ತನ್ನ ವಿರುದ್ಧ ಮಾನಹಾನಿಕರ ವರದಿ ಪ್ರಕಟಿಸದಂತೆ ಕೋರ್ಟ್​ನಿಂದ ನಿರ್ಬಂಧ ತಂದ ಕೇಂದ್ರ ಸಚಿವ ಡಿ ವಿ ಸದಾನಂದಗೌಡ

ತನ್ನ ವಿರುದ್ಧ ಮಾನಹಾನಿಕರ ವರದಿ ಪ್ರಕಟಿಸದಂತೆ ಕೋರ್ಟ್​ನಿಂದ ನಿರ್ಬಂಧ ತಂದ ಕೇಂದ್ರ ಸಚಿವ ಡಿ ವಿ ಸದಾನಂದಗೌಡ
ಕೇಂದ್ರ ಸಚಿವ ಡಿ ವಿ ಸದಾನಂದಗೌಡ

ಕ್ಯಾಬಿನೆಟ್ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್​​ಗಳಲ್ಲಿ ತಮ್ಮ ವಿರುದ್ಧ ಸುಳ್ಳುಸುದ್ದಿ ಪ್ರಸಾರ ಮಾಡುವ ಸಾಧ್ಯತೆ ಇದೆ. ಕಿಡಿಗೇಡಿಗಳು ನಕಲಿ ಸಿಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆಯೂ ಇದೆ ಎಂದು ಕಾರಣ ನೀಡಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

TV9kannada Web Team

| Edited By: guruganesh bhat

Jul 02, 2021 | 11:01 PM

ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ತಮ್ಮ ವಿರುದ್ದ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಪಡೆದಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್​​ಗಳಲ್ಲಿ ತಮ್ಮ ವಿರುದ್ಧ ಸುಳ್ಳುಸುದ್ದಿ ಪ್ರಸಾರ ಮಾಡುವ ಸಾಧ್ಯತೆ ಇದೆ. ಕಿಡಿಗೇಡಿಗಳು ನಕಲಿ ಸಿಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆಯೂ ಇದೆ ಎಂದು ಕಾರಣ ನೀಡಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ಕೆಲ ಹಳೆಯ ದೃಷ್ಟಾಂತಗಳ ಉದಾಹರಣೆಯನ್ನೂ ನೀಡಿರುವ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಹಿಂದೆ ಅಮೆರಿಕದ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ, ಬ್ರಿಟನ್ ರಾಣಿ ಕ್ವೀನ್ ಎಲಿಜಬೆತ್ ಕುರಿತು ನಕಲಿ ವಿಡಿಯೋ ಮಾಡಲಾಗಿತ್ತು ಎಂದು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇಂಥ ವಿಡಿಯೋ ಪ್ರಸಾರ ಮಾಡಿದರೆ ಘನತೆಗೆ ಧಕ್ಕೆ ಆಗಲಿದೆ. ಅದರಿಂದ ಚಾರಿತ್ರ್ಯ ವಧೆಯಾಗಲಿದೆ. ಆದ್ದರಿಂದ ತಮ್ಮ ಬಗ್ಗೆಯೂ ಇಂತಹ ವಿಡಿಯೋ ಪ್ರಸಾರ ಮಾಡುವ ಅಪಾಯವಿದ್ದು, ಹಾಗಾದಲ್ಲಿ ಘನತೆಗೆ ಧಕ್ಕೆಯಾಗಲಿದೆ. ಚಾರಿತ್ರ್ಯ ವಧೆಯಾಗಲಿದೆ ಎಂದು ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಮಾನ್ಯ ಮಾಡಿದ ಕೋರ್ಟ್, ಮಾನಹಾನಿಕರ ವರದಿ ಮಾಡದಂತೆ ನಿರ್ಬಂಧ ವಿಧಿಸಿದೆ.

ಈ ಕುರಿತು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿರುವ ಸಚಿವ ಸದಾನಂದಗೌಡ, ಚುನಾವಣೆ, ಸಂಪುಟ ರಚನೆ ಸಂದರ್ಭದಲ್ಲಿ ವಿರೋಧಿಗಳು ಈ ಮುಂಚೆಯೂ ನನ್ನ ವೈಯಕ್ತಿಕ ತೇಜೋವಧೆಗೆ ಪ್ರಯತ್ನಿಸಿದ್ದರು. ಮಾಧ್ಯಮ ಸ್ವಾತಂತ್ರ್ಯವನ್ನು ನಾನು ಸಂಪೂರ್ಣ ಗೌರವಿಸುತ್ತೇನೆ. ಆದರೆ ವಿರೋಧಿಗಳ ಸಂಚಿಗೆ ಬಲಿಯಾಗಿ ತಪ್ಪುಮಾಹಿತಿ ಪ್ರಸರಣದಲ್ಲಿ ತೊಡಗಬಾರದೆಂಬ ಉದ್ದೇಶದಿಂದ ‌ನಿರ್ಬಂಧ ಆದೇಶ ತರಬೇಕಾಗಿ ಬಂತು. ದಯವಿಟ್ಟು ಯಾರೂ ಅನ್ಯತಾ ಭಾವಿಸಬಾರದು ಎಂದು ಮನವಿ ಮಾಡಿದ್ದಾರೆ.

ಇದೇ ರೀತಿ ಅರ್ಜಿ ಸಲ್ಲಿಸಿದ್ದ 6 ಸಚಿವರು

ಈ ಮುನ್ನ  ರಾಜ್ಯ ಸರ್ಕಾರದ  6 ಸಚಿವರು ಇದೇ ರೀತಿ ತಮ್ಮ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ವರದಿ ಪ್ರಸಾರ ಮಾಡದಂತೆ ಅರ್ಜಿ ಸಲ್ಲಿಸಿದ್ದರು. ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಕೃಷಿ ಸಚಿವ ಬಿ.ಸಿ.ಪಾಟೀಲ್,  ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕ್ರೀಡಾ ಸಚಿವ ನಾರಾಯಣಗೌಡ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್,  ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಸಹ ತಮ್ಮ ವಿರುದ್ಧ ಮಾನಹಾನಿಕರ ವರದಿ ಪ್ರಸಾರ ಮಾಡದಂತೆ ಕೋರ್ಟ್​ಗೆ ಅರ್ಜಿ ಸಲ್ಲಿಸಿ ನಿರ್ಬಂಧ ತಂದಿದ್ದರು.

ಇದನ್ನೂ ಓದಿ: 

ಶೀಘ್ರದಲ್ಲೇ ಕೇಂದ್ರ ಸಚಿವ ಸಂಪುಟದ ಮೆಗಾ ವಿಸ್ತರಣೆ: ಯಾರಿಗೆಲ್ಲಾ ಅವಕಾಶ? ಇಲ್ಲಿದೆ ವಿವರ

ಇದನ್ನೂ ಓದಿ: Central Cabinet Expansion: ಉದಾಸಿ, ಗದ್ದಿಗೌಡರ್ ಜೊತೆಗೆ ರಾಘವೇಂದ್ರ ಹೆಸರೂ ಪಟ್ಟಿಯಲ್ಲಿದೆ

(Union minister DV Sadananda Gowda, who was blocked by the court from publishing a defamatory report against him)

Follow us on

Related Stories

Most Read Stories

Click on your DTH Provider to Add TV9 Kannada