AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನೆರವೇರಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಾಙ್ಮಯಿ ವಿವಾಹ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(nirmala sitharaman) ಅವರ ಏಕೈಕ ಪುತ್ರಿ ವಾಙ್ಮಯಿ ಅವರ ವಿವಾಹ(Wedding) ಇಂದು ಬೆಂಗಳೂರಿನಲ್ಲಿ ನೆರವೇರಿತು.

ಬೆಂಗಳೂರಿನಲ್ಲಿ ನೆರವೇರಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಾಙ್ಮಯಿ ವಿವಾಹ
ನಿರ್ಮಲಾ ಸೀತಾರಾಮನ್ ಪುತ್ರಿ ವಿವಾಹ
ರಮೇಶ್ ಬಿ. ಜವಳಗೇರಾ
| Edited By: |

Updated on:Jun 08, 2023 | 2:22 PM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ನೆರವೇರಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪುತ್ರಿ ವಿವಾಹ
  • ಉಡುಪಿಯ ಅದಮಾರು ಮಠದ ಬ್ರಾಹ್ಮಣ ಸಂಪ್ರದಾಯ ಪ್ರಕಾರ ವಿವಾಹ
  • ಸಚಿವೆ ನಿರ್ಮಲಾ ಸೀತಾರಾಮನ್ ಅವರ ಏಕೈಕ ಪುತ್ರಿ ವಾಙ್ಮಯಿ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(nirmala sitharaman) ಅವರ ಏಕೈಕ ಪುತ್ರಿ ವಾಙ್ಮಯಿ ಅವರ ವಿವಾಹ(Wedding) ಇಂದು ಬೆಂಗಳೂರಿನಲ್ಲಿ ನೆರವೇರಿತು. ಪ್ರತೀಕ್ ಎಂಬವರ ಜೊತೆ ಉಡುಪಿಯ ಅದಮಾರು ಮಠದ ಬ್ರಾಹ್ಮಣ ಸಂಪ್ರದಾಯ ಪ್ರಕಾರ ವಿವಾಹ ನಡೆಯಿತು.  ವಧು ನಸುಕೆಂಪು ಬಣ್ಣದ ಸೀರೆ ಉಟ್ಟಿದ್ದರೆ, ವರ ಬಿಳಿ ಪಂಚೆ, ಶಾಲನ್ನು ಧರಿಸಿದ್ದರು. ಇನ್ನು ಅದ್ಧೂರಿ ಮದುವೆಯಲ್ಲೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೊಳಕಾಲ್ಮೂರು ಸೀರೆಯಲ್ಲಿ ಕಾಣಿಸಿಕೊಂಡಿರುವುದು ವಿಶೇಷ.

ಅದಮಾರು ಮಠದ ವೈದಿಕ ಕ್ರಮವನ್ನು ವಿವಾಹದಲ್ಲಿ ನೆರವೇರಿಸಲಾಯಿತು. ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಈಶಪ್ರಿಯ ತೀರ್ಥ ಶ್ರೀಪಾದರು ವಧು ವರರನ್ನು ಹರಸಿ ಕಳುಹಿಸಿದ ಮಧುಪರ್ಕ, ಸೀರೆ, ಶಾಲು, ಗಂಧ ಪ್ರಸಾದವನ್ನು ಮಠದ ವ್ಯವಸ್ಥಾಪಕರಾದ ಗೋವಿಂದ ರಾಜರು ಮತ್ತು ಶಿಷ್ಯರು ಮಂತ್ರಘೋಷದ ಮೂಲಕ ನೀಡಿ ಹರಸಿದರು.

ಈಶಪ್ರಿಯ ತೀರ್ಥ ಶ್ರೀಪಾದರು ಅನುಗ್ರಹಿಸಿ ಕಳುಹಿಸಿದ ಉಡುಪಿ ಸೀರೆಯನ್ನು ಪೌರೋಹಿತ್ಯರು ನಿರ್ಮಲ ಸೀತಾರಾಮನ್ ಅವರಿಗೆ ನೀಡಿದರು. ಇನ್ನು ಸಚಿವೆ ನಿರ್ಮಲಾ ಅವರು ಹಿಂದಿನಿಂದಲೂ ಉಡುಪಿ ಮಠದ ಭಕ್ತರು. ಅವರ ಇಚ್ಛೆಯ ಪ್ರಕಾರ ಪುತ್ರಿಯ ವಿವಾಹ ನೆರವೇರಿಸಿದ್ದಾರೆ.

Published On - 2:00 pm, Thu, 8 June 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ