ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸರಣಿ ಸಭೆ-ಸುದ್ದಿಗೋಷ್ಟಿ : ಏನ್ ಹೇಳಿದ್ರು ಜೋಶಿ? ಇಲ್ಲಿದೆ ಡೀಟೈಲ್ಸ್

Pralhad Joshi: ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ದೇಶದಲ್ಲಿ ಇದೊಂದು ಸಂಭ್ರಮದ ಸಮಯ. ಫ್ಲಾಗ್ ಕೋಡ್ ಬದಲಾಗಿದ್ದರಿಂದ ಎಲ್ಲರೂ, ದಿನಪೂರ್ತಿ ಧ್ವಜ ಹಾರಿಸಿ ಸಂಭ್ರಮಿಸಬಹುದು. ಹರ್ ಘರ್ ತಿರಂಗ ಅಭಿಯಾನವು ಧಾರವಾಡ ಜಿಲ್ಲೆಯಲ್ಲಿ ಕೂಡ ವಿಶಿಷ್ಟ ರೀತಿಯಲ್ಲಿ ಆಚರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸರಣಿ ಸಭೆ-ಸುದ್ದಿಗೋಷ್ಟಿ : ಏನ್ ಹೇಳಿದ್ರು ಜೋಶಿ? ಇಲ್ಲಿದೆ ಡೀಟೈಲ್ಸ್
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸರಣಿ ಸಭೆ-ಸುದ್ದಿಗೋಷ್ಟಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 30, 2022 | 6:52 PM

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ಇವತ್ತು ಹುಬ್ಬಳ್ಳಿಯಲ್ಲಿ ಸರಣಿ ಸಭೆ ನಡೆಸಿದ್ರು. ಈ ಪೈಕಿ ಪ್ರಮುಖವಾಗಿ ಆಜಾದಿ ಕ ಅಮೃತ ಮಹೋತ್ಸವ್ ಕಾರ್ಯಕ್ರಮದ (Azadi Ka Amrit Mahotsav) ಭಾಗವಾಗಿ ಹರ್ ಘರ್ ತಿರಂಗಾ ಅಭಿಯಾನವನ್ನು ವಿಜೃಂಭಣೆಯಿಂದ ನಡೆಸಲು ಕೇಂದ್ರ ಸರ್ಕಾರ ಮುಂದಾಗಿರುವ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಮಹತ್ವದ ಸಭೆ ನಡೆಸಿದ, ಸಭೆ ಬೆನ್ನಲ್ಲೇ ಸುದ್ದಿಗೋಷ್ಟಿಯನ್ನೂ ನಡೆಸಿದರು (Hubli)‌.

ವಿಶೇಷವಾಗಿ ಹರ್ ಘರ್ ತಿರಂಗ ಅಭಿಯಾನದಲ್ಲಿ ಭಾರತದ ಪ್ರತಿ ಮನೆ ಮನೆಗಳಲ್ಲೂ ರಾಷ್ಟ್ರಧ್ವಜ ಹಾರಬೇಕು. ಪ್ರತಿಯೊಬ್ಬ ಭಾರತೀಯ ಹರ್ ಘರ್ ತಿರಂಗ ಅಭಿಯಾನದಲ್ಲಿ ತನ್ನ ಪಾಲ್ಗೊಳ್ಳುವಿಕೆಯನ್ನ ತೋರ್ಪಡಿಸಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅಭಿಪ್ರಾಯಪಟ್ಟರು. ಕೇವಲ 20 ರೂಪಾಯಿ ಕೊಟ್ಟು ಪ್ರತಿಯೊಬ್ಬರು ತಮ್ಮ ಮನೆಯ ಮೇಲೆ ತ್ರಿವರ್ಣ ಧ್ವಜವನ್ನ ಹಾರಿಸಬಹುದು. ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ದೇಶದಲ್ಲಿ ಇದೊಂದು ಸಂಭ್ರಮದ ಸಮಯ. ಮೊದಲಿನಂತೆ ಈಗ ಧ್ವಜವನ್ನ ಬೆಳಗ್ಗೆ ಹಾರಿಸಿ ಸಂಜೆ ತೆಗೆಯಬೇಕು ಎಂಬ ನಿಯಮವೇನಿಲ್ಲ. ಫ್ಲಾಗ್ ಕೋಡ್ (Flag Code) ಬದಲಾಗಿದ್ದರಿಂದ ಎಲ್ಲರೂ, ದಿನಪೂರ್ತಿ ಧ್ವಜ ಹಾರಿಸಿ ಸಂಭ್ರಮಿಸಬಹುದು. ಹರ್ ಘರ್ ತಿರಂಗ ಅಭಿಯಾನವು ಧಾರವಾಡ ಜಿಲ್ಲೆಯಲ್ಲಿ ಕೂಡ ವಿಶಿಷ್ಟ ರೀತಿಯಲ್ಲಿ ಆಚರಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

ಅಮೃತ ಮಹೋತ್ಸವಕ್ಕೆ 75 ಅಮೃತ ಸರೋವರ

ಧಾರವಾಡ ಜಿಲ್ಲೆಯಲ್ಲಿ ನಿರ್ಮಾಣ ಮಾಡುತ್ತಿರುವ 75 ಕೆರೆಗಳ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚರ್ಚೆ ನಡೆಸಿದರು. ಆಜಾದಿ ಕ ಅಮೃತ ಮಹೋತ್ಸವ ಅಭಿಯಾನದ ಅಡಿಯಲ್ಲಿ 75 ಕೆರೆಗಳ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಈಗಾಗಲೇ 15 ಕೆರೆಗಳ ಅಭಿವೃದ್ಧಿ ಕಾರ್ಯ ಮುಕ್ತಾಯದ ಹಂತಕ್ಕೆ ಬಂದಿದ್ದು ಸ್ವಾತಂತ್ರ್ಯೋತ್ಸವದಂದು ಲೋಕಾರ್ಪಣೆ ಮಾಡಲಾಗುವುದು. ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ಮೇಲ್ಸೇತುವೆ ಕಾಮಗಾರಿ ಸೇರಿದಂತೆ ಹಲವು ಪ್ರಮುಖ ಯೋಜನೆಗಳ ಕುರಿತು ಚರ್ಚೆ ನಡೆಸಿದ ಪ್ರಲ್ಹಾದ್ ಜೋಶಿಯವರು, ಕಾಮಗಾರಿಯ ವೇಳೆ ಅಥವಾ ನಂತರ ಟ್ರಾಫಿಕ್ ಸಮಸ್ಯೆ ಅಥವಾ ಯಾವುದೇ ರೀತಿಯ ಸಮಸ್ಯೆಗಳು ಸಾರ್ವಜನಿಕರಿಗೆ ಆಗದಂತೆ ನೋಡಿಕೊಂಡು ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿನೆ ನೀಡಿದರು.

ಇದೇ ವೇಳೆ ಹುಬ್ಬಳ್ಳಿಯ “ಉಜ್ವಲ ಭಾರತ – ಉಜ್ವಲ ಭವಿಷ್ಯ” ಎಂಬ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೇಂದೃ ಸಚಿವರು, ವಿದ್ಯುತ್ ಸಂಪರ್ಕ ವಂಚಿತ ಸಾವಿರಾರು ಹಳ್ಳಿಗಳಿಗೆ ಮೋದಿ ಸರ್ಕಾರ ವಿದ್ಯುತ್ ಕಲ್ಪಿಸಿದ ವಿಚಾರ ಮೆಲುಕು‌ ಹಾಕಿದರು. 2014 ರಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಕೇವಲ 18 ತಿಂಗಳಲ್ಲಿ ವಿದ್ಯುತ್ ಸೌಭಾಗ್ಯ ಯೋಜನೆ ಅಡಿಯಲ್ಲಿ 2 ಕೋಟಿ 86 ಲಕ್ಷ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿದೆ. ಇದು ವಿಶ್ವದ ಅತ್ಯಂತ ದೊಡ್ಡ ವಿದ್ಯುದೀಕರಣ ಕಾರ್ಯಕ್ರಮವಾಗಿದೆ ಎಂದರು. ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಕಳೆದರು ಬಹುಪಾಲು ಆಡಳಿತ ನಡೆಸಿದ ಕಾಂಗ್ರೆಸ್, ದೇಶದ ಸಾವಿರಾರು ಹಳ್ಳಿಗಳಿಗೆ ಬೆಳಕು ಕೊಡಲು ಸಾಧ್ಯವಾಗದಿರುವುದು ನಿಜಕ್ಕೂ ದುರ್ದೈವ. ಆದರೆ ದೇಶದಲ್ಲಿ ಬಿಜೆಪಿ ಸರ್ಕಾರ ಬಂದಾಗಲೆಲ್ಲ ವಿದ್ಯುತ್ ವಂಚಿತ ಪ್ರತಿ ಹಳ್ಳಿ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮಹತ್ವದ ಕಾರ್ಯ ನೆರವೇರಿಸಿದೆ ಎಂದು ಸಂತಸ‌ ವ್ಯಕ್ತಪಡಿಸಿದರು.

Published On - 4:24 pm, Sat, 30 July 22

ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ