ಜೂನ್ 19ರಂದು ಕೇಂದ್ರ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಭೇಟಿ
ಗುರುವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಆ ಮೂಲಕ ಜೂನ್ 20 ರಂದು ಬೆಂಗಳೂರಿನ ಬಿಜಿಎಸ್ ಮೆಡಿಕಲ್ ಕಾಲೇಜು ಕ್ಯಾಂಪಸ್ನಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಅಂದು ಮಧ್ಯಾಹ್ನ ದೆಹಲಿಗೆ ವಾಪಸ್ ತೆರಳಲಿದ್ದಾರೆ.

ಬೆಂಗಳೂರು, ಜೂನ್ 18: ಗುರುವಾರ ರಾತ್ರಿ ಬೆಂಗಳೂರಿಗೆ ಕೇಂದ್ರ ಸಚಿವ ಅಮಿತ್ ಶಾ (Amit Shah) ಆಗಮಿಸುತ್ತಿದ್ದಾರೆ. ಜೂನ್ 20 (ಶುಕ್ರುವಾರ) ದಂದು ಬಿಜಿಎಸ್ (BGS) ಮೆಡಿಕಲ್ ಕಾಲೇಜು ಕ್ಯಾಂಪಸ್ನಲ್ಲಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಕಾರ್ಯಕ್ರಮ ಮುಗಿಸಿ ಶುಕ್ರುವಾರ ಮಧ್ಯಾಹ್ನ ದೆಹಲಿಗೆ ವಾಪಸ್ ಆಗಲಿದ್ದಾರೆ.
ಅಮಿತ್ ಶಾ ಭೇಟಿಯಾದ ದೆಹಲಿ ಸಿಎಂ
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಷ್ಟ್ರ ರಾಜಧಾನಿಯ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚಿಸಿದರು. ಅಮಿತ್ ಶಾ ಅವರೊಂದಿಗಿನ ಚರ್ಚೆ ಸೌಹಾರ್ದಯುತ, ರಚನಾತ್ಮಕ ಮತ್ತು ಅತ್ಯಂತ ಫಲಪ್ರದವಾಗಿತ್ತು ಎಂದು ಭೇಟಿಯ ನಂತರ ರೇಖಾ ಗುಪ್ತಾ ಹೇಳಿದರು. ದೆಹಲಿಯ ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸರ್ಕಾರದ ಅಧಿಕೃತ ಹೇಳಿಕೆ ತಿಳಿಸಿದೆ.
ಇದನ್ನೂ ಓದಿ: Karnataka Rains: ಕರ್ನಾಟಕದ ಕರಾವಳಿಯಲ್ಲಿ ಮಳೆ ಜೋರು, ಉಳಿದೆಡೆ ಸಾಧಾರಣ ಮಳೆ
‘ಇಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಜಿ ಅವರನ್ನು ಸೌಹಾರ್ದ ಭೇಟಿ ಮಾಡಿ ಮಾರ್ಗದರ್ಶನ ಪಡೆದೆ. ರಾಷ್ಟ್ರೀಯ ಸೇವೆ, ಸಂಘಟನೆ ಮತ್ತು ಉತ್ತಮ ಆಡಳಿತದ ಕಡೆಗೆ ಅವರ ದೃಷ್ಟಿಕೋನ ಮತ್ತು ನಾಯಕತ್ವವು ನಮ್ಮೆಲ್ಲ ಸಾರ್ವಜನಿಕ ಪ್ರತಿನಿಧಿಗಳಿಗೆ ಸ್ಫೂರ್ತಿಯಾಗಿದೆ. ದೆಹಲಿಯ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳ ಕುರಿತು ಅವರೊಂದಿಗೆ ನಡೆದ ಚರ್ಚೆಯು ಬಹಳ ಚಿಂತನಶೀಲ, ಮಾರ್ಗದರ್ಶಿ ಮತ್ತು ಆತ್ಮೀಯವಾಗಿತ್ತು. ಅವರ ಅಮೂಲ್ಯ ಸಮಯ ಮತ್ತು ಸಲಹೆಗಳಿಗೆ ಹೃತ್ಪೂರ್ವಕ ಕೃತಜ್ಞತೆಗಳು’ ಎಂದು ಭೇಟಿ ನಂತರ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಿಎಂ ಪೋಸ್ಟ್ ಮಾಡಿದ್ದಾರೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.
Published On - 10:12 am, Wed, 18 June 25







