ಬೆಂಗಳೂರು: ಆರೋಗ್ಯ ಸಮಸ್ಯೆಯಿಂದಾಗಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಖಾಸಗಿ ಹೋಟೆಲ್ಗೆ ಬಂದಿದ್ದ ಸದಾನಂದಗೌಡ ಅವರಲ್ಲಿ ಲೋ ಶುಗರ್ ಸಮಸ್ಯೆ ಕಂಡುಬಂತು. ಅಸ್ವಸ್ಥರಾದ ಅವರನ್ನು ತಕ್ಷಣ ಬಸವೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಆಸ್ಪತ್ರೆಯಲ್ಲಿ ಡಿವಿಎಸ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ರದುರ್ಗ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಸದಾನಂದಗೌಡರ ಆರೋಗ್ಯ ಸ್ಥಿತಿ ವಿಚಾರಿಸಿದರು.
ಸದಾನಂದಗೌಡರ ಭೇಟಿ ಬಳಿಕ ಹೇಳಿಕೆ ನೀಡಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಆತಂಕ ಪಡುವ ಅಗತ್ಯ ಇಲ್ಲ, ಸದಾನಂದಗೌಡರು ಕ್ಷೇಮವಾಗಿದ್ದಾರೆ. ಲೋ ಶುಗರ್ ನಿಂದ ಅಸ್ವಸ್ಥರಾದ ಹಿನ್ನೆಲೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸದ್ಯ ಡಿವಿಎಸ್ ಜ್ಯೂಸ್ ಕುಡಿದಿದ್ದು ಮಾತಾಡುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರ ಸಲಹೆಯಂತೆ ಬೆಂಗಳೂರಿಗೆ ಶಿಫ್ಟ್ ಮಾಡಲು ಅಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದ್ದು, ಜಿರೋ ಟ್ರಾಫಿಕ್ಗೂ ಮನವಿ ಮಾಡಿದ್ದೇವೆ ಎಂದು ಹೇಳಿದರು.
ಹೆಚ್ಚಿನ ಚಿಕಿತ್ಸೆಗಾಗಿ ಹೆಬ್ಬಾಳದ ಎರ್ಪೋರ್ಟ್ ರಸ್ತೆಯ ಆಸ್ಟರ್ ಆಸ್ಪತ್ರೆಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರನ್ನು ಕರೆತಂದಿದ್ದು, ಎಮರ್ಜೆನ್ಸಿ ವಾರ್ಡ್ನಲ್ಲಿ ಡಿವಿಎಸ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಡಿ.ವಿ.ಸದಾನಂದಗೌಡರ ಪತ್ನಿ ಡಾಟಿ ಆಸ್ಟರ್ ಆಸ್ಪತ್ರೆಗೆ ಆಗಮಿಸಿದ್ದಾರೆ.
ಕೇಂದ್ರ ಸಚಿವ ಸದಾನಂದ ಗೌಡಗೆ ಕೊರೊನಾ ಪಾಸಿಟಿವ್, ಐಸೋಲೇಶನ್ನಲ್ಲಿ ಚಿಕಿತ್ಸೆ
Published On - 2:44 pm, Sun, 3 January 21