ಹುಬ್ಬಳ್ಳಿಯಲ್ಲಿ ಆಕ್ಸಿಜನ್ ಬಸ್‌ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ

ತಜ್ಞರ ವರದಿಯನ್ನ ಸರ್ಕಾರ ಪರಿಶೀಲನೆ ಮಾಡುತ್ತಾ ಇದೆ. 24ರವರೆಗೆ ಸದ್ಯ ಲಾಕ್​ಡೌನ್ ಘೋಷಿಸಲಾಗಿದೆ. ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಲಾಕ್​ಡೌನ್ ಶುರುವಾಗಿದ್ದೇ 14ರಿಂದ. ಹೀಗಾಗಿ ಚೈನ್ ಲಿಂಕ್ ಕಟ್ ಆಗಲು ಸಮಯ ಬೇಕಾಗುತ್ತದೆ. ರಾಜ್ಯ ಸರ್ಕಾರ ಈ ಕುರಿತು ಮೇ 21 ಅಥವಾ 22ರಂದು ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಆಕ್ಸಿಜನ್ ಬಸ್‌ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ
ಪ್ರಲ್ಹಾದ್ ಜೋಶಿ
Follow us
preethi shettigar
|

Updated on: May 17, 2021 | 6:26 PM

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಬಸ್‌ಗೆ ಚಾಲನೆ ನೀಡಿದ್ದಾರೆ. ಉದ್ಘಾಟನೆ ಬಳಿಕ ಮಾತನಾಡಿದ ಅವರು ಜೈನ್ ಇಂಟರ್ ನ್ಯಾಷನಲ್ ಟ್ರೇಡ್ ಸಂಸ್ಥೆಯಿಂದ ಆಕ್ಸಿಜನ್ ಬಸ್ ಕೊಡುಗೆ ನೀಡಲಾಗಿದೆ. 6 ಸೀಟ್​ಗಳ ಈ ಆಕ್ಸಿಜನ್ ಬಸ್​ನಲ್ಲಿ ಆಕ್ಸಿಜನ್ ಕಾನ್ಸಟ್ರೇಟರ್ ಮೂಲಕ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಬಳಿಕ ರಾಜ್ಯದಲ್ಲಿ ಲಾಕಡೌನ್ ಮುಂದುವರಿಕೆ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಜ್ಞರ ವರದಿಯನ್ನ ಸರ್ಕಾರ ಪರಿಶೀಲನೆ ಮಾಡುತ್ತಾ ಇದೆ. 24ರವರೆಗೆ ಸದ್ಯ ಲಾಕ್​ಡೌನ್ ಘೋಷಿಸಲಾಗಿದೆ. ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಲಾಕ್​ಡೌನ್ ಶುರುವಾಗಿದ್ದೇ 14ರಿಂದ. ಹೀಗಾಗಿ ಚೈನ್ ಲಿಂಕ್ ಕಟ್ ಆಗಲು ಸಮಯ ಬೇಕಾಗುತ್ತದೆ. ರಾಜ್ಯ ಸರ್ಕಾರ ಈ ಕುರಿತು ಮೇ 21 ಅಥವಾ 22ರಂದು ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ಪಾಸಿಟಿವ್ ಸಂಖ್ಯೆ ಕಡಿಮೆ ಆಗದಿದ್ದರೇ ಇನ್ನೂ ಕೇಲವು ದಿನಗಳ ಕಾಲ ಲಾಕ್​ಡೌನ್ ಮುಂದುವರೆಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ನಂತರ ಇತ್ತಿಚೇಗೆ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಬ್ಲಾಕ್​ ಫಂಗಸ್ ವಿಚಾರವಾಗಿ ಮಾತನಾಡಿದ ಅವರು ಧಾರವಾಡ ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ಪ್ರಕರಣಗಳು ಹೆಚ್ಚು ಪತ್ತೆಯಾಗಿವೆ. ಇದೊಂದು ಸೈಡ್ ಎಪೆಕ್ಟ್ ಆಗಿದ್ದು, ಇದಕ್ಕೆ ಕೆಲ ಔಷಧಿಗಳು ಬೇಕು ಎಂದು ವೈದ್ಯರು ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ನಾನು ಭಾರತ ಸರ್ಕಾರದ ಜತೆ ಮಾತನಾಡಿ ಔಷಧಿ ವ್ಯವಸ್ಥೆ ಮಾಡಲು ಪ್ರಯತ್ನ ಮಾಡುತ್ತಿರುವೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಇದನ್ನೂ ಓದಿ:

ಸಿಡಿ ಪ್ರಕರಣದಲ್ಲಿ ಸಂತ್ರಸ್ಥೆ ಬಂದು ದೂರು ನೀಡುವವರೆಗೆ ಯಾರನ್ನೂ ಬಂಧಿಸಲು ಆಗುವುದಿಲ್ಲ-ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ವ್ಯಾಕ್ಸಿನ್ ಬಗ್ಗೆ ಮೊದಲು ನೆಗೆಟಿವ್ ಮಾತಾಡಿದ್ರು; ಜನರ ಆ ತಪ್ಪು ತಿಳಿವಳಿಕೆಯೂ ಪ್ರೊಡಕ್ಷನ್ ಮೇಲೆ ಪರಿಣಾಮ ಬೀರಿತು: ಪ್ರಹ್ಲಾದ್ ಜೋಶಿ

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ