ಅನ್​ಲಾಕ್ ಮಾಡುವುದು ಸುಲಭ ಆದರೆ, ಅನ್​ಲಾಕ್ ನಂತರ ವೈರಸ್ ಹರಡುವ ಸಾಧ್ಯತೆ‌ಯಿದೆ: ಗೌರವ್​ ಗುಪ್ತಾ

ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ನೈಟ್ ಕರ್ಫ್ಯೂ ಹಾಗೂ ವಿಕೇಂಡ್ ಕರ್ಫ್ಯೂ ಸಡಿಲಿಕೆ ಆಗಲಿದೆ. ಈ ಬಗ್ಗೆ ಅಧಿಕಾರಿಗಳ ಹಂತದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ಅನ್​ಲಾಕ್ ಮಾಡುವುದು ಸುಲಭ ಆದರೆ, ಅನ್​ಲಾಕ್ ನಂತರ ವೈರಸ್ ಹರಡುವ ಸಾಧ್ಯತೆ‌ಯಿದೆ: ಗೌರವ್​ ಗುಪ್ತಾ
ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ
Follow us
TV9 Web
| Updated By: preethi shettigar

Updated on: Jul 02, 2021 | 12:23 PM

ಬೆಂಗಳೂರು: ಅನ್​ಲಾಕ್ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್​ ಗುಪ್ತಾ ಕೊರೊನಾ‌ ಸೋಂಕಿತರ ಸಂಖ್ಯೆ ಕಡಿಮೆ ಆಗಿರುವ ಕಾರಣ ಎಲ್ಲಾ ಚಟುವಟಿಕೆಗಳನ್ನು ಓಪನ್ ಮಾಡಬೇಕಿದೆ.ಎಲ್ಲಾ ವ್ಯಾಪಾರ- ವ್ಯವಹಾರವನ್ನು ಆರಂಭಿಸಲು ಸಾಕಷ್ಟು ಜನ ಮನವಿ ಮಾಡಿಕೊಂಡಿದ್ದಾರೆ. ಆದರೆ ಅನ್​ಲಾಕ್ ಮಾಡುವುದು ಸುಲಭ ಆದರೆ, ಅನ್​ಲಾಕ್ ನಂತರ ವೈರಸ್ ಹರಡುವ ಸಾಧ್ಯತೆ‌ಯಿದೆ. ಸದ್ಯ ಬೃಹತ್ ಮಾರುಕಟ್ಟೆಗಳನ್ನು ಓಪನ್ ಮಾಡಲ್ಲ. ಮಾರುಕಟ್ಟೆಗಳ ಬಗ್ಗೆ ಸರ್ಕಾರದ ಮಟ್ಟದಲ್ಲಿ ಆದೇಶ ಆಗುತ್ತದೆ ಎಂದು ತಿಳಿಸಿದ್ದಾರೆ.

ಅನ್​ಲಾಕ್​ 3.0 ವಿಚಾರವಾಗಿ ಮಾತನಾಡಿದ ಅವರು ಥಿಯೇಟರ್​ಗಳು ತುಂಬಾ ಅಪಾಯಕಾರಿ ಇದ್ದ ಹಾಗೇ. ಎರಡ್ಮೂರು ಗಂಟೆಗಳ ಕಾಲ ಜನರು ಮುಚ್ಚಿದ ಕೋಣೆಯಲ್ಲಿ ಇರಬೇಕಾಗುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಥಿಯೇಟರ್​ಗಳನ್ನ ಓಪನ್ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ನೈಟ್ ಕರ್ಫ್ಯೂ ಹಾಗೂ ವಿಕೇಂಡ್ ಕರ್ಫ್ಯೂ ಸಡಿಲಿಕೆ ಆಗಲಿದೆ. ಈ ಬಗ್ಗೆ ಅಧಿಕಾರಿಗಳ ಹಂತದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ಸೋಮವಾರದಿಂದಲೇ ಮಾಲ್ ಓಪನ್ ಸಾಧ್ಯತೆ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆ ಪ್ರಾರಂಭಿಸಿದೆ. ತಜ್ಞರ ಸಲಹೆಗೆ ಅನುಸಾರವಾಗಿ ಈಗಾಗಲೇ ಅನ್​ಲಾಕ್​ 2.0 ಆರಂಭವಾಗಿದ್ದು, ಇದೀಗ ಜುಲೈ 5 ರಿಂದ ಅನ್​ಲಾಕ್​ 3.O ಜಾರಿಯಾಗಲಿದೆ. ಇದರಲ್ಲಿ ರಾಜ್ಯ ಸರ್ಕಾರ ಮಾಲ್​ಗೆ ರಿಲೀಫ್​ ನೀಡಲು ನಿರ್ಧರಿಸಿದೆ. ಇನ್ನು ಥಿಯೇಟರ್, ಪಬ್, ಕ್ಲಬ್, ಬಾರ್, ಸ್ವಿಮ್ಮಿಂಗ್ ಪೂಲ್​ಗಳಿಗೂ ರಿಲೀಫ್ ನೀಡುವ ಸಾಧ್ಯತೆ ಇದೆ.

ಅನ್​ಲಾಕ್ 3.O ನಲ್ಲಿ ನೈಟ್ ಕರ್ಫ್ಯೂ ಜಾರಿಗೆ ಬಂದಲ್ಲಿ ಮಾಲ್​ಗಳ ತೆರವು ಸಮಯದಲ್ಲಿ ಕೆಲವೊಂದು ಬದಲಾವಣೆಯಾಗಲಿದೆ. ಅದರಂತೆ ಬೆಳಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆವರೆಗೂ ಮಾಲ್​ಗಳು ಓಪನ್ ಮಾಡಲು ಯೋಜನೆ ರೂಪಿಸಲಾಗಿದೆ. ಸಾಮಾನ್ಯವಾಗಿ 10 ಗಂಟೆಗೆ ಓಪನ್ ಆಗುತ್ತಿದ್ದ ಮಾಲ್​ಗಳು. ನೈಟ್ ಕರ್ಫ್ಯೂ ಜಾರಿಗೆ ಬಂದರೆ, ಬೆಳಗ್ಗೆ ಬೇಗನೆ ಓಪನ್ ಮಾಡಲು ಯೋಜನೆ ರೂಪಿಸಲಾಗಿದೆ.

ಕೊರೊನಾ ಪಾಸಿಟಿವ್ ರೇಟ್ ಕಡಿಮೆ ಇದ್ದಲ್ಲಿ ಅನ್​ಲಾಕ್​ 3.O ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. ಅದರಂತೆ ರಾಜ್ಯದ ಪಾಸಿಟಿವ್ ರೇಟ್ ಗಮನದಲ್ಲಿರಿಸಿಕೊಂಡು ಮಾಲ್​ ಓಪನ್​ಗೆ ಮುಂದಾಗಿದೆ. ಇನ್ನು ಕಳೆದ ಎರಡೂವರೆ ತಿಂಗಳಿಂದ ಬಂದ್ ಆಗಿದ್ದ ಥಿಯೇಟರ್, ಪಬ್, ಬಾರ್, ಕ್ಲಬ್, ಸ್ವಿಮ್ಮಿಂಗ್ ಪೂಲ್​ಗಳಿಗೆ ಅನುಮತಿ ಕೊಡುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Unlock: 3ನೇ ಹಂತದ ಅನ್​ಲಾಕ್; ಸೋಮವಾರದಿಂದಲೇ ಮಾಲ್ ಓಪನ್ ಸಾಧ್ಯತೆ, ಷರತ್ತುಗಳು ಅನ್ವಯ

ಜನಸಾಮಾನ್ಯರ ಜೀವನ ಸಹಜ ಸ್ಥಿತಿಗೆ ತರಬೇಕಿದೆ, ಸಭೆಯಲ್ಲಿ ನಿರ್ಧಾರ ಮಾಡುತ್ತೇವೆ: ಗೌರವ್ ಗುಪ್ತಾ

ಚಂಚಲಗೂಡ ಜೈಲಿನಿಂದ ಬಿಡುಗಡೆ ಆಗಿ ಮನೆಯತ್ತ ಹೊರಟ ಅಲ್ಲು ಅರ್ಜುನ್
ಚಂಚಲಗೂಡ ಜೈಲಿನಿಂದ ಬಿಡುಗಡೆ ಆಗಿ ಮನೆಯತ್ತ ಹೊರಟ ಅಲ್ಲು ಅರ್ಜುನ್
ಪ್ರಮುಖರೇ ನಾಮಿನೇಟ್​; ಯಾರಿಗೆ ಈ ವಾರ ಗೇಟ್ ಪಾಸ್?
ಪ್ರಮುಖರೇ ನಾಮಿನೇಟ್​; ಯಾರಿಗೆ ಈ ವಾರ ಗೇಟ್ ಪಾಸ್?
ಮಕ್ಕಳ ಮೇಲೆ ಗ್ರಹಗಳ ಪ್ರಭಾವ ಹೇಗಿರುತ್ತೆ ? ವಿಡಿಯೋ ನೋಡಿ
ಮಕ್ಕಳ ಮೇಲೆ ಗ್ರಹಗಳ ಪ್ರಭಾವ ಹೇಗಿರುತ್ತೆ ? ವಿಡಿಯೋ ನೋಡಿ
Daily Horoscope: ಈ ರಾಶಿಯವರಿಗೆ ಇಂದು ಹೆಚ್ಚಿನ ಧನ ಪ್ರಾಪ್ತಿಯಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಹೆಚ್ಚಿನ ಧನ ಪ್ರಾಪ್ತಿಯಾಗಲಿದೆ
ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ದರ್ಶನ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಪೊಲೀಸರ ಬಿಗಿ ಭದ್ರತೆ
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಆಸ್ಪತ್ರೆಯೊಳಗೆ ಜೋರಾಗಿ ಹಾಡು ಹಾಕಿ ನರ್ಸ್​ಗಳ ಡ್ಯಾನ್ಸ್
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ಗುಲ್ಮಾರ್ಗ್​ನಲ್ಲಿ ತಾಜಾ ಹಿಮಪಾತ; ಕುಣಿದು ಕುಪ್ಪಳಿಸಿದ ಪ್ರವಾಸಿಗರು
ದತ್ತಜಯಂತಿ: ಶೋಭಾಯಾತ್ರೆಯ ಮನಮೋಹಕ ದೃಶ್ಯ ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ದತ್ತಜಯಂತಿ: ಶೋಭಾಯಾತ್ರೆಯ ಮನಮೋಹಕ ದೃಶ್ಯ ಡ್ರೋನ್​ನಲ್ಲಿ ಕಂಡಿದ್ದು ಹೀಗೆ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಬಿಜೆಪಿ ಅಧಿಕಾರದಲ್ಲಿದ್ದಾಗ ಯತ್ನಾಳ್ ಯಾಕೆ ವಕ್ಫ್ ವಿಷಯ ಮಾತಾಡಲಿಲ್ಲ: ಸಚಿವ
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು
ಕ್ಲಾಸ್​ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು