ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ(BS Yediyurappa) ಅವರ ನೇತೃತ್ವದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ( Pralhad Joshi) ಭರವಸೆ ವ್ಯಕ್ತಪಡಿಸಿದ್ದಾರೆ. ಬುಧವಾರ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದ ನಂತರ ಅವರು ಮಾತನಾಡಿದರು.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಸಂಸದ ಪ್ರಲ್ಹಾದ್ ಜೋಶಿಯವರು, ರಾಜ್ಯದ ಅಭಿವೃದ್ಧಿಗಾಗಿ ತನ್ನ ಸರ್ಕಾರದ ‘ಐತಿಹಾಸಿಕ ಕೆಲಸಗಳಿಂದಾಗಿ ಸತತ ಎರಡನೇ ಬಾರಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಹೇಳಿದರು.
‘ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ನಮ್ಮ ಡಬಲ್ ಎಂಜಿನ್ ಸರ್ಕಾರವು ರಾಜ್ಯದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಗಮನಿಸಿದರೆ, ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಕರ್ನಾಟಕದ ಜನರು ಕಾಂಗ್ರೆಸ್‌ನ ಇತಿಹಾಸವನ್ನು ತಿಳಿದಿರುವ ಕಾರಣದಿಂದ ಸತತ ಎರಡನೇ ಅವಧಿಗೆ ಬಿಜೆಪಿಗೆ ಅಧಿಕಾರ ನೀಡಲು ಉತ್ಸುಕರಾಗಿದ್ದಾರೆ ಎಂದರು.
ಇದನ್ನೂ ಓದಿ: 2019ರಲ್ಲಿ ಮೋದಿ ಸರ್ನೇಮ್ ಹೇಳಿಕೆ ನೀಡಿದ್ದ ಕೋಲಾರದಿಂದಲೇ ಕರ್ನಾಟಕ ಚುನಾವಣೆ ಪ್ರಚಾರ ಆರಂಭಿಸಲಿದ್ದಾರೆ ರಾಹುಲ್ ಗಾಂಧಿ
‘ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ನೀಡಿದೆ. ಛತ್ತೀಸ್‌ಗಢ, ರಾಜಸ್ಥಾನ ಮತ್ತು ಇತ್ತೀಚೆಗೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ’ ಎಂದು ಅವರು ಆರೋಪಿಸಿದರು. ‘ಅಭಿವೃದ್ಧಿ ಆಗಬೇಕಾದರೆ, ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಬೆಂಬಲಿಸಬೇಕು. ಕರ್ನಾಟಕದಲ್ಲಿ ಬಿಜೆಪಿಗೆ ಪೂರಕ ವಾತಾವರಣ ಗೋಚರಿಸುತ್ತಿದೆ’ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮೇ 10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 7:08 am, Thu, 30 March 23