AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಮುಡಾ ಹಗರಣದ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದೆ. ಇದರ ಮಧ್ಯ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದು, ಅಗತ್ಯ ದಾಖಲೆಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಮುಡಾ ಹಗರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಂದು ಹಗರಣದ ಬಾಂಬ್ ಸಿಡಿಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಮುಡಾ ಹಗರಣದ ಬಾಂಬ್ ಸಿಡಿಸಿದ ಕುಮಾರಸ್ವಾಮಿ
ಸಿದ್ದರಾಮಯ್ಯ, ಕುಮಾರಸ್ವಾಮಿ
ಪ್ರಶಾಂತ್​ ಬಿ.
| Edited By: |

Updated on: Oct 18, 2024 | 3:23 PM

Share

ಮಂಡ್ಯ, (ಅಕ್ಟೋಬರ್ 18): ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಇದರಿಂದ ಪ್ರಕರಣದ ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯನವರು ಏನಾಗುತ್ತೋ ಏನೋ ಎನ್ನುವ ಟೆನ್ಷನ್​ನಲ್ಲಿದ್ದಾರೆ. ಇದರ ಮಧ್ಯ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಮುಡಾ ಹಗರಣ ಬಾಂಬ್ ಸಿಡಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿರುವ ಎಚ್​ಡಿಕೆ, ಮೈಸೂರಿನ ಹಿನಕಲ್ ನಲ್ಲಿ 1986 ರಲ್ಲಿ 434 ಎಕರೆ ಹೊಸ ಬಡಾವಣೆ ಮಾಡಲು ನೋಟಿಫಿಕೇಷನ್ ಆಗುತ್ತೆ. 17/4 ರಲ್ಲಿ ಎಲ್ಲ ತೆಗೆದರೆ ಗೊತ್ತಾಗುತ್ತದೆ ಎಂದು ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.

ಮಂಡ್ಯದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿರುವ ಕೇಂದ್ರ ಸಿಚಿವ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರ ಇದು ಬೇರೆ. ಆದರೆ, ಇದು‌ ಕೂಡ ಮೂಡ ವಿಚಾರ. ಮೈಸೂರಿನ ಹಿನಕಲ್ ನಲ್ಲಿ 1986 ರಲ್ಲಿ 434 ಎಕರೆ ಹೊಸ ಬಡಾವಣೆ ಮಾಡಲು ನೋಟಿಫಿಕೇಷನ್ ಆಗುತ್ತೆ. 17/4 ರಲ್ಲಿ ಎಲ್ಲ ತೆಗೆದರೇ ಗೊತ್ತಾಗುತ್ತದೆ. ಸತ್ಯಾಮೇವಾ ಜನತೆ ಅನ್ನುತ್ತಾರೆ. ಸಾಕಮ್ಮ ಎಂಬವವರ ಕೈಯಲ್ಲಿ ಅರ್ಜಿ ಹಾಕಿಸಿದ್ದಾರೆ. 20 ದಿನದಲ್ಲಿ ಡಿನೋಟಿಫಿಕೇಷನ್ ಆಗುತ್ತೆ. ಅದನ್ನ ಸಿಎಂ ಅವರು ಕೊಂಡುಕೊಂಡಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಇದನ್ನೂ ಓದಿ: ನಿಜವಾಯ್ತು ಟಿವಿ9 ಡಿಜಿಟಲ್​ ನುಡಿದಿದ್ದ ಭವಿಷ್ಯ; ಮುಡಾ ಕಚೇರಿ ಮೇಲೆ ಇಡಿ ದಾಳಿ, ಸಿದ್ದರಾಮಯ್ಯಗೆ ಹೆಚ್ಚಿದ ಸಂಕಷ್ಟ

ಸಿಎಂಗೆ ಮತ್ತೊಂದು ಟೆನ್ಷನ್ ತಂದಿಟ್ಟ ಎಚ್​ಡಿಕೆ

ಈಗಾಗಲೇ ಪತ್ನಿ ಪಾರ್ವತಿ ಪಡೆದುಕೊಂಡಿದ್ದ 15 ಮುಡಾ ಸೈಟ್ ಪ್ರಕಣ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಕೋರ್ಟ್ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿದೆ. ಮತ್ತೊಂದೆಡೆ ಇಡಿ ಸಹ ದೂರು ದಾಖಲಿಸಿಕೊಂಡಿದೆ. ಹೀಗಾಗಿ ಸಿದ್ದರಾಮಯ್ಯನವರ 40 ವರ್ಷಗಳ ರಾಜಕೀಯ ಜೀವನದಲ್ಲಿ ಮೊದಲ ಎಫ್​ಐಆರ್ ದಾಖಲಾಗಿದೆ. ಹೀಗಾಗಿ ಸಿದ್ದರಾಮಯ್ಯನವರ ಸಿಎಂ ಕುರ್ಚಿಗೆ ಕಂಟಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಏನಾಗುತ್ತೋ ಏನೋ ಎನ್ನುವ ಆತಂಕದಿಂದ ಸಿದ್ದರಾಮಯ್ಯ ತಮ್ಮ ಪತ್ನಿಯಿಂದ ಮುಡಾಗೆ ಸೈಟ್ ಹಿಂದಿರುಸಿದ್ದಾರೆ. ಆದರೂ ಸಹ ಸಿಎಂ ಟೆನ್ಷನ್​ನಲ್ಲಿ ದಿನ ದೂಡುತ್ತಿದ್ದಾರೆ. ಇದರ ಮಧ್ಯಕುಮಾರಸ್ವಾಮಿ ಸಹ ಸಿಎಂ ವಿರುದ್ಧ ಮತ್ತೊಂದು ಮುಡಾ ಹಗರಣ ಬಾಂಬ್ ಸಿಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!
ಪ್ರಧಾನಿ ಕರೆಗೆ ಓಗೊಟ್ಟು ಮೆಟ್ರೋದಲ್ಲಿ ಪ್ರಾಯಾಣಿಸಿದ ವಿಜಯೇಂದ್ರ!