AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರಕಾರ್ಮಿಕರ ಸಾವಿನ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಪತ್ರಕರ್ತರ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ

ಜಾತಿ ನಿಂದನೆ ಪ್ರಕರಣದಲ್ಲಿ ಶೇ 3ರಷ್ಟು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿದೆ. 1995ರಿಂದ 2020ರ ಅವಧಿಯಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್​ನಿಂದಾಗಿ 90 ಜನರು ಸಾವನ್ನಪ್ಪಿದ್ದಾರೆ

ಪೌರಕಾರ್ಮಿಕರ ಸಾವಿನ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಪತ್ರಕರ್ತರ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ
ಕೇಂದ್ರ ಸಚಿವ ನಾರಾಯಣಸ್ವಾಮಿ
TV9 Web
| Edited By: |

Updated on:Feb 11, 2022 | 4:15 PM

Share

ಬೆಂಗಳೂರು: ಮ್ಯಾನ್​ಹೋಲ್​ಗೆ ಇಳಿದು ಮೃತಪಟ್ಟ 90 ಪೌರಕಾರ್ಮಿಕರ ಸಾವಿನ ಪ್ರಕರಣಗಳ ಕುರಿತು ಪ್ರಶ್ನೆ ಕೇಳಿದ ಮಾಧ್ಯಮ ಪ್ರತಿನಿಧಿಗಳ ವಿರುದ್ಧ ಕೇಂದ್ರ ಸಚಿವರು ಹರಿಹಾಯ್ದ ಘಟನೆ ನಗರದಲ್ಲಿ ನಡೆಯಿತು. ಈ ಕುರಿತು ಪ್ರಶ್ನಿಸಿದ ಪತ್ರಕರ್ತರ ವಿರುದ್ಧವೇ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ನಾರಾಯಣಸ್ವಾಮಿ (Union Minister Narayanaswamy) ಹರಿಹಾಯ್ದರು. ಸಮಾಜ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದ ಸಚಿವರನ್ನು ‘ಪೌರಕಾರ್ಮಿಕರ ಸಾವಿನ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದೀರಿ’ ಎಂದು ಕೇಳಿದಾಗ, ಮಾಹಿತಿ ಕೊರತೆ ಹಿನ್ನಲೆಯಲ್ಲಿ ಪ್ರಶ್ನೆಗೆ ಉತ್ತರ ನೀಡಲು ತಡಬಡಾಯಿಸಿದರು. ನಂತರ ‘ಪ್ರಶ್ನೆ ಕೇಳುವುದು ಸಂಸ್ಕಾರವಲ್ಲ’ ಎಂದು ಸಿಟ್ಟಿನಿಂದ ಉತ್ತರಿಸಿದರು.

ಜಾತಿ ನಿಂದನೆ ಪ್ರಕರಣದಲ್ಲಿ ಶೇ 3ರಷ್ಟು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗಿದೆ. 1995ರಿಂದ 2020ರ ಅವಧಿಯಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜಿಂಗ್​ನಿಂದಾಗಿ 90 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಎಷ್ಟು ಪ್ರಕರಣಗಳಲ್ಲಿ ಅರೋಪಪಟ್ಟಿ ಸಲ್ಲಿಕೆಯಾಗಿದೆ. ಗುತ್ತಿಗೆದಾರರ ವಿರುದ್ಧ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವಾಗಿ ಹೇಳಿದರು.

ರಾಜ್ಯದಲ್ಲಿ ಈವರೆಗೆ ನಡೆದಿರುವ ಮರ್ಯಾದೆ ಹತ್ಯೆಗಳ ಮಾಹಿತಿ ನೀಡುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಸಕಾಲದಲ್ಲಿ ಪರಿಣಾಮಕಾರಿಯಾಗಿ ಆರೋಪಪಟ್ಟಿ ಸಲ್ಲಿಸದಿರುವುದು ಪೊಲೀಸರ ವೈಫಲ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಾತಿ ನಿಂದನೆಗೆ ಸಂಬಂಧಿಸಿದ 60,000 ಇನ್ನೂ ಆರೋಪಪಟ್ಟಿ ಸಲ್ಲಿಸಿಲ್ಲ ಎಂದು ವಿವರಿಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಮಾಸ್ಟರ್ ಪ್ಲಾನ್​ ರೂಪಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ ಎಂದರು. ಈ ಕೆಲಸದಲ್ಲಿ ಗ್ರಾಮೀಣಾಭಿವೃದ್ಧಿ, ನರೇಗಾ, ತೋಟಗಾರಿಕೆ, ರೇಷ್ಮೆ, ಕೃಷಿ ಇಲಾಖೆಗಳು ಜತೆಗೂಡಿ ಕಾರ್ಯನಿರ್ವಹಿಸಬೇಕು ಎಂದರು. ಸಭೆಯಲ್ಲಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀನಿವಾಸ ಪೂಜಾರಿ ಗೈರು ಹಾಜರಾಗಿದ್ದರು. ಪೂರ್ವ ನಿಗದಿತ ಕೆಡಿಪಿ ಸಭೆಗೆ ಅವರು ತೆರಳಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇದನ್ನೂ ಓದಿ: ಹರಿಪ್ರಸಾದ್ vs ಕೋಟ ಶ್ರೀನಿವಾಸ ಪೂಜಾರಿ: ಮಲಹೊರುವ ಪದ್ಧತಿ ಬಗ್ಗೆ ವಿಧಾನ ಪರಿಷತ್​ನಲ್ಲಿ ಕಾವೇರಿದ ಚರ್ಚೆ

ಇದನ್ನೂ ಓದಿ: ಸುರಕ್ಷತೆ ವಹಿಸದೆ ಅಧಿಕಾರಿಗಳ ನಿರ್ಲಕ್ಷ್ಯ: ಬರಿಗೈನಿಂದಲೇ ಚರಂಡಿ ಸ್ವಚ್ಛಗೊಳಿಸಿದ ಪೌರ ಕಾರ್ಮಿಕರು

Published On - 4:14 pm, Fri, 11 February 22

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್