ನರೇಂದ್ರ ಮೋದಿ ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ ಪುಸ್ತಕ ಬಿಡುಗಡೆ
ವಿಆರ್ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್ ಪ್ರಕಾಶನದಲ್ಲಿ ಪ್ರಕಟವಾದ ಪ್ರಧಾನಿ ನರೇಂದ್ರ ಮೋದಿ ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ 'A Promised Nation Hon'ble Shri Narendra Modi- the Maker of New India' ಪುಸ್ತಕವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರು/ನವದೆಹಲಿ, ಜನವರಿ 26: ವಿಆರ್ಎಲ್ (VRL) ಲಾಜಿಸ್ಟಿಕ್ಸ್ ಲಿಮಿಟೆಡ್ ಪ್ರಕಾಶನದಲ್ಲಿ ಪ್ರಕಟವಾದ ಪ್ರಧಾನಿ ನರೇಂದ್ರ ಮೋದಿ (Narendra Modi) ಜೀವನ ಮತ್ತು ಕೃತಿಗಳ ಕುರಿತು ಬ್ರೈಲ್ ಲಿಪಿಯಲ್ಲಿ ಬರೆಯಲಾದ ‘A Promised Nation Hon’ble Shri Narendra Modi- the Maker of New India’ ಪುಸ್ತಕವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಬಿಡುಗಡೆ ಮಾಡಿದ್ದಾರೆ.
ವಿಶೇಷವೆಂದರೆ ಪ್ರಧಾನಿ ಮೋದಿ ಅವರ ಬಗ್ಗೆ ಬರೆದಿರುವ ಈ ಕೃತಿಯ ಪ್ರಕಾಶಕರು ಹುಬ್ಬಳ್ಳಿಯವರು ಎಂಬುದೇ ಹೆಮ್ಮೆಯ ಸಂಗತಿ. ಈ ಪುಸ್ತಕವನ್ನು ನಮ್ಮ ಹುಬ್ಬಳ್ಳಿಯ ವಿಆರ್ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್ ಪ್ರಕಟಿಸಿದೆ ಎಂದು ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿಮಾನ ವ್ಯಕ್ತಪಡಿಸಿದ್ದಾರೆ.
Another proud moment for Hubli!
HM @AmitShah ji launched the book ‘A Promised Nation Hon’ble Shri @narendramodi– the Maker of New India’ written on the life and works of Modi Ji in Braille script.
This book has been published by our Hubli publisher VRL Logistics Ltd, the book… pic.twitter.com/MSCJKKVhZQ
— Pralhad Joshi (@JoshiPralhad) January 26, 2024
ಬ್ರೈಲ್ ಲಿಪಿಯಲ್ಲಿ ಬರೆಯಲಾಗಿರುವ ಈ ಪುಸ್ತಕವು ದೃಷ್ಟಿಹೀನ ಜನರಿಗೆ ಮೋದಿ ಅವರ ಜೀವನ ಪಯಣದ ಬಗ್ಗೆ ತಿಳಿಯಲು ಸಹಾಯ ಮಾಡುತ್ತದೆ. ಈ ಮಹತ್ತರ ಹೆಜ್ಜೆಯಲ್ಲಿ ನಮ್ಮ ಹುಬ್ಬಳ್ಳಿಯೂ ಒಂದು ಭಾಗವಾಗಿರುವುದು ಹೆಮ್ಮೆಯ ವಿಚಾರ ಎಂದು ಪ್ರಹ್ಲಾದ ಜೋಶಿ ಸಂತಸ ಹಂಚಿಕೊಂಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ