ಬೆಂಗಳೂರು, ಸೆಪ್ಟೆಂಬರ್ 12: ನಾಗಮಂಗಲದಲ್ಲಿ ಗಣೇಶನ ವಿಸರ್ಜನಾ ಮೆರವಣಿಗೆ ವೇಳೆ ಬುಧವಾರ ರಾತ್ರಿ ಸಂಭವಿಸಿದ ಕೋಮು ಗಲಭೆಯನ್ನು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ. ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿರುವುದನ್ನು ತಡೆಯಲು ವಿಫಲವಾಗಿರುವುದು ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ಕರ್ನಾಟಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ ಎಂದು ಅವರು ಟೀಕಿಸಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 11, 2024
ಕರ್ನಾಟಕ ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ ಎಂದು ಹೆಚ್ಡಿಕೆ ಕಿಡಿಕಾರಿದ್ದಾರೆ.
ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ; ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ನಡೆದ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಚಲುವರಾಯಸ್ವಾಮಿ, ಗಲಾಟೆ ವೇಳೆ ಕೆಲ ಅಂಗಡಿಗಳು, ವಾಹನಗಳಿಗೆ ಹಾನಿಯಾಗಿರುವುದು ಗೊತ್ತಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನ ವಿಷಯ . ಪ್ರಕರಣದ ಬಗ್ಗೆ ಸಿಎಂ, ಗೃಹ ಸಚಿವರ ಗಮನಕ್ಕೆ ತಂದಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿ: ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದಿದ್ದೇನು? ಇಲ್ಲಿದೆ ಸಮಗ್ರ ಮಾಹಿತಿ
ಸಾರ್ವಜನಿಕರು ಶಾಂತಿ ಕಾಪಾಡಬೇಕು ಎಂದೂ ಅವರು ಮನವಿ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:50 am, Thu, 12 September 24