ಭದ್ರಾ ಮೇಲ್ದಂಡೆ ಯೋಜನೆಯ ಬಾಕಿ ಇರುವ ಕೆಲಸಕಾರ್ಯಗಳು ಶೀಘ್ರದಲ್ಲೇ ಪೂರ್ಣ: ಸಿಎಂ ಬೊಮ್ಮಾಯಿ

ಭದ್ರಾ ಮೇಲ್ದಂಡೆ ಯೋಜನೆ ಕಾಮಗರಿ ಬಗ್ಗೆ ಹೇಳಿಕೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಾಕಿ ಇರುವ ಪ್ರಕ್ರಿಯೆಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದರು.

ಭದ್ರಾ ಮೇಲ್ದಂಡೆ ಯೋಜನೆಯ ಬಾಕಿ ಇರುವ ಕೆಲಸಕಾರ್ಯಗಳು ಶೀಘ್ರದಲ್ಲೇ ಪೂರ್ಣ: ಸಿಎಂ ಬೊಮ್ಮಾಯಿ
ಭದ್ರಾ ಮೇಲ್ದಂಡೆ ಯೋಜನೆಯ ಬಾಕಿ ಇರುವ ಪ್ರಕ್ರಿಯೆಗಳು ಶೀಘ್ರದಲ್ಲೇ ಪೂರ್ಣಗೊಳಿಸಲಾಗುವುದು ಎಂದ ಸಿಎಂ ಬಸವರಾಜ ಬೊಮ್ಮಾಯಿ
Follow us
TV9 Web
| Updated By: Rakesh Nayak Manchi

Updated on: Oct 22, 2022 | 12:33 PM

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ (Upper Bhadra Project) ಕಾಮಗರಿ ತ್ವರಿತಗತಿಗೆ ಕ್ರಮ ಕೈಗೊಳ್ಳಲಾಗುವುದು. ಕೆಲವೆಡೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆ ಶೀಘ್ರದಲ್ಲೇ ಪೂರ್ಣ ಗೊಳಿಸಲಾಗುವುದು. ಕೆಲವು ರೈತರ ಸಮಸ್ಯೆಗಳೂ ಇವೆ. ಅದನ್ನೂ ಬಗೆಹರಿಸುತ್ತೇವೆ. ಒಂದೊಮ್ಮೆ ಈ ಯೊಜನೆ ಪೂರ್ಣಗೊಂಡರೆ ರಾಜ್ಯದಲ್ಲಿಯೇ ಮೊದಲ ರಾಷ್ಟ್ರೀಯ ನೀರಾವರಿ ಯೋಜನೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿ ಮಾತನಾಡಿ, ಸಾರ್ವಜನಿಕ ಬಂಡವಾಳ ಹೂಡಿಕೆ ಸಮಿತಿ (PIB) ಅನುಮೋದನೆ ಆಗಿದೆ. ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ಆಗಬೇಕಿದೆ. ಈಗಾಗಲೇ ಕೇಂದ್ರ ಜಲ ಸಂಪನ್ಮೂಲ ಸಚಿವರ ಜೊತೆ ಮಾತಾಡಿದ್ದೇನೆ ಎಂದರು.

ಇನ್ನು, ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಹೇಳಿಕೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ, ಶೀಘ್ರದಲ್ಲೇ ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ ಎಂದರು. ಚಿತ್ರದುರ್ಗ ಜಿಲ್ಲೆಗೆ ಮಂತ್ರಿಗಿರಿ ನೀಡದೆ ಮಲತಾಯಿ ಧೋರಣೆ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ಮಾತನಾಡಿದ ಅವರು, ಚಿತ್ರದುರ್ಗ ಜಿಲ್ಲೆಗೂ ಪ್ರಾತಿನಿಧ್ಯ ಕೊಡಲು ಪ್ರಯತ್ನಿಸುತ್ತೇವೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ಮತ್ತೆ ಮಂತ್ರಿಗಿರಿ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದರು. ಇದೇ ವೇಳೆ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ಬಗ್ಗೆ ಪತ್ರಕರ್ತರು ಪ್ರಶ್ನೆ ಕೇಳಿದಾಗ, ನಿಮ್ಮನ್ನು ಕೇಳಿ ಮಾಡುತ್ತೇವೆಂದು ಹಾಸ್ಯ ಚಟಾಕಿ ಹಾರಿಸಿದರು.

ಹೊಸದುರ್ಗದಲ್ಲಿ ನ್ಯಾಯಾಲಯದ ಸುವರ್ಣ ಮಹೋತ್ಸವ

ಜಿಲ್ಲೆಯ ಹೊಸದುರ್ಗದಲ್ಲಿ ನ್ಯಾಯಾಲಯದ ಸುವರ್ಣ ಮಹೋತ್ಸವ ಆಚರಸಿಲಾಗುತ್ತಿದೆ. ಚಿತ್ರದುರ್ಗ ಜಿಲ್ಲಾ ನ್ಯಾಯಾಂಗ ಇಲಾಖೆ, ವಕೀಲರ ಸಂಘದಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮವನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎ.ಎಸ್.ಭೋಪಣ್ಣ ಅವರು ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಕೃಷಿ ಸಚಿವ ಬಿ.ಸಿ.ಪಾಟೀಲ್, ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತಿ ಇದ್ದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ