AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ “ಬಣವಿ ಸುಟ್ಟು ಅರಳು ಮುಕ್ಕುವ” ಕೆಲಸ ಮಾಡುತ್ತಿದೆ: ಕೇಂದ್ರ ಸಚಿವ ಜೋಶಿ ಕಿಡಿ

ಸಿಲಿಂಡರ್ ಕೊರತೆ, ಸಿಲಿಂಡರ್ ದರ ಏರಿಕೆ ಕಾಂಗ್ರೆಸ್‌ಗೆ ಅಸ್ತ್ರವಾಗಿದೆ. ಕಳೆದೊಂದು ವಾರದಲ್ಲಿ ಹಲವು ಪ್ರತಿಭಟನೆ ನಡೆಸಿದ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದೆ. ಕಾಂಗ್ರೆಸ್‌ನ ಈ ಆರೋಪಗಳಿಗೆ ಬಿಜೆಪಿ ನಾಯಕರು ಸಹ ತಿರುಗೇಟು ಕೊಟ್ಟಿದ್ದಾರೆ. ಈ ಬಗ್ಗೆ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ, ಗ್ಯಾಸ್, ಪೆಟ್ರೋಲಿಯಂ ಉತ್ಪನ್ನ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್ ಬಣವಿ ಸುಟ್ಟು ಅರಳು ಮುಕ್ಕುವ ಕೆಲಸ ಮಾಡುತ್ತಿದೆ: ಕೇಂದ್ರ ಸಚಿವ ಜೋಶಿ ಕಿಡಿ
Pralhad Joshi
ರಮೇಶ್ ಬಿ. ಜವಳಗೇರಾ
|

Updated on: Mar 13, 2026 | 10:55 PM

Share

ಬೆಂಗಳೂರು, (ಮಾರ್ಚ್ 13): ಮಧ್ಯಪ್ರಾಚ್ಯದ ಯುದ್ಧ (War) ಸಂದಿಗ್ಧ ಪರಿಸ್ಥಿತಿಯಲ್ಲಿ ದೇಶದಲ್ಲಿ ಎಲ್ಲೂ ಗ್ಯಾಸ್ (LPG Gas) ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಕೊರತೆಯಿಲ್ಲ. ಆದರೆ, ಕಾಂಗ್ರೆಸ್ (Congress)  ಪಕ್ಷ “ಬಣವಿ ಸುಟ್ಟು ಅರಳು ಮುಕ್ಕುವ” ಕೆಲಸ ಮಾಡುತ್ತಿದೆ. ದೇಶದಲ್ಲಿ ಈ ಹಿಂದೆಲ್ಲಾ ಕ್ರೈಸಿಸ್ ಉಂಟಾದಾಗ ವಿಪಕ್ಷ ಸ್ಥಾನದಲ್ಲಿದ್ದ ಬಿಜೆಪಿ ಅತ್ಯಂತ ಜವಾಬ್ದಾರಿಯಿಂದ ನಡೆದುಕೊಂಡಿದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ವಿಪಕ್ಷ ಕಾಂಗ್ರೆಸ್ ತೀರಾ ತೀರಾ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Union Minister pralhad joshi) ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿ, ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ಅವರು “ಕೇಂದ್ರದ ವಿರುದ್ಧ ಪ್ರತಿಭಟನೆಗೆ ಇಳಿಯಿರಿ” ಎಂದು ಜನರನ್ನು ಎತ್ತಿ ಕಟ್ಟುತ್ತಿರುವುದು ನಿಜಕ್ಕೂ ದೇಶದ ದೌರ್ಭಾಗ್ಯವೇ ಸರಿ ಎಂದು ಎಂದಿದ್ದಾರೆ.

ಇದನ್ನೂ ಓದಿ: ದೇಶದ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ನವೀಕರಿಸಬಹುದಾದ ಇಂಧನದ್ದೇ ಅಗ್ರ ಪಾಲು!

ಕಾಂಗ್ರೆಸ್ ದುರಾಲೋಚನೆ

ಯುದ್ಧದ ಈ ಸಂಧಿಗ್ಧ ಪರಿಸ್ಥಿತಿಯಲ್ಲಿ ‘ಏನಾದರೂ ಮಾಡಿ ಮೋದಿ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕು” ಎಂಬ ದುರಾಲೋಚನೆಯಲ್ಲಿ ಕಾಂಗ್ರೆಸ್ ಪಕ್ಷ ಪ್ರಯತ್ನಿಸುತ್ತಿದೆ. ದೇಶದಲ್ಲಿ ಗ್ಯಾಸ್ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನಗಳ ಅಭಾವವಿದೆ ಎಂದು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಜೋಶಿ ಹರಿಹಾಯ್ದರು.

ಜನರನ್ನು ಕೆರಳಿಸೋ ಯತ್ನ: ಯುದ್ಧದಿಂದಾಗಿ ಜಗತ್ತೇ ತತ್ತರಿಸುತ್ತಿದೆ. ಸಂಘರ್ಷ ಸನ್ನಿವೇಶದಲ್ಲೂ ಭಾರತದಲ್ಲಿ ಯಾವುದೇ ಅಭಾವ, ತೊಡಕು ಉಂಟಾಗದಂತೆ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಅಂತಾರಾಷ್ಟ್ರೀಯ ಸಂಬಂಧಗಳನ್ನು ಉತ್ತಮಪಡಿಸಿಕೊಂಡು ದೇಶವಾಸಿಗಳ ಹಿತ ಕಾಯಲು ಬದ್ಧವಾಗಿ ಉತ್ತಮ ಆಡಳಿತ ನಡೆಸುತ್ತಿದೆ. ಆದರೆ, ‘ಕಾಂಗ್ರೆಸ್ ಪಾರ್ಟಿ ಮೋದಿ ಸರ್ಕಾರದ ವಿರುದ್ಧ ಜನರ ಭಾವನೆ ಕೆರಳಿಸಲು ಯತ್ನಿಸುತ್ತಿದೆ’ ಎಂದು ಸಚಿವ ಜೋಶಿ ಕಿಡಿಕಾರಿದರು.

ದೇಶದಲ್ಲೆಲ್ಲೂ ಏನೂ ಕೊರತೆಯಿಲ್ಲ: ಗ್ಯಾಸ್ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನಗಳ ಕೊರತೆ ದೇಶದಲ್ಲಿ ಎಲ್ಲೂ ಇಲ್ಲ. ದೇಶದ 33 ಕೋಟಿ ಕುಟುಂಬಗಳಿಗೆ LPG ಪೂರೈಕೆಯಾಗುತ್ತಿದೆ. ಮೊದಲಿನಂತೆ ಸಿಲಿಂಡರ್ ಬುಕ್ ಮಾಡಿದ ಎರಡ್ಮೂರು ದಿನದಲ್ಲೇ ಪೂರೈಸುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

40 ದೇಶಗಳಿಂದ ಬರುತ್ತಿದೆ: ಭಾರತಕ್ಕೆ ಈ ಮೊದಲು ಕೇವಲ 20 ದೇಶಗಳಿಂದ ಪೆಟ್ರೋಲಿಯಂ ಉತ್ಪನ್ನ ಬರುತ್ತಿತ್ತು. ಆದರೆ, ನಾವಿಂದು ಅದನ್ನು 40 ರಾಷ್ಟಗಳಿಗೆ ಹೆಚ್ಚಿಸಿದ್ದೇವೆ. ಆಸ್ಟ್ರೇಲಿಯಾ, ರಷ್ಯಾ ಸೇರಿದಂತೆ ಆಫ್ರಿಕನ್ ಕಂಟ್ರಿಗಳಿಂದಲೂ ತರಿಸಿಕೊಳ್ಳಲು ಯೋಜಿಸಿದ್ದೇವೆ. ಅಲ್ಲದೆ, ದೇಶದಲ್ಲೇ ಶೇ.20ರಷ್ಟು LPG ಉತ್ಪಾದನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಆತ್ಮನಿರ್ಭರ ಭಾರತ ಕೆಡಿಸೋ ಕೆಲಸ

ಯುಪಿಎ ಕಾಲದಲ್ಲಿ ಕೇವಲ ಶೇ.1.5ರಷ್ಟಿದ್ದ ಎಥೆನಾಲ್ ಬೈಂಡಿಂಗ್ ಅನ್ನು ಇದೀಗ ಶೇ.20ಕ್ಕೆ ಹೆಚ್ಚಿಸಿದೆ. ಇದು ಮಾತ್ರವಲ್ಲದೆ ಪೆಟ್ರೋಲ್, ಡೀಸೆಲ್ ಪಂಪಗಳನ್ನು ಸೌರ ಪಂಪ್ ಗಳನ್ನಾಗಿ ಪರಿವರ್ತಿಸಲಾಗಿದೆ. ದೇಶದಲ್ಲೇ ಕಲ್ಲಿದ್ದಲು ಉತ್ಪಾದನೆ ಸಹ ಹೆಚ್ಚಿದೆ. ಇನ್ನು “ರಿನಿವೆಬಲ್ ಇಂಧನ ಉತ್ಪಾದನೆ” ಸಹ ಅತಿ ಹೆಚ್ಚಾಗಿದೆ. ಹೀಗೆ ನಮ್ಮ ದೇಶ “ಆತ್ಮನಿರ್ಭರ ಭಾರತ”ವಾಗಿದೆ. ಆದರೆ, ಕಾಂಗ್ರೆಸ್ ನಾಯಕರು “ಆತ್ಮನಿರ್ಭರ ಭಾರತ”ವನ್ನು ಕೆಡಿಸುವ ಸಂಚು ಹೂಡಿದ್ದಾರೆ ಎಂದು ಪ್ರಲ್ಹಾದ ಜೋಶಿ ಕಾಂಗ್ರೆಸ್ ವಿರುದ್ಧ ಗುಡುಗಿದರು.

ಎಲ್ಲೂ LPG ಅಭಾವವಿಲ್ಲ: ದೇಶದಲ್ಲಿ ಎಲ್ಲೂ LPG ಅಭಾವವಿಲ್ಲ. ಜನಸಾಮಾನ್ಯರ ಹಿತದೃಷ್ಟಿಯಿಂದ ಬುಕ್ಕಿಂಗ್ ನಿಯಮಿತಗೊಳಿಸಿ ಕಮರ್ಷಿಯಲ್ ಗ್ಯಾಸ್ ಮೇಲೆ ಕೇಂದ್ರ ನಿಗಾ ವಹಿಸುತ್ತಿದೆ ಅಷ್ಟೇ. ಆದರೆ, ಅಪ್ರಬುದ್ಧ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಪರಿಸ್ಥಿತಿಯ ಲಾಭ ಪಡೆದು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ