ತುಂಗಭದ್ರಾ ಡ್ಯಾಂ ಗೇಟ್ ಕಟ್​ಗೆ ಸ್ಫೋಟಕ ಕಾರಣ ಕೊಟ್ಟ ಎಚ್​​ಡಿಕೆ, ಜತೆಗೊಂದು ಸಲಹೆ

ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲರುವ ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್‌ ಗೇಟ್ ಮುರಿದು ಹೋಗಿದೆ. ನೀರಿನ ರಭಸಕ್ಕೆ ಗೇಟ್ ಕೊಚ್ಚಿಕೊಂಡು ಹೋಗಿದ್ದು, ನದಿಗೆ ಅಪಾರ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಇನ್ನು ಈ ವಿಚಾರ ರೈತರಲ್ಲಿ ಆತಂಕ ಮೂಡಿಸಿದೆ. ಇನ್ನು ಈ ಅವಘಡಕ್ಕೆ ಕಾರಣವೇನು? ಈ ರೀತಿ ಮುಂದೆ ಆಗದಂತೆ ಏನು ಮಾಡಬೇಕೆಂದು ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಅಲ್ಲದೇ ಕೆಆರ್​​ಎಸ್ ಜಲಾಶಯದ ಬಗ್ಗೆಯೂ ಎಚ್ಚೆತ್ತಯಕೊಳ್ಳಬೇಕೆಂದು ಸರ್ಕಾರಕ್ಕೆ ಕಿವಿ ಮಾತು ಹೇಳಿದ್ದಾರೆ.

ತುಂಗಭದ್ರಾ ಡ್ಯಾಂ ಗೇಟ್ ಕಟ್​ಗೆ ಸ್ಫೋಟಕ ಕಾರಣ ಕೊಟ್ಟ ಎಚ್​​ಡಿಕೆ, ಜತೆಗೊಂದು ಸಲಹೆ
ಕುಮಾರಸ್ವಾಮಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Aug 11, 2024 | 12:59 PM

ಮಂಡ್ಯ, (ಆಗಸ್ಟ್​ 11): ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್‌ ಗೇಟ್‌ ಮುರಿದು ಹೋಗಿದೆ. ಇದರಿಂದ ಆತಂಕಕ್ಕೆ ಕಾರಣವಾಗಿದ್ದು, ಗೇಟ್​ ರಿಪೇರಿಗೆ ಜಲಾಶಯದಲ್ಲಿ ಭರ್ತಿಯಾಗಿರುವ ನೀರಿನ ಪೈಕಿ 50ರಿಂದ 60 ಟಿಎಂಸಿ ನೀರು ಖಾಲಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಇದರಿಂದ ಮುಂದಿನ ಬೆಳೆಗೆ ನೀರಿನ ಕೊರೆತೆ ಎದುರಾಗಲಿದೆ ಎಂದು ರೈತರು ಆತಂಕಗೊಂಡಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ಸಚಿವ ಎಚ್​​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಸಾಫ್ಟ್​ ಲಾಕ್​ ಗೇಟ್​ ಅಳವಡಿಸದ ಹಿನ್ನೆಲೆ ಈ ಅವಘಡ ಆಗಿದೆ. ಸುಮಾರು 70 ವರ್ಷಗಳ ಹಿಂದೆ ಟಿಬಿ ಡ್ಯಾಂ ನಿರ್ಮಾಣವಾಗಿದೆ. ಆದರೆ ಡ್ಯಾಂಗೆ ಸಾಫ್ಟ್​ ಲಾಕ್​ ಗೇಟ್​ ಅಳವಡಿಸಿದ ಹಿನ್ನೆಲೆಯಲ್ಲಿ ಹೀಗೆ ಆಗಿದೆ ಎಂದರು.

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಸುಮಾರು 70 ವರ್ಷಗಳ ಹಿಂದೆ ಟಿಬಿ ಡ್ಯಾಂ ನಿರ್ಮಾಣವಾಗಿದೆ. ಆದರೆ ಡ್ಯಾಂಗೆ ಸಾಫ್ಟ್​ ಲಾಕ್​ ಗೇಟ್​ ಅಳವಡಿಸಿದ ಹಿನ್ನೆಲೆ ಹೀಗೆ ಆಗಿದೆ. ಆಲಮಟ್ಟಿ, ನಾರಾಯಣಪುರ ಡ್ಯಾಂಗೆ ಸಾಫ್ಟ್​ ಲಾಕ್​ ಗೇಟ್ ಅಳವಡಿಕೆ. ಅದೇ ರೀತಿ ಟಿಬಿ(ತುಂಗಾಭದ್ರ) ಡ್ಯಾಂಗೆ ಸಾಫ್ಟ್​ ಲಾಕ್​ ಗೇಟ್ ಅಳವಡಿಸಬೇಕು. ಇದರಿಂದ ಮುಂದೆ ಇಂತಹ ಅವಘಡಗಳನ್ನು ತಡೆಯಲು ಸಾಧ್ಯವಾಗುತ್ತೆ ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಕಿತ್ತುಹೋದ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್.. ಜಲಾಶಯ ಸಂಪೂರ್ಣ ಖಾಲಿ ಮಾಡ್ತಾರಾ?

ತುಂಗಭದ್ರಾ ಜಲಾಶಯದಲ್ಲಿ ದೊಡ್ಡ ಅನಾಹುತವಾಗಿದೆ. 19 ಕ್ರಸ್ಟ್ ಗೇಟ್ ಓಪನ್ ಆಗಿದೆ, 30 ಸಾವಿರ ಕ್ಯೂಸೆಕ್ ನೀರು ಹೋಗುತ್ತಿದೆ. ಈ ಅನಾಹುತದಿಂದ ಜಲಾಶಯದ 60 ಟಿಎಂಸಿ ನೀರು ಖಾಲಿಯಾಗುತ್ತೆ. ಇದು ರೈತರ ಬದುಕಿನ ಆಶಾಭಾವನೆಗೆ ಧಕ್ಕೆ ತಂದಿದೆ. 70 ವರ್ಷಗಳ‌ ಹಿಂದೆ ಈ ಜಲಾಶಯ ಕಟ್ಟಿದ್ದಾರೆ. ಹಿಂದೆಯೂ ಅಲ್ಲಿ ಅನೇಕ ಸಮಸ್ಯೆಗಳು ಬೆಳಕಿಗೆ ಬಂದಿದ್ದವು.

ನಾರಾಯಣಪುರ, ಆಲಮಟ್ಟಿ ಡ್ಯಾಂನಲ್ಲಿ ಸ್ಟಾಫ್ ಲಾಕ್ ಗೇಟ್ ಅಳವಡಿಸಲಾಗಿದೆ. ತುಂಗಭದ್ರಾ ಡ್ಯಾಂನಲ್ಲಿ ಸ್ಟಾಫ್ ಗೇಟ್ ಅಳವಡಿಕೆ ಮಾಡಿಲ್ಲ. ಅದಕ್ಕಾಗಿ ನೀರು ನಿಲ್ಲಿಸಲು ಸಾಧ್ಯವಾಗಿಲ್ಲ. ಇದರಿಂದ ರೈತರ ವಿಚಾರದಲ್ಲಿ ಚಲ್ಲಾಡವಾಡಿದ ಆಗೆ ಆಗಿದೆ. ಟಿಬಿ ಡ್ಯಾಂ ಬೋರ್ಡ್ ಟೆಕ್ನಿಕಲ್ ವಿಚಾರದಲ್ಲಿ ಕಾಟಚಾರದ ವರದಿ ಕೊಟ್ಟಿವೆ. ಅದಕ್ಕಾಗಿ ಇಂತಹ ಪರಿಸ್ಥಿತಿ ಬಂದಿದೆ. ಇದನ್ನು ಸರಿ ಪಡಿಸಿಕೊಳ್ಳಬೇಕಾಗಿದೆ. ಕೆಆರ್‌ಎಸ್ ಡ್ಯಾಂ ವಿಚಾರದಲ್ಲಿ ಎಚ್ಚೆತ್ತುಕೊಳ್ಳುವುದು ಒಳ್ಳೆಯದ್ದು ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಕೆಆರ್‌ಎಸ್ ಡ್ಯಾಂನಲ್ಲಿ‌ ಸ್ಟಾಫ್ ಲಾಕ್ ಗೇಟ್ ಇಲ್ಲ. ಕೆಆರ್‌ಎಸ್ ಡ್ಯಾಂ‌ ಕಟ್ಟುವಾಗ ಸ್ಟಾಫ್ ಇಲ್ಲದ ಕಾರಣ ಹಾಕಿಲ್ಲ. ತುಂಗಾಭದ್ರ ಪರಿಸ್ಥಿತಿ ಗಮನಿಸಿದ್ರೆ, ದೂರ ದೃಷ್ಟಿಯಿಂದ ಕೆಆರ್‌ಎಸ್‌ಗೆ ಸ್ಟಾಫ್ ಲಾಕ್ ಹಾಕಬೇಕು. ತುಂಗಭದ್ರ ಸಮಸ್ಯೆ ಸರ್ಕಾರದ ನಿರ್ಲಕ್ಷ್ಯ ಎನ್ನಲು ಆಗಲ್ಲ. ಡ್ಯಾಂಗೆ ಟೆಕ್ನಿಕಲ್ ಕಮಿಟಿ ಇರುತ್ತೆ. ಆ ಕಮಿಟಿ ಪ್ರತಿ ವರ್ಷ ಸಮಸ್ಯೆಗೆಳನ್ನು ಪರಿಶೀಲನೆ ಮಾಡುತ್ತೆ. ಆಗ ಕಾಟಾಚಾರಕ್ಕೆ ಪರಿಶೀಲನೆ ಮಾಡಿದಾಗ ಈ ರೀತಿಯ ಅನಾಹುಗಳು ಆಗುತ್ತವೆ. ಇದನ್ನು ದುರಸ್ಥಿತಿ ಮಾಡೋದು ಸರ್ಕಾರಕ್ಕೆ ಇದು ಕ್ಲಿಷ್ಟಕರ ಪರಿಸ್ಥಿತಿ. ಟೆಕ್ನಿಕಲ್‌ನಲ್ಲಿ ಪರಿಣತಿ ಇರುವವರ ಜೊತೆ ಚರ್ಚೆ ಮಾಡಿ, ಹೇಗೆ ಪಡೆಯಬೇಕು ಎಂದು ನೋಡಬೇಕು ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ