ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಭರದ ಸಿದ್ಧತೆ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಮುಗಿದ ನಂತರವೇ ಪರೀಕ್ಷೆಗಳನ್ನು ನಡೆಸುತ್ತೇವೆ ಎಂದು ಬೆಂಗಳೂರು ಕೇಂದ್ರ ವಿವಿ ಕುಲಪತಿ ಲಿಂಗರಾಜು ಗಾಂಧಿ ಟಿವಿ9 ಕನ್ನಡಕ್ಕೆ ತಿಳಿಸಿದ್ದಾರೆ.

ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಭರದ ಸಿದ್ಧತೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: guruganesh bhat

Updated on:Jul 02, 2021 | 3:40 PM

ಬೆಂಗಳೂರು: ಪರೀಕ್ಷೆ ವಿನಾಯಿತಿ ನಿರೀಕ್ಷೆಯಲ್ಲಿದ್ದ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ವಿಶ್ವವಿದ್ಯಾಲಯಗಳು ಭರದ ಸಿದ್ಧತೆ ನಡೆಸುತ್ತಿವೆ. ಬೆಂಗಳೂರು ಕೇಂದ್ರೀಯ ವಿವಿ ಸೇರಿ 10ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳು ಈಗಾಗಲೇ ಪರೀಕ್ಷಾ ಸಿದ್ಧತೆ ನಡೆಸುತ್ತಿವೆ. ಸಮ, ಬೆಸ ಸೆಮಿಸ್ಟರ್‌ಗಳ ಪರೀಕ್ಷೆಯನ್ನ ಕೈಬಿಡಲು ಸಾಧ್ಯವಿಲ್ಲ. ಪರೀಕ್ಷೆಗೆ ಹೆಚ್ಚು ದಿನಗಳ ಅಂತರವಿಡಲಾಗುತ್ತದೆ. 30 ಅಥವಾ 45 ದಿನಗಳ ಅಂತರವಿಟ್ಟು ಸೆಮ್​ಗಳ ಪರೀಕ್ಷೆ ನಡೆಸಲಾಗುತ್ತದೆ. ಸರ್ಕಾರ ಒಪ್ಪಿಗೆ ನೀಡಿದರೆ ಜುಲೈ ಕೊನೆ ವಾರದಲ್ಲಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲು ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ದೊರೆತಿದೆ.

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಮುಗಿದ ನಂತರವೇ ಪರೀಕ್ಷೆಗಳನ್ನು ನಡೆಸುತ್ತೇವೆ ಎಂದು ಬೆಂಗಳೂರು ಕೇಂದ್ರ ವಿವಿ ಕುಲಪತಿ ಲಿಂಗರಾಜು ಗಾಂಧಿ ಟಿವಿ9 ಕನ್ನಡಕ್ಕೆ ತಿಳಿಸಿದ್ದಾರೆ. ಈಗಾಗಲೇ ಜುಲೈ 7ರೊಳಗೆ ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ವಿತರಣೆಯನ್ನು ಮುಗಿಸಲು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

TET-2021: ಶಿಕ್ಷಕರ ಅರ್ಹತಾ ಪರೀಕ್ಷೆಗೆ ದಿನಾಂಕ ಘೋಷಣೆ; ಅಗಸ್ಟ್ 22ರಂದು ಪರೀಕ್ಷೆ ಒಂದರಿಂದ ಎಂಟನೇ ತರಗತಿ ಶಾಲಾ ಶಿಕ್ಷಕರ ನೇಮಕಾತಿ ಅರ್ಹತೆ ಪಡೆಯಲು ಅಗತ್ಯವಾದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2021) ಅಗಸ್ಟ್ 22ರಂದು ನಡೆಯಲಿದೆ ಎಂದು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಒಂದರಿಂದ ಐದನೇ ತರಗತಿ ಶಿಕ್ಷಕರಾಗಲು ಟಿಇಟಿಗೆ ಅರ್ಜಿ ಸಲ್ಲಿಸುವವರು ಪಿಯುಸಿ ಹಾಗೂ ಡಿ.ಇಡಿ., ಉತ್ತೀರ್ಣರಾಗಿರಬೇಕು ಹಾಗೂ ಆರರಿಂದ ಎಂಟನೇ ತರಗತಿ ಶಿಕ್ಷಕರಾಗಲು ಅರ್ಜಿ ಸಲ್ಲಿಸುವವರು ಪದವಿ ಮತ್ತು ಡಿ.ಇಡಿ, ಅಥವಾ ಪದವಿಯೊಂದಿಗೆ ಬಿಇಡಿ ಅಥವಾ ಬಿ.ಎ.ಇಡಿ/ ಬಿ.ಎಸ್.ಸಿ.ಇಡಿಯಲ್ಲಿ ಉತ್ತೀರ್ಣರಾಗಿರಬೇಕು. ಕೊನೆ ವರ್ಷಗಳ ಡಿಇಡಿ,  ಬಿಇಡಿ, ಬಿಎಇಡಿ/ ಬಿಎಸ್ಸಿಇಡಿ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷೆಯಲ್ಲಿರುವವರೂ ಸಹ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಹ ಅಭ್ಯರ್ಥಿಗಳು ಇಲಾಖೆಯ ವೆಬ್​ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇಂದಿನಿಂದಲೇ ಅರ್ಜಿ ಸಲ್ಲಿಸಬಹುದಾಗಿದ್ದು ಜುಲೈ 20 ಕೊನೆಯ ದಿನವಾಗಿದೆ. ಅಗಸ್ಟ್ 22ರಂದು ಬೆಳಗ್ಗೆ 9.30ರಿಂದ 12 ಗಂಟೆ ಮತ್ತು ಮಧ್ಯಾಹ್ನ 2 ಗಂಟೆಯಿಂದ 4.30ರವರೆಗೆ ಪರೀಕ್ಷೆಗಳು ನಡೆಯಲಿವೆ.  ಪತ್ರಿಕೆ 150 ಅಂಕಗಳನ್ನು ಹೊಂದಿರುತ್ತವೆ.  ಪ್ರವೇಶ ಪತ್ರಗಳನ್ನು ದಿನಾಂಕ ಆ. 12ರಿಂದ ಆನ್​ಲೈನ್​ನಲ್ಲಿ ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. www.schooleducation.kar.nic.inನಲ್ಲಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Sudhindra Haldodderi: ಸುಪ್ರಸಿದ್ಧ ವಿಜ್ಞಾನ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ ನಿಧನ

ಕೊವಿಡ್ ಪರಿಹಾರ ಪಡೆಯಲು ಮನೆ ಕೆಲಸದವರಿಂದ ಕಮಿಷನ್:​ ಹೈಕೋರ್ಟ್ ಆಕ್ಷೇಪ

(Universities Preparing exams for undergraduate and postgraduate students 2021

Published On - 3:36 pm, Fri, 2 July 21

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್