
ಬೆಂಗಳೂರು, ಫೆಬ್ರವರಿ 28: ಬೆಂಗಳೂರಿನ (Bengaluru) ಆಹಾರಪ್ರಿಯರಿಗೆ ಆಹಾರ ಇಲಾಖೆ (Food Department) ಮತ್ತೊಂದು ಶಾಕಿಂಗ್ ಸುದ್ದಿ ನೀಡಿದೆ. ಇಡ್ಲಿ ಬಳಿಕ ಹಸಿರು ಬಟಾಣಿ (Peas) ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗದಿಂದ ದೃಢಪಟ್ಟಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿನ ಸುಮಾರು 36 ಮಾದರಿಯ ಹಸಿರು ಬಟಾಣಿ ಮಾದರಿಗಳನ್ನು ಪಡೆದಿದ್ದ ಆಹಾರ ಇಲಾಖೆ ಅವುಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿತ್ತು. ಇದೀಗ ಪ್ರಯೋಗಾಲಯ ವರದಿ ಬಂದಿದ್ದು, 28 ಕ್ಕೂ ಹೆಚ್ಚು ಹಸಿರು ಬಟಾಣಿ ಮಾದರಿಗಳು ಅಸುರಕ್ಷಿತ ಎಂಬ ಶಾಕಿಂಗ್ ವಿಚಾರ ಬೆಳಕಿಗೆ ಬಂದಿದೆ.
ಬಟಾಣಿ ಹಸಿರಾಗಿ ಕಾಣಲು ಕೃತಕ ಬಣ್ಣ ಬಳಸಲಾಗುತ್ತಿದೆ ಎಂಬ ಅಂಶ ವರದಿಯಲ್ಲಿ ಉಲ್ಲೇಖವಾಗಿದೆ.
ಕಲರ್ ಬಳಕೆಯಿಂದ ಬಟಾಣಿ ಸಾಮಾನ್ಯಕ್ಕಿಂತ ಹೆಚ್ಚು ಹಸಿರಾಗಿ ಕಾಣುತ್ತಿದ್ದು, ಜನರನ್ನು ಆಕರ್ಶಿಸುತ್ತಿದೆ. ಬಟಾಣಿಯಲ್ಲಿ ಬಣ್ಣ ಬಳಕೆ ಮಾಡುತ್ತಿರುವುದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಬಟಾಣಿಯ ಬಣ್ಣ ಕಿಡ್ನಿಯ ಮೇಲೆ ಪರಿಣಾಮ ಬೀರಲಿದೆ ಎಂದು ವರದಿಯಲ್ಲಿ ಬಹಿರಂಗಗೊಂಡಿದೆ. ಈ ಹಿನ್ನೆಲೆಯಲ್ಲಿ ಅಲರ್ಟ್ ಆದ ಆರೋಗ್ಯ ಹಾಗೂ ಆಹಾರ ಸುರಕ್ಷತಾ ಇಲಾಖೆ ಕೃತಕ ಬಣ್ಣ ಬಳಸಿ ಬಟಾಣಿ ಮಾರಟ ಮಾಡುವ ವ್ಯಾಪರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ.
ಇದನ್ನೂ ಓದಿ: ಬೆಂಗಳೂರಿಗರಿಗೆ ಶಾಕಿಂಗ್ ಸುದ್ದಿ: ಇಡ್ಲಿ ತಿಂದರೆ ಬರಬಹುದು ಕ್ಯಾನ್ಸರ್! ಆಘಾತಕಾರಿ ವರದಿ ಬಹಿರಂಗ
ಬಟಾಣಿಯಲ್ಲಿ ಕೃತಕ ಕಲರ್ ಬಳಕೆ ವಿಚಾರವಾಗಿ ಆಹಾರ ತಜ್ಞೆ ಡಾ. ಕೀರ್ತಿ ಹಿರಿಸಾವೆ ಮಾತನಾಡಿ, ಬಟಾಣಿಯಲ್ಲಿ ಕ್ಲೋರೋಫಿಲ್ ಅಂಶ ಇರುತ್ತೆ. ಹಸಿ ಬಟಾಣಿಗೆ ಮ್ಯಾಲಚೈಟ್ ಗ್ರೀನ್ ಬಳಕೆ ಮಾಡಲಾಗುತ್ತದೆ. ಇದು ಮನುಷ್ಯರ ಆರೋಗ್ಯಕ್ಕೆ ಒಳ್ಳೆಯದಲ್ಲ. ಈ ಮ್ಯಾಲಚೈಟ್ ಗ್ರೀನ್ ಕಿಡ್ನಿ ಮೇಲೆ ಪರಿಣಾಮ ಬೀರುತ್ತದೆ. ಇದು ಯೂರಿನ್ ಪ್ರೊಡಕ್ಷನ್ ಹಾಗೂ ಯೂರಿನ್ ಪ್ಯೂರಿಫೈ ಮೇಲೆ ಪರಿಣಾಮ ಬೀರುತ್ತದೆ. ಈ ಹಿನ್ನೆಲೆ ಬಣ್ಣ ಹಾಕಿದ ಬಟಾಣಿ ಬಳಕೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಹೇಳಿದರು.
ಆಹಾರ ಇಲಾಖೆ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ಬೆಂಗಳೂರಿನ ವಿವಿಧ ನಗರದಲ್ಲಿನ ಹೋಟೆಲ್ಗಳಿಗೆ ಭೇಟಿ ನೀಡಿದ್ದಾರೆ. ವಲಯವಾರು ಹೋಟೆಲ್ಗಳ ಮೇಲೆ ರೇಡ್ ಮಾಡಿರುವ ಆಹಾರ ಇಲಾಖೆ ಅಧಿಕಾರಿಗಳು ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಬಳಕೆ ಆಗುತ್ತಿದಿಯಾ ಎಂದು ಪರಿಶೀಲನೆ ನಡೆಸಿದರು. ಪ್ಲಾಸ್ಟಿಕ್ ಬಳಸುತ್ತಿರುವ ಹೋಟೆಲ್ಗಳಿಗೆ ನೋಟಿಸ್ ಜೊತೆಗೆ ದಂಡ ಹಾಕುತ್ತಿದ್ದಾರೆ.
Published On - 9:13 am, Fri, 28 February 25