ಕರ್ನಾಟಕ ಉಪಚುನಾವಣೆ ಫಲಿತಾಂಶಕ್ಕೆ ಹಣ, ಹೆಂಡದ ಬಳಕೆಯೂ ಕಾರಣ; ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ

ಸಾಮಾನ್ಯವಾಗಿ ಚುನಾವಣೆ ಸಂದರ್ಭದಲ್ಲಿ ಜನ ಆಡಳಿತಾರೂಢ ಪಕ್ಷಕ್ಕೆ ಜೈಕಾರ ಹಾಕೋದು ಸಹಜ. ಇದರ ಜೊತೆಗೆ ಹಣ, ಹೆಂಡ, ಸರ್ಕಾರಿ ಮಷಿನರಿಗಳ ಅವ್ಯಾಹತ ಬಳಕೆಯೂ ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣ. ನಾವು ಜನರ ತೀರ್ಮಾನವನ್ನು ಒಪ್ಪಿಕೊಳ್ಳುತ್ತೇವೆ. ಕಾಂಗ್ರೆಸ್ ಪಕ್ಷದವರ ಹಾಗೆ ಇವಿಎಂ ದೋಷ ಉಂಟಾಗಿದೆ ಎನ್ನುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕ ಉಪಚುನಾವಣೆ ಫಲಿತಾಂಶಕ್ಕೆ ಹಣ, ಹೆಂಡದ ಬಳಕೆಯೂ ಕಾರಣ; ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ
ಪ್ರಲ್ಹಾದ ಜೋಶಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 23, 2024 | 6:31 PM

ಹುಬ್ಬಳ್ಳಿ: ಉಪ ಚುನಾವಣೆಯಲ್ಲಿ ಜನರು ಆಡಳಿತಾರೂಢ ಪಕ್ಷಕ್ಕೆ ಜೈಕಾರ ಹಾಕೋದು ಸಹಜ. ಜತೆಗೆ ಕರ್ನಾಟಕದಲ್ಲಿ ರಾಜ್ಯದಲ್ಲಿ ಹಣ, ಹೆಂಡ ಮತ್ತು ಸರ್ಕಾರಿ ಮಷಿನರಿಗಳ ಅವ್ಯಾಹತ ಬಳಕೆ ಈ ಫಲಿತಾಂಶಕ್ಕೆ ಕಾರಣ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶ್ಲೇಷಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಲ್ಹಾದ್ ಜೋಶಿ, ರಾಜ್ಯ ವಿಧಾನಸಭೆ ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಉಪ ಚುನಾವಣೆಗಳಲ್ಲಿ ಜನರು ಆಡಳಿತ ಪಕ್ಷದ ಜತೆ ಹೋಗೋದು ಸಾಮಾನ್ಯ. ಕ್ಷೇತ್ರದ ಅಭಿವೃದ್ಧಿ, ಹೆಚ್ಚಿನ ಅನುದಾನ ನಿರೀಕ್ಷಿಸಿ ಆಡಳಿತಾರೂಢ ಅಕ್ಷಕ್ಕೆ ಜೈಕಾರ ಹಾಕುತ್ತಾರೆ. ಆದರೆ, ಈ ಚುನಾವಣೆಯಲ್ಲಿ ಆಡಳಿತಾರೂಢರ ಹಣ-ಹೆಂಡ ಕೆಲಸ ಮಾಡಿದೆ ಎಂದು ಹೇಳಿದರು.

ಇದನ್ನೂ ಓದಿ: Shiggaon Results 2024: ಶಿಗ್ಗಾಂವಿ ಫಲಿತಾಂಶ, ಯಾಸಿರ್ ಅಹಮದ್​ ಖಾನ್​ ಪಠಾಣ್ ಗೆಲುವು; ಮುಗ್ಗರಿಸಿದ ಭರತ್

ಒಂದೊಂದು ಗ್ರಾಮ ಪಂಚಾಯತಿ ವ್ಯಾಪ್ತಿಯಯಲ್ಲಿ ಒಬ್ಬಿಬ್ಬರು ಸಚಿವರು, 10-15 ಶಾಸಕರು ಬೀಡು ಬಿಟ್ಟು ಹಣ ಬಲದಿಂದ ಚುನಾವಣೆ ಎದುರಿಸಿದ್ದಾರೆ. ಜತೆಗೆ ಸರ್ಕಾರದ ಮಶಿನರಿಗಳ ದುರ್ಬಳಕೆ ಆಗಿರುವುದೂ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಇವಿಎಂ ದೋಷ ಎನ್ನುವುದಿಲ್ಲ:

ಕರ್ನಾಟಕ ರಾಜ್ಯ ಉಪ ಚುನಾವಣೆ ಸೋತಿದ್ದೇವೆ ನಿಜ. ಆದರೆ, ನಾವು ಕಾಂಗ್ರೆಸ್ ಪಕ್ಷದವರ ಹಾಗೆ ಇವಿಎಂ ದೋಷ ಅಂತ ಹೇಳುತ್ತಿಲ್ಲ. ಉಪ ಚುನಾವಣೆಯಲ್ಲಿ ಆಡಳಿತಾರೂಢ ಅಲೆ ಸಾಮಾನ್ಯ. ಬಿಜೆಪಿಯೂ ಹಿಂದೆ ಅನೇಕ ಬಾರಿ ಉಪ ಚುನಾವಣೆಗಳಲ್ಲಿ ಗೆದ್ದಿದೆ. 2019ರ ಬಳಿಕ ನಡೆದಂತಹ ಉಪ ಚುನಾವಣೆಗಳಲ್ಲಿ ಗೆದ್ದಿದ್ದೇವೆ. ಆದರೆ, ಸಾರ್ವತ್ರಿಕ ಚುನಾವಣೆಯಲ್ಲಿ ಸೋತಿದ್ದಿದೆ. ಈ ಬಾರಿ ಜನ ತೀರ್ಮಾನ ಮಾಡಿದ್ದರೆ ಗೆಲ್ಲಬಹುದಿತ್ತು ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಕರ್ನಾಟಕ ರಾಜ್ಯ ವಿಧಾನಸಭೆ ಉಪ ಚುನಾವಣೆ ಸೋಲಿನ ಬಗ್ಗೆ ಬಿಜೆಪಿ ನಾಯಕರು ಆತ್ಮವಿಮರ್ಶೆ ಮಾಡಿಕೊಳ್ಳುತ್ತೇವೆ. ಸೋಲಾದ ಮಾತ್ರಕ್ಕೆ ಕಾಂಗ್ರೆಸ್ ಪಕ್ಷದವರ ಹಾಗೆ ಇವಿಎಂ ದೋಷ ಎನ್ನುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Channapatna Results 2024: ಚನ್ನಪಟ್ಟಣ ಫಲಿತಾಂಶ, ಸಿಪಿ ಯೋಗೇಶ್ವರ್ ಗೆಲುವು, ಮೂರನೇ ಯತ್ನದಲ್ಲೂ ನಿಖಿಲ್​ಗೆ ಸೋಲು

ದೇಶದ ಒಂದೆರೆಡು ರಾಜ್ಯಗಳಲ್ಲಿ ಬಿಟ್ಟರೆ ದೇಶಾದ್ಯಂತ ಕಾಂಗ್ರೆಸ್ ನಶಿಸಿ ಹೋಗುತ್ತಿದೆ. ಸಂಪೂರ್ಣ ನೆಲಕಚ್ಚಿದೆ. ಮಹಾರಾಷ್ಟ್ರದಲ್ಲಿ ಬರೀ 21 ಸ್ಥಾನ ಪಡೆದಿದ್ದಾರೆ. ವಿರೋಧ ಪಕ್ಷದ ಲೀಡರ್ ಆಗಲೂ ಲಾಯಕ್ಕಿಲ್ಲದಂಥ ಸ್ಥಿತಿ ತಲುಪಿದ್ದಾರೆ ಎಂದು ಜೋಶಿ ಟೀಕಿಸಿದರು.

ಕಾಂಗ್ರೆಸ್ ಕೆಲವೆಡೆ ಎರೆದುಕೊಳ್ಳೋರ ಬುಡಕ್ಕೆ ಬಗ್ಗಿರುತ್ತದೆ. ಜಾರ್ಖಂಡ್ ಅಲ್ಲಿ ಜೆಎಂಎಂ ಕೈ ಹಿಡಿದಿದ್ದರಿಂದ ಕಾಂಗ್ರೆಸ್ 10 ಸೀಟ್ ಗೆದ್ದುಕೊಂಡಿದೆ ಅಷ್ಟೇ, ಆದರೆ ಬಿಜೆಪಿ, ಜೆಎಂಎಂ ಮಧ್ಯೆ ಸಮಬಲ ಹೋರಾಟ ನಡೆದಿದೆ. ಕಾಂಗ್ರೆಸ್ ಪಕ್ಷ ಪರಜೀವಿ ಪಾರ್ಟಿ. ಅತೃಪ್ತರ ದೇಹದೊಳಕ್ಕೆ ಹೊಕ್ಕು ಇರುವಂತಹ ಅದೃಶ್ಯದ ಅಕ್ಷ ಎಂದು ಸಚಿವ ಪ್ರಲ್ಹಾದ ಜೋಶಿ ಲೇವಡಿ ಮಾಡಿದ್ದಾರೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು