AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜ್ಞಾನಿಗಳಿಗೆ ಅಗೌರವ ತೋರುವುದು ಬೇಡವೆಂದು ಕಾಂಗ್ರೆಸ್​ಗೆ ಸಲಹೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಬಜೆಟ್​ ಸೆಷನ್ಸ್ ಬಗ್ಗೆ ಮಾಹಿತಿ ನೀಡಿದ ಪ್ರಲ್ಹಾದ್ ಜೋಶಿ, ಜ.29ರಿಂದ ಫೆ.15ರವರೆಗೆ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದೆ. ಜನವರಿ 30ರಂದು ಸರ್ವಪಕ್ಷ ಸಭೆ ನಡೆಯಲಿದೆ. ಫೆ.1ರಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ತಿಳಿಸಿದರು.

ವಿಜ್ಞಾನಿಗಳಿಗೆ ಅಗೌರವ ತೋರುವುದು ಬೇಡವೆಂದು ಕಾಂಗ್ರೆಸ್​ಗೆ ಸಲಹೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಪ್ರಲ್ಹಾದ್ ಜೋಶಿ
Lakshmi Hegde
| Edited By: |

Updated on: Jan 10, 2021 | 12:30 PM

Share

ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಯಾವಾಗ ಮಾಡಬೇಕು ಎಂದು ವರಿಷ್ಠರಿಗೆ ಗೊತ್ತು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಇಂದು ನಗರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ. ನಾಯಕರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

ಜ.16, 17ರಂದು ಬಿಜೆಪಿ ವರಿಷ್ಠರು ರಾಜ್ಯಕ್ಕೆ ಬರುತ್ತಾರೆ. ಗೃಹ ಇಲಾಖೆಯ ಕಾರ್ಯಕ್ರಮ ನಡೆಯಲಿದ್ದು, ಅದರಲ್ಲಿ ಅಮಿತ್​ ಷಾ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ ಅವರು, ಕೊರೊನಾ ವ್ಯಾಕ್ಸಿನ್​ನ್ನು ಮೊದಲು ಪ್ರಧಾನಿಯೇ ಪಡೆಯಬೇಕು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ತಿರುಗೇಟು ನೀಡಿದರು. ಪ್ರಧಾನಿ ಮೋದಿಯವರನ್ನು ವಿರೋಧಿಸುವ ಭರದಲ್ಲಿ ದೇಶವನ್ನು ವಿರೋಧಿಸಬೇಡಿ. ವಿಜ್ಞಾನಿಗಳಿಗೆ ಅಗೌರವ ತೋರುವುದು ಬೇಡವೆಂದು ಕಿವಿಮಾತು ಹೇಳಿದರು. ಹಾಗೇ, ಬಿಜೆಪಿ 30 ಪರ್ಸೆಂಟ್​ ಸರ್ಕಾರ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಬಗ್ಗೆ ಮಾತನಾಡುವುದೇ ಅಪ್ರಸ್ತುತ, ಅಪಹಾಸ್ಯ ಎಂದರು.

ಫೆಬ್ರವರಿ 1ರಂದು ಬಜೆಟ್​ ಇನ್ನು ಬಜೆಟ್​ ಸೆಷನ್ಸ್ ಬಗ್ಗೆ ಮಾಹಿತಿ ನೀಡಿದ ಪ್ರಲ್ಹಾದ್ ಜೋಶಿ, ಜ.29ರಿಂದ ಫೆ.15ರವರೆಗೆ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದೆ. ಜನವರಿ 30ರಂದು ಸರ್ವಪಕ್ಷ ಸಭೆ ನಡೆಯಲಿದೆ. ಫೆ.1ರಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ ಬಜೆಟ್ ಮಂಡನೆ ಮಾಡಲಿದ್ದಾರೆ. ಮಾರ್ಚ್ 8ರಿಂದ ಏ.8ರವರೆಗೆ ಬಜೆಟ್‌ನ 2ನೇ ಸೆಷನ್ ನಡೆಯುವುದು. ಕರ್ನಾಟಕದ ಆದ್ಯತೆ ಪಟ್ಟಿಯನ್ನು ಈಗಾಗಲೇ ಕೇಂದ್ರಕ್ಕೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಹನುಮನ ಅನುಗ್ರಹ ಇದ್ದರೆ ಖಂಡಿತ ಸಚಿವನಾಗುತ್ತೇನೆ.. ಲಾಬಿ ಮಾಡಲ್ಲ: ಶಾಸಕ ಸೋಮಶೇಖರ ರೆಡ್ಡಿ

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು