಶಿ ತಿರುಗೇಟು

ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲ ಮಾಡಿಕೊಡಲು ವರ್ಷದಲ್ಲಿ 60 ದಿನಗಳ ಬಿಡುವು ನೀಡಲಾಗಿದೆ. ಇಂತಹ ರೈತ ಸ್ನೇಹಿ ನಿಯಮಕ್ಕೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕೃಷಿ ವಿರೋಧಿ ನೀತಿ ಅನುಸರಿಸುತ್ತಿದೆ. ಹಿಂದೆ ಕೂಲಿಕಾರರ ಹೆಸರು ಹೇಳಿ ನರೇಗಾ ಯೋಜನೆ ದುರ್ಬಳಕೆ ಮಾಡಲಾಗುತ್ತಿತ್ತು. ಅದಕ್ಕಾಗಿ ಬಯೋಮೆಟ್ರಿಕ್ ತಂತ್ರಜ್ಞಾನ ಬಳಕೆ ಕಡ್ಡಾಯ ಮಾಡಲಾಗಿದೆ. ರಾಜ್ಯ ಸರ್ಕಾರಗಳು ಅನಗತ್ಯ ವೆಚ್ಚ ಕಡಿಮೆ ಮಾಡಲು ಭ್ರಷ್ಟಾಚಾರಕ್ಕೆ ಕಡಿವಾಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ 60:40 ಅನುಪಾತದಲ್ಲಿ ನಿಗದಿ ಮಾಡಲಾಗಿದೆ ಎಂದು ಹೇಳಿದರು

ಸರ್ಕಾರದ ಆಡಳಿತಾತ್ಮಕ ಹಿತದೃಷ್ಟಿಯಿಂದ ಮತ್ತು ಕಾಲಾನುಕಾಲಕ್ಕೆ ಯೋಜನೆಗಳ್ಳಲ್ಲಿ ಪಾರದರ್ಶಕತೆ ಮತ್ತು ಪರಿಣಾಮ ತರುವ ನಿಟ್ಟಿನಲ್ಲಿ ಕೆಲ ಯೋಜನೆಗಳಲ್ಲಿ ಅಗತ್ಯ ಪರಿಷ್ಕರಣೆ ತರುವುದು ಅವಶ್ಯವಾಗಿರುತ್ತದೆ. ಈ ಬದಲಾವಣೆಯ ಮುಖ್ಯ ಉದ್ದೇಶ ಜನರ ಜೀವನೋಪಾಯವನ್ನು ಬಲಪಡಿಸುವ ಕಲ್ಯಾಣ ಮತ್ತು ಮೂಲ ಸೌಕರ್ಯ ಅಭಿವೃದ್ಧಿಇವೆರಡನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕಿದೆ. ಏಕೆಂದರೆ ಇವೆರೆಡೂ ಒಂದಕ್ಕೊಂದು ಪೂರಕ ಮತ್ತು ಅನಿವಾರ್ಯ ಎಂದರು.

MGNAREGA ಯೋಜನೆಯು ಬೇಡಿಕೆ ಆಧಾರಿತ (Demand Driven Scheme) ಯೋಜನೆಯಾಗಿತ್ತು. ಆದರೆ ಇದು Off the record Target based scheme ಆಗಿ ಪರಿವರ್ತಿತವಾಗಿತ್ತು. ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಇದ್ದ ಅತಿ ದೊಡ್ಡ ಸಮಸ್ಯೆ ಎಂದರೆ ಸೂಕ್ತ ಸಮಯದಲ್ಲಿ ಕೂಲಿ ಮತ್ತು ಸಾಮಗ್ರಿ ವೆಚ್ಚದ ಪಾವತಿ (Wage & material payment). ಹೊಸ ಪರಿಷ್ಕೃತ ಯೋಜನೆಯಡಿ Centralized payment system ಇರುವುದರಿಂದ ಈ ಮೊದಲು ಇದ್ದ ಎಲ್ಲಾ ಗೊಂದಲಗಳಿಗೆ ಫುಲ್ ಸ್ಟಾಪ್ ಬೀಳಲಿದೆ ಎಂದೂ ಸಚಿವ ಜೋಶಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Sun, 4 January 26

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ