ಕರ್ನಾಟಕಕ್ಕೆ ಸಿಹಿ ಸುದ್ದಿ: ರಾಜ್ಯದಲ್ಲಿ ಪ್ಲ್ಯಾಸ್ಟಿಕ್‌ ಪಾರ್ಕ್ ಸ್ಥಾಪನೆಗೆ ಕೇಂದ್ರದಿಂದ ತಾತ್ವಿಕ ಒಪ್ಪಿಗೆ

|

Updated on: Jan 22, 2021 | 9:59 PM

ಕರ್ನಾಟಕಕ್ಕೆ ಪ್ಲ್ಯಾಸ್ಟಿಕ್‌ ಪಾರ್ಕ್ ಮಂಜೂರಾಗಿದ್ದು ಪಾರ್ಕ್ ಸ್ಥಾಪನೆಗೆ ಕೇಂದ್ರದಿಂದ ತಾತ್ವಿಕ ಒಪ್ಪಿಗೆ ಸಿಕ್ಕಿದೆ. ಅದರಂತೆ, ಮಂಗಳೂರಿನ ಗಂಜಿಮಠದಲ್ಲಿ ಈ ಪಾರ್ಕ್‌ ಸ್ಥಾಪನೆಯಾಗಲಿದೆ ಎಂದು ಕೇಂದ್ರ ರಾಸಾಯನಿಕ ಸಚಿವ D.V.ಸದಾನಂದಗೌಡ ಟ್ವೀಟ್‌ ಮಾಡಿದ್ದಾರೆ.

ಕರ್ನಾಟಕಕ್ಕೆ ಸಿಹಿ ಸುದ್ದಿ: ರಾಜ್ಯದಲ್ಲಿ ಪ್ಲ್ಯಾಸ್ಟಿಕ್‌ ಪಾರ್ಕ್ ಸ್ಥಾಪನೆಗೆ ಕೇಂದ್ರದಿಂದ ತಾತ್ವಿಕ ಒಪ್ಪಿಗೆ
D.V.ಸದಾನಂದ ಗೌಡ
Follow us on

ಬೆಂಗಳೂರು: ಕರ್ನಾಟಕಕ್ಕೆ ಪ್ಲ್ಯಾಸ್ಟಿಕ್‌ ಪಾರ್ಕ್ ಮಂಜೂರಾಗಿದ್ದು ಪಾರ್ಕ್ ಸ್ಥಾಪನೆಗೆ ಕೇಂದ್ರದಿಂದ ತಾತ್ವಿಕ ಒಪ್ಪಿಗೆ ಸಿಕ್ಕಿದೆ. ಅದರಂತೆ, ಮಂಗಳೂರಿನ ಗಂಜಿಮಠದಲ್ಲಿ ಈ ಪಾರ್ಕ್‌ ಸ್ಥಾಪನೆಯಾಗಲಿದೆ ಎಂದು ಕೇಂದ್ರ ರಾಸಾಯನಿಕ ಸಚಿವ D.V.ಸದಾನಂದಗೌಡ ಟ್ವೀಟ್‌ ಮಾಡಿದ್ದಾರೆ.

ದೇಶದಲ್ಲಿ 2 ಪ್ಲ್ಯಾಸ್ಟಿಕ್‌ ಪಾರ್ಕ್ ನಿರ್ಮಾಣಕ್ಕೆ ಕೇಂದ್ರ ಒಪ್ಪಿಗೆ ಸೂಚಿಸಿದೆ. 2 ಪ್ಲ್ಯಾಸ್ಟಿಕ್‌ ಪಾರ್ಕ್ ಪೈಕಿ ಕರ್ನಾಟಕಕ್ಕೆ ಒಂದು ಮಂಜೂರು ಆಗಿದೆ. ಪ್ಲ್ಯಾಸ್ಟಿಕ್‌ ಪಾರ್ಕ್ ಸ್ಥಾಪನೆ ಬಗ್ಗೆ ವಿಸ್ತೃತ ಯೋಜನಾ ವರದಿ ಕಳುಹಿಸಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಪತ್ರ ಬರೆದಿದೆ ಎಂದು ಸದಾನಂದಗೌಡ ಟ್ವೀಟ್‌ ಮಾಡಿದ್ದಾರೆ.

ರಾಸಾಯನಿಕ ಇಲಾಖೆಯಿಂದ ರಾಜ್ಯ ಕೈಗಾರಿಕಾ ಇಲಾಖೆಗೆ ಪತ್ರ ಬರೆಯಲಾಗಿದ್ದು 6 ತಿಂಗಳ ಒಳಗೆ ಅಂತಿಮ ಒಪ್ಪಿಗೆ ನೀಡಿ ಯೋಜನೆ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರಾಸಾಯನಿಕ ಸಚಿವ D.V.ಸದಾನಂದಗೌಡ ಟ್ವೀಟ್‌ ಮಾಡಿದ್ದಾರೆ.

 

86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ.ದೊಡ್ಡರಂಗೇಗೌಡ ಆಯ್ಕೆ