ಸಚಿವ ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ನಿರ್ಬಂಧ: ಕಾರಣ..!
ವಿದೇಶ ಪ್ರವಾಸದಲ್ಲಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಪ್ಯಾರಿಸ್ (Paris) ಪ್ರವಾಸ ಮುಗಿಸಿ ಅಮೆರಿಕಗೆ (USA) ತೆರಳಬೇಕಿದ್ದ ಸಚಿವ ಪ್ರಿಯಾಂಕ್ ಖರ್ಗೆಗೆ ಕ್ಲಿಯರೆನ್ಸ್ ಸಿಕ್ಕಿಲ್ಲ. ಇದರಿಂದ ಅಮೆರಿಕದಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿದ್ದ ಪ್ರಿಯಾಂಕ್ ಖರ್ಗೆಗೆ ನಿರಾಸೆಯಾಗಿದೆ.

ಬೆಂಗಳೂರು, (ಜೂನ್ 17): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆಗೆ (Priyank Kharge) ಕೇಂದ್ರ ಸರ್ಕಾರ ಅಮೆರಿಕ ಪ್ರವಾಸಕ್ಕೆ ನಿರ್ಬಂಧಿಸಿದೆ. ಪ್ರಿಯಾಂಕ್ ಖರ್ಗೆ ಅವರು ಪ್ಯಾರಿಸ್ (Paris) ಪ್ರವಾಸ ಮುಗಿಸಿ ಇನ್ನೇನು ಅಮೆರಿಕಗೆ (America) ತೆರಳಿ ಬಳಿಕ ಬಯೋ ಇಂಟರ್ ನ್ಯಾಷನಲ್ ಕನ್ವಷನ್ ಕಾರ್ಯಕ್ರಮದಲ್ಲಿ ಬಾಗವಹಿಸಬೇಕಿತ್ತು. ಆದ್ರೆ, ಕೇಂದ್ರ ಸರ್ಕಾರ ಖರ್ಗೆ ಅವರ ಯುಎಸ್ ಪ್ರವಾಸಕ್ಕೆ ಅನುಮತಿ ನಿರಾಕರಣೆ ಮಾಡಿದೆ. ಇದರಿಂದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿದ್ದ ಪ್ರಿಯಾಂಕ್ ಖರ್ಗೆಗೆ ನಿರಾಸೆಯಾಗಿದ್ದು, ಕ್ಲಿಯರೆನ್ಸ್ ನೀಡದ ಬಗ್ಗೆ ವಿವರಣೆ ನೀಡುವಂತೆ ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಅಚ್ಚರಿ ಅಂದ್ರೆ ಸಚಿವರ ಜೊತೆ ತೆರಳಿದ್ದ ಐಎಎಸ್ ಅಧಿಕಾರಿಗಳಿಗೆ ಯುಎಸ್ಗೆ ತೆರಳಲು ಅನುಮತಿ ಸಿಕ್ಕಿದೆ.
ಐಟಿ ಬಿಟಿಗೆ ಸಂಬಂಧಪಟ್ಟಂತೆ ಪ್ರಿಯಾಂಕ್ ಖರ್ಗೆ ಬೋಸ್ಟನ್, ಸ್ಯಾನ್‌ಫ್ರಾನ್ಸಿಸ್ಕೋ ನಗರಗಳಲ್ಲಿ ಆಯೋಜನೆಗೊಂಡಿದ್ದ ಕಾನ್ಫರೆನ್ಸ್‌ನಲ್ಲಿ ಭಾಗವಹಿಸಬೇಕಿತ್ತು. ಪ್ರಿಯಾಂಕ್ ಜೊತೆ ತೆರಳಿದ್ದ ಐಎಎಸ್ ಅಧಿಕಾರಿಗೆ ಅಮೆರಿಕಗೆ ತೆರಳಲು ಕ್ಲಿಯರೆನ್ಸ್ ಸಿಕ್ಕಿದೆ. ಪ್ಯಾರಿಸ್ ಏರ್ ಶೋನಲ್ಲಿ ಭಾಗಿಯಾಗಿದ್ದ ಪ್ರಿಯಾಂಕ್ ಖರ್ಗೆ ಗುರುವಾರ ಬೆಂಗಳೂರಿಗೆ ಮರಳಲಿದ್ದಾರೆ.
ಇದನ್ನೂ ಓದಿ: ಸಾಲು ಸಾಲು ಏರ್ ಇಂಡಿಯಾ ವಿಮಾನಗಳ ಸೇವೆ ರದ್ದು, ಮುಖ್ಯ ಇಂಜಿನೀಯರ್ಗೆ ಡಿಜಿಸಿಎ ಸಮನ್ಸ್
ಸದ್ಯ ಪ್ಯಾರಿಸ್ ನಲ್ಲಿ ಇರುವ ಪ್ರಿಯಾಂಕ್ ಖರ್ಗೆ, ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಬಳಿಕ ಅಮೆರಿಕದಲ್ಲಿ ನಡೆಯುತ್ತಿರುವ ಬಯೋ ಇಂಟರ್ ನ್ಯಾಷನಲ್ ಕನ್ವಷನ್ ಕಾರ್ಯಕ್ರಮಕ್ಕೆ ಹೋಗಬೇಕಿತ್ತು. ಆದ್ರೆ, ಅಮೆರಿಕಗೆ ತೆರಳಲು ಕ್ಲಿಯರೆನ್ಸ್ ಸಿಗದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ವಿವರಣೆ ನೀಡುವಂತೆ ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಇನ್ನು ಕೇಂದ್ರ ಸರ್ಕಾರ ಏಕೆ ಅನುಮತಿ ಕೊಟ್ಟಿಲ್ಲ ಎನ್ನುವ ಬಗ್ಗೆ ಕಾರಣ ತಿಳಿದುಬಂದಿಲ್ಲ. ಸಚಿವರ ಜೊತೆ ತೆರಳಿದ್ದ ಐಎಎಸ್ ಅಧಿಕಾರಿಗಳಿಗೆ ಯುಎಸ್ಗೆ ತೆರಳಲು ಅನುಮತಿ ಸಿಕ್ಕಿದೆ. ಆದ್ರೆ, ಪ್ರಿಯಾಂಕ್ ಖರ್ಗೆ ಅವರಿಗೆ ಅನುಮತಿ ನಿರಾಕರಣೆ ಮಾಡಿದ್ದು ಅಚ್ಚರಿಗೆ ಕಾರಣವಾಗಿದೆ. ಇನ್ನು ಈ ಬಗ್ಗೆ ಪ್ರಿಯಾಂಕ್ ಖರ್ಗೆ ಅವರು ವಾಪಸ್ ಕರ್ನಾಟಕಕ್ಕೆ ಬಂದ ಬಳಿಕ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ.




