AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ -ವಿಶ್ವಾಸ ವ್ಯಕ್ತಪಡಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಸಚಿವ ಪ್ರಹ್ಲಾದ್ ಜೋಶಿ, ರಾಜ್ಯದ ಅಭಿವೃದ್ಧಿಗಾಗಿ ತನ್ನ ಸರ್ಕಾರದ 'ಐತಿಹಾಸಿಕ ಕೆಲಸಗಳಿಂದಾಗಿ ಸತತ ಎರಡನೇ ಬಾರಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದರು.

ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ -ವಿಶ್ವಾಸ ವ್ಯಕ್ತಪಡಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಪ್ರಹ್ಲಾದ್ ಜೋಶಿ
TV9 Web
| Edited By: ಆಯೇಷಾ ಬಾನು|

Updated on:Mar 30, 2023 | 7:08 AM

Share

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ(BS Yediyurappa) ಅವರ ನೇತೃತ್ವದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ( Pralhad Joshi) ಭರವಸೆ ವ್ಯಕ್ತಪಡಿಸಿದ್ದಾರೆ. ಬುಧವಾರ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದ ನಂತರ ಅವರು ಮಾತನಾಡಿದರು.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಸಂಸದ ಪ್ರಲ್ಹಾದ್ ಜೋಶಿಯವರು, ರಾಜ್ಯದ ಅಭಿವೃದ್ಧಿಗಾಗಿ ತನ್ನ ಸರ್ಕಾರದ ‘ಐತಿಹಾಸಿಕ ಕೆಲಸಗಳಿಂದಾಗಿ ಸತತ ಎರಡನೇ ಬಾರಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಹೇಳಿದರು.

‘ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ನಮ್ಮ ಡಬಲ್ ಎಂಜಿನ್ ಸರ್ಕಾರವು ರಾಜ್ಯದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಗಮನಿಸಿದರೆ, ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಕರ್ನಾಟಕದ ಜನರು ಕಾಂಗ್ರೆಸ್‌ನ ಇತಿಹಾಸವನ್ನು ತಿಳಿದಿರುವ ಕಾರಣದಿಂದ ಸತತ ಎರಡನೇ ಅವಧಿಗೆ ಬಿಜೆಪಿಗೆ ಅಧಿಕಾರ ನೀಡಲು ಉತ್ಸುಕರಾಗಿದ್ದಾರೆ ಎಂದರು.

ಇದನ್ನೂ ಓದಿ: 2019ರಲ್ಲಿ ಮೋದಿ ಸರ್​​ನೇಮ್ ಹೇಳಿಕೆ ನೀಡಿದ್ದ ಕೋಲಾರದಿಂದಲೇ ಕರ್ನಾಟಕ ಚುನಾವಣೆ ಪ್ರಚಾರ ಆರಂಭಿಸಲಿದ್ದಾರೆ ರಾಹುಲ್​​ ಗಾಂಧಿ

‘ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ನೀಡಿದೆ. ಛತ್ತೀಸ್‌ಗಢ, ರಾಜಸ್ಥಾನ ಮತ್ತು ಇತ್ತೀಚೆಗೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ’ ಎಂದು ಅವರು ಆರೋಪಿಸಿದರು. ‘ಅಭಿವೃದ್ಧಿ ಆಗಬೇಕಾದರೆ, ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಬೆಂಬಲಿಸಬೇಕು. ಕರ್ನಾಟಕದಲ್ಲಿ ಬಿಜೆಪಿಗೆ ಪೂರಕ ವಾತಾವರಣ ಗೋಚರಿಸುತ್ತಿದೆ’ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಮೇ 10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:08 am, Thu, 30 March 23

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು