Karnataka Unlock 3.0: ಇನ್ಮುಂದೆ ರಾಜ್ಯದಲ್ಲಿ ವಾರಾಂತ್ಯ ಕರ್ಫ್ಯೂ ಇಲ್ಲ, ರಾತ್ರಿ ಕರ್ಫ್ಯೂ ಮಾತ್ರ ಮುಂದುವರಿಕೆ: ಇಲ್ಲಿದೆ ವಿವರ
Weekend Curfew: ಜುಲೈ 5ರ ಮುಂಜಾನೆ 5 ಗಂಟೆಯಿಂದ ಅನ್ಲಾಕ್ 3.O ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಶೇ.100ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಎಲ್ಲಾ ಮಾಲ್‌ಗಳು ಓಪನ್ ಮಾಡಲು ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ದೇವಾಲಯಗಳನ್ನು ತೆರೆಯುವ ಬಗ್ಗೆ ಕೆಲವು ನಿರ್ಬಂಧಗಳೊಂದಿಗೆ ಅವಕಾಶ ನೀಡಲಾಗಿದೆ.
ಬೆಂಗಳೂರು: ಕರ್ನಾಟಕದಾದ್ಯಂತ ಸೋಮವಾರದಿಂದ (ಜುಲೈ5)ಪ್ರತಿದಿನ ಸಂಜೆ 9ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಹಾಗೂ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಲಾಕ್ಡೌನ್ ತೆರವು ಪ್ರಕ್ರಿಯೆಯ ಮೂರನೇ ಹಂತದಲ್ಲಿ ಈ ಸಡಿಲಿಕೆಯನ್ನು ಘೋಷಿಸಿದ ಅವರು, ಧಾರ್ಮಿಕ, ರಾಜಕೀಯ ಇತರ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ. ಪಬ್ಗಳು ಕಾರ್ಯನಿರ್ವಹಿಸಲು ಅವಕಾಶ ಇಲ್ಲ ಹಾಗೂ ಬಾರ್ಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್ಗಳು ತೆರೆಯಲು ಅವಕಾಶ ನೀಡಲಾಗಿಲ್ಲ ಎಂದು ಅವರು ತಿಳಿಸಿದರು.
ಜುಲೈ 5ರ ಮುಂಜಾನೆ 5 ಗಂಟೆಯಿಂದ ಅನ್ಲಾಕ್ 3.O ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಶೇ.100ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಎಲ್ಲಾ ಮಾಲ್‌ಗಳು ಓಪನ್ ಮಾಡಲು ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ದೇವಾಲಯಗಳನ್ನು ತೆರೆಯುವ ಬಗ್ಗೆ ಕೆಲವು ನಿರ್ಬಂಧಗಳೊಂದಿಗೆ ಅವಕಾಶ ನೀಡಲಾಗಿದೆ. ಭಕ್ತರಿಗೆ ದೇವಾಲಯ ಪ್ರವೇಶ, ದೇವರ ದರ್ಶನ ಮತ್ತು ಆರತಿ ಸೇವೆಗಷ್ಟೇ ಅವಕಾಶ ಮಾಡಿಕೊಡಲಾಗಿದೆ.
ಕೊನೆಗೂ ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆಗಳಾದ ಬಸ್ ಮತ್ತು ಮೆಟ್ರೊ ರೈಲುಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಶೇಕಡಾ 100ರಷ್ಟು ಪ್ರಯಾಣಿಕರು ಪ್ರಯಾಣ ಬೆಳೆಸುವ ಸಮಯ ಬಂದಿದೆ. ಸೋಮವಾರದಿಂದಲೇ (ಜುಲೈ 5) ರಾಜ್ಯಾದ್ಯಂತ ಬಸ್ ಮತ್ತು ಮೆಟ್ರೊಗಳ ಸಂಪೂರ್ಣ ಸೇವೆಯನ್ನು ಸಾರ್ವಜನಿಕರು ಪಡೆಯಬಹುದಾಗಿದ್ದು, ದೈಹಿಕ ಅಂತರ ಕಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಅನ್ಲಾಕ್ 3.0ದ ಪ್ರಯುಕ್ತ ಈ ವಿನಾಯಿತಿ ನೀಡಲಾಗಿದೆ.
ಇದನ್ನೂ ಓದಿ:
(Unlock 3.0 No weekend curfew by July 5th but night curfew will be continued in Karnataka announces CM BS Yediyurappa)