AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿದ್ದಾರೆ: ಕುಮಾರಸ್ವಾಮಿ ಕಿಡಿ

ನಾಗಮಂಗಲ ಕೋಮು ಗಲಭೆಯಲ್ಲಿ ಪೊಲೀಸರ ಮತ್ತು ಆಡಳಿತ ವ್ಯವಸ್ಥೆಯ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಘಟನೆಯನ್ನು ಖಂಡಿಸಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ರಾಜ್ಯ ಸರ್ಕಾರದ ಅತಿಯಾದ ಓಲೈಕೆಯೇ ಇದಕ್ಕೆಲ್ಲ ಕಾರಣ ಎಂದಿದ್ದಾರೆ. ಅಲ್ಲದೆ, ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಏನದು? ತಿಳಿಯಲು ಮುಂದೆ ಓದಿ.

ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿದ್ದಾರೆ: ಕುಮಾರಸ್ವಾಮಿ ಕಿಡಿ
ಕುಮಾರಸ್ವಾಮಿ
ಗಣಪತಿ ಶರ್ಮಾ
|

Updated on:Sep 12, 2024 | 9:45 AM

Share

ಬೆಂಗಳೂರು, ಸೆಪ್ಟೆಂಬರ್ 12: ನಾಗಮಂಗಲದಲ್ಲಿ ಗಣೇಶನ ವಿಸರ್ಜನಾ ಮೆರವಣಿಗೆ ವೇಳೆ ಬುಧವಾರ ರಾತ್ರಿ ಸಂಭವಿಸಿದ ಕೋಮು ಗಲಭೆಯನ್ನು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ. ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿರುವುದನ್ನು ತಡೆಯಲು ವಿಫಲವಾಗಿರುವುದು ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಕರ್ನಾಟಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಕುಮಾರಸ್ವಾಮಿ ಎಕ್ಸ್ ಸಂದೇಶ

ಕರ್ನಾಟಕ ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ ಎಂದು ಹೆಚ್​ಡಿಕೆ ಕಿಡಿಕಾರಿದ್ದಾರೆ.

ಶಾಂತಿ ಕಾಪಾಡಲು ಹೆಚ್​ಡಿಕೆ ಮನವಿ

ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ; ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸಚಿವ ಚಲುವರಾಯಸ್ವಾಮಿ ಹೇಳಿದ್ದೇನು?

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ನಡೆದ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಚಲುವರಾಯಸ್ವಾಮಿ, ಗಲಾಟೆ ವೇಳೆ ಕೆಲ ಅಂಗಡಿಗಳು, ವಾಹನಗಳಿಗೆ ಹಾನಿಯಾಗಿರುವುದು ಗೊತ್ತಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನ ವಿಷಯ . ಪ್ರಕರಣದ ಬಗ್ಗೆ ಸಿಎಂ, ಗೃಹ ಸಚಿವರ ಗಮನಕ್ಕೆ ತಂದಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದಿದ್ದೇನು? ಇಲ್ಲಿದೆ ಸಮಗ್ರ ಮಾಹಿತಿ

ಸಾರ್ವಜನಿಕರು ಶಾಂತಿ ಕಾಪಾಡಬೇಕು ಎಂದೂ ಅವರು ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:50 am, Thu, 12 September 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ