AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಂತ್ರಣ: ರಾಜ್ಯ ಸರ್ಕಾರದಿಂದ ಅನ್‌ಲಾಕ್‌-6 ಮಾರ್ಗಸೂಚಿ ಬಿಡುಗಡೆ

ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸರಿಸಿ ಗೈಡ್‌ಲೈನ್ಸ್‌ ಬಿಡುಗಡೆ ಮಾಡಲಾಗಿದ್ದು, ಡಿಸೆಂಬರ್‌ 2ರಿಂದ ಅನ್‌ಲಾಕ್‌-6 ಗೈಡ್‌ಲೈನ್ಸ್ ಅನ್ವಯವಾಗಲಿದೆ. ಮಾಸ್ಕ್ ಧರಿಸದವರಿಗೆ ನಗರದಲ್ಲಿ 250 ರೂಪಾಯಿ ದಂಡ ಹಾಗೂ ಗ್ರಾಮೀಣ ಭಾಗದಲ್ಲಿ ಮಾಸ್ಕ್ ಧರಿಸದಿದ್ರೆ 100 ರೂ. ದಂಡ ನಿಗಧಿ ಮಾಡಲಾಗಿದೆ.

ಕೊರೊನಾ ನಿಯಂತ್ರಣ: ರಾಜ್ಯ ಸರ್ಕಾರದಿಂದ ಅನ್‌ಲಾಕ್‌-6 ಮಾರ್ಗಸೂಚಿ ಬಿಡುಗಡೆ
ಪ್ರಾತಿನಿಧಿಕ ಚಿತ್ರ
Follow us
ಪೃಥ್ವಿಶಂಕರ
|

Updated on: Nov 28, 2020 | 8:56 AM

ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ನಿಯಂತ್ರಣ ವಿಚಾರದ ಬಗ್ಗೆ ರಾಜ್ಯ ಸರ್ಕಾರದಿಂದ ಅನ್‌ಲಾಕ್‌-6 ಗೈಡ್‌ಲೈನ್ಸ್‌ ಬಿಡುಗಡೆ ಮಾಡಲಾಗಿದೆ.

ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸರಿಸಿ ಗೈಡ್‌ಲೈನ್ಸ್‌ ಬಿಡುಗಡೆ ಮಾಡಲಾಗಿದ್ದು, ಡಿಸೆಂಬರ್‌ 2ರಿಂದ ಅನ್‌ಲಾಕ್‌-6 ಗೈಡ್‌ಲೈನ್ಸ್ ಅನ್ವಯವಾಗಲಿದೆ. ಮಾಸ್ಕ್ ಧರಿಸದವರಿಗೆ ನಗರದಲ್ಲಿ 250 ರೂಪಾಯಿ ದಂಡ ಹಾಗೂ ಗ್ರಾಮೀಣ ಭಾಗದಲ್ಲಿ ಮಾಸ್ಕ್ ಧರಿಸದಿದ್ರೆ 100 ರೂ. ದಂಡ ನಿಗಧಿ ಮಾಡಲಾಗಿದೆ.

ಕಂಟೇನ್ಮೆಂಟ್‌ನಲ್ಲಿ ಜನರ ಸಂಚಾರ ಕಟ್ಟುನಿಟ್ಟಾಗಿ ನಿರ್ಬಂಧ ಮಾಡಲಾಗಿದೆ. ಕಂಟೇನ್ಮೆಂಟ್ ವಲಯದಲ್ಲಿ ಜನರ ಸಂಚಾರ ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ಅಗತ್ಯ ಮತ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಎಲ್ಲಾ ಸೌಲಭ್ಯ ನಿರ್ಬಂಧಿಸಬೇಕು ಜೊತೆಗೆ ಕಣ್ಗಾವಲು ತಂಡ ಕಂಟೇನ್ಮೆಂಟ್ ವಲಯದಲ್ಲಿ ಮನೆ ಮನೆಗೆ ಹೋಗಿ ಪರೀಕ್ಷೆ ನಡೆಸಬೇಕು. ಹಾಗೂ ಸೋಂಕಿತ ವ್ಯಕ್ತಿಯಿಂದ ಸಂಪರ್ಕಕ್ಕೆ ಬಂದವರನ್ನು ಕ್ವಾರಂಟೈನ್​ಗೆ ಒಳಪಡಿಸಬೇಕು ಎಂದು ನಿರ್ದರಿಸಲಾಗಿದೆ.

ಕಚೇರಿಗಳಲ್ಲಿ ಕಡ್ಡಾಯವಾಗಿ ದೈಹಿಕ ಅಂತರ ಅನುಸರಿಸಬೇಕು. ಶೇ.10ರಷ್ಟು ಕೊವಿಡ್‌-19 ಸೋಂಕಿತರಿರುವ ನಗರಗಳ ಕಚೇರಿಗಳಲ್ಲಿ ಒಮ್ಮೆಯೇ ಎಲ್ಲರೂ ಕಾರ್ಯನಿರ್ವಹಿಸುವಂತಿಲ್ಲ. ಅಲ್ಲದೆ ಸಿಬ್ಬಂದಿ ಒಟ್ಟಿಗೆ ಕಾರ್ಯನಿರ್ವಹಿಸದಂತೆ ಕ್ರಮ ಕೈಗೊಳ್ಳಬೇಕು. 65 ವರ್ಷ ಮೇಲ್ಪಟ್ಟವರು ಮತ್ತು 10 ವರ್ಷದೊಳಗಿನ ಮಕ್ಕಳು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ನೋಡಿಕೊಳ್ಳಬೇಕು ಎಂದು ಅನ್‌ಲಾಕ್‌-6 ಗೈಡ್‌ಲೈನ್ಸ್‌ ನಲ್ಲಿ ನಿರ್ಧರಿಸಲಾಗಿದೆ.