ಕೇಂದ್ರ ಸಚಿವ ನಿತಿನ್ ಗಡ್ಕರಿ ಫೆಬ್ರವರಿ 22 ರಂದು ಕರ್ನಾಟಕಕ್ಕೆ ಭೇಟಿ

ಕರ್ನಾಟಕದಲ್ಲಿನ ಕೆಲವು ಕಾರ್ಯಕ್ರಮಗಳಿಗೆ ಚಾಲನೆ ಮತ್ತು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ (ಫೆ.22) ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಫೆಬ್ರವರಿ 22 ರಂದು ಕರ್ನಾಟಕಕ್ಕೆ ಭೇಟಿ
ಕೇಂದ್ರ ಸಚಿವ ನಿತಿನ್​ ಗಡ್ಕರಿ
Follow us
ವಿವೇಕ ಬಿರಾದಾರ
|

Updated on:Feb 21, 2024 | 12:52 PM

ಬೆಂಗಳೂರು, ಫೆಬ್ರವರಿ 21: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು ಗುರುವಾರ ಕರ್ನಾಟಕ ಪ್ರವಾಸ (Karnataka Visit) ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಕೆಲವು ಕಾರ್ಯಕ್ರಮಗಳಿಗೆ ಚಾಲನೆ ಮತ್ತು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಗುರುವಾರ ಬೆಳಗ್ಗೆ ದೆಹಲಿಯಿಂದ ಹೊರಟು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.30 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬೆಳಗಾವಿಯಿಂದ ಹೊರಟು ಮಧ್ಯಾಹ್ನ 2.40ಕ್ಕೆ ಶಿವಮೊಗ್ಗ ತಲುಪಲಿದ್ದಾರೆ.

ಮಧ್ಯಾಹ್ನ 3.15ಕ್ಕೆ ಶಿವಮೊಗ್ಗದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವರು, ಸಂಜೆ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಲಿದ್ದಾರೆ. ರಾತ್ರಿ ಆರ್ಟ್ ಆಫ್ ಲಿವಿಂಗ್ ಅಂತರಾಷ್ಟ್ರೀಯ ಕೇಂದ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಶುಕ್ರವಾರ ಬೆಳಗ್ಗೆ ಮಹಾರಾಷ್ಟ್ರದ ಲಾತೂರ್‌ಗೆ ತೆರಳಲಿದ್ದಾರೆ.

ನಿತಿನ್​ ಗಡ್ಕರಿ ಅವರು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 6,975 ಕೋಟಿ ರೂ. ಮೌಲ್ಯದ 15 ಕಾಮಗಾರಿಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ. ಅದೇ ರೀತಿ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಒಟ್ಟು 6,168.41 ಕೋಟಿ ರೂ. ವೆಚ್ಚದ ರಸ್ತೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:51 pm, Wed, 21 February 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ