Telephone Tapping: ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ ಆರೋಪದಲ್ಲಿ ಹುರುಳಿಲ್ಲ – ಪ್ರಲ್ಹಾದ್ ಜೋಶಿ ತಿರುಗೇಟು

| Updated By: ಸಾಧು ಶ್ರೀನಾಥ್​

Updated on: Jul 26, 2022 | 6:27 PM

Pralhad Joshi: ಮಾರ್ಗರೇಟ್ ಆಳ್ವಾ ಅವರು ಹಿರಿಯ ನಾಯಕಿ.. ಈ ರೀತಿಯ ಹೇಳಿಕೆಗಳು ಚೈಲ್ಡಿಶ್ ಮನೋಭಾವವನ್ನ ತೋರಿಸುತ್ತವೆ.. ಇಂಥಹ ಹೇಳಿಕೆಗಳು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತದ್ದಲ್ಲ.. ಆರೋಪಗಳನ್ನ ಮಾಡುವಾಗ ಕನಿಷ್ಠ ಆಲೋಚನೆ ಮಾಡಿ ಆರೋಪಿಸಲಿ - ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Telephone Tapping: ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ ಆರೋಪದಲ್ಲಿ ಹುರುಳಿಲ್ಲ - ಪ್ರಲ್ಹಾದ್ ಜೋಶಿ ತಿರುಗೇಟು
ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ ಆರೋಪದಲ್ಲಿ ಹುರುಳಿಲ್ಲ - ಪ್ರಲ್ಹಾದ್ ಜೋಶಿ ತಿರುಗೇಟು
Follow us on

ಉಪರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೇಟ್ ಆಳ್ವಾ ಅವರ ಫೋನ್ ಟ್ಯಾಪ್ (Telephone Tapping) ಆರೋಪವನ್ನ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Parliamentary Affairs Minister Pralhad Joshi) ಅಲ್ಲಗೆಳೆದಿದ್ದಾರೆ.. ಮಾರ್ಗರೇಟ್ ಆಳ್ವಾ ಅವರ ಫೋನ್ ಅನ್ನ ಯಾರು ಏಕೆ ಟ್ಯಾಪ್ ಮಾಡಬೇಕು..? ಉಪರಾಷ್ಟ್ರಪತಿ ಚುನಾವಣೆಯಲ್ಲಿ ಫಲಿತಾಂಶ ಏನು ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ.. ಹೀಗಿರುವಾಗ ಆಳ್ವಾ ಅವರ (Margaret Alva) ಫೋನನ್ನ ಟ್ಯಾಪ್ ಮಾಡುವ ಅಗತ್ಯತೆ ನಮಗಿಲ್ಲ.. ಅಂಥಹ ಕೀಳು ಮಟ್ಟದ ರಾಜಕಾರಣವನ್ನ ಬಿಜೆಪಿ ಮಾಡುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ..

ಕಾಂಗ್ರೆಸ್ ನಿಂದ ಉಪರಾಷ್ಟ್ರಪತಿ ಅಭ್ಯರ್ಥಿಯಾದ ಬಳಿಕ ಮಾರ್ಗರೇಟ್ ಆಳ್ವಾ ಅವರು ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆಗಳನ್ನ ನೀಡಿ ಸುದ್ದಿಯಲ್ಲಿದ್ದಾರೆ.. ಇಂದು ನನ್ನ ಫೋನ್ ಟ್ಯಾಪ್ ಮಾಡಲಾಗಿದೆ ಎಂದು ಆಳ್ವಾ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದರು..

ಇಂದು ಬಿಜೆಪಿಯ ಕೆಲವು ಸ್ನೇಹಿತರೊಂದಿಗೆ ಮಾತನಾಡಿದೆ.. ಆ ನಂತರ ನನ್ನ ಮೊಬೈಲ್‌ಗೆ ಎಲ್ಲಾ ಕರೆಗಳನ್ನು ಡೈವರ್ಟ್ ಮಾಡಲಾಗುತ್ತಿದೆ ಎಂದು ಮಾರ್ಗರೇಟ್ ಆಳ್ವಾ ಅವರು ಆರೋಪಿಸಿದ್ದರು.. ನನ್ನ ಫೋನ್ ಟ್ಯಾಪ್ ಆಗಿದ್ದು, ನನಗೆ ಕರೆ ಮಾಡಲು ಅಥವಾ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ನನ್ನ ಫೋನ್ ಸರಿಮಾಡಿದರೆ, ಇಂದು ರಾತ್ರಿ ಬಿಜೆಪಿ, ಟಿಎಂಸಿ ಅಥವಾ ಬಿಜೆಡಿಯಿಂದ ಯಾವುದೇ ಸಂಸದರನ್ನು ಕರೆಯುವುದಿಲ್ಲ‌ ಎಂಬ ಭರವಸೆ ನೀಡುತ್ತೇನೆ ಎಂದು ಬಿಜೆಪಿಯನ್ನ ಗುರಿಯಾಗಿಸಿ ಟ್ವೀಟ್ ಮಾಡಿದ್ದರು.

ಆಳ್ವಾ ಅವರ ಆರೋಪವನ್ನ ಸಂಪೂರ್ಣವಾಗಿ ತಳ್ಳಿಹಾಕಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಇದೊಂದು ಬಾಲಿಶ ಹೇಳಿಕೆ ಅಂತಾ ಲೇವಡಿ ಮಾಡಿದ್ದಾರೆ.. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ.. ಅದು ಎಲ್ಲರಿಗೂ ಈಗಾಗಲೇ ಗೊತ್ತಿರುವಂತದ್ದು.. ಹೀಗಿರುವಾಗ ಯಾರಾದರೂ ಆಳ್ವಾ ಅವರ ಫೋನ್ ಅನ್ನು ಏಕೆ ಟ್ಯಾಪ್ ಮಾಡ್ತಾರೆ ಎಂದು ಪ್ರಶ್ನಿಸಿದ್ದಾರೆ..

ಮಾರ್ಗರೇಟ್ ಆಳ್ವಾ ಅವರು ಹಿರಿಯ ನಾಯಕಿ.. ಈ ರೀತಿಯ ಹೇಳಿಕೆಗಳು ಚೈಲ್ಡಿಶ್ ಮನೋಭಾವವನ್ನ ತೋರಿಸುತ್ತವೆ.. ಇಂಥಹ ಹೇಳಿಕೆಗಳು ಅವರ ವ್ಯಕ್ತಿತ್ವಕ್ಕೆ ಶೋಭೆ ತರುವಂತದ್ದಲ್ಲ.. ಆರೋಪಗಳನ್ನ ಮಾಡುವಾಗ ಕನಿಷ್ಠ ಆಲೋಚನೆ ಮಾಡಿ ಆರೋಪಿಸಲಿ.. ಹುರುಳಿಲ್ಲದ, ಆಧಾರ ವಿಲ್ಲದ ಆರೋಪಗಳಿಗೆ ಅರ್ಥವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಕಾಂಗ್ರೆಸ್ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರಿಗೆ ತಿರುಗೇಟು ನೀಡಿದ್ದಾರೆ.

Published On - 3:21 pm, Tue, 26 July 22