ದುರ್ಗಕ್ಕೆ ಬರಲಿದೆ ಭದ್ರಾ ನೀರು, ಆದ್ರೆ ಇಲ್ಲಿನ ಕೆರೆಕಟ್ಟೆಗೆ ಅದನ್ನ ಹಿಡಿದಿಡುವ ಸಾಮರ್ಥ್ಯ ಇದೆಯಾ?

ಚಿತ್ರದುರ್ಗ: ಬರದನಾಡು ಚಿತ್ರದುರ್ಗ ಜನರ ಬಹುದಿನಗಳ ಕನಸು ಭದ್ರಾ ಮೇಲ್ದಂಡೆ ಯೋಜನೆ ಕೊನೇ ಹಂತದಲ್ಲಿದೆ. ಚಿಕ್ಕಮಗಳೂರು ಜಿಲ್ಲೆ ಮುತ್ತಿನಕೊಪ್ಪ, ಭದ್ರಾ ಡ್ಯಾಂ ಹಾಗೂ ಅಜ್ಜಂಪುರ ಬಳಿ ಭರದಿಂದ ಕೆಲಸ ನಡೀತಿದೆ. ಈ ಯೋಜನೆಯಿಂದಾಗಿ ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ 193 ಹಳ್ಳಿಗಳಿಗೆ ನೀರಾವರಿ ಸೌಲಭ್ಯ ಸಿಗಲಿದೆ. ಅಲ್ಲದೆ, ನಾಲ್ಕು ಜಿಲ್ಲೆಗಳ 156 ಕೆರೆಗಳಿಗೆ ನೀರು ತುಂಬಿಸುವ ಉದ್ದೇಶ ಕೂಡ ಇದೆ. ಆದ್ರೆ, ನೀರು ತುಂಬಬೇಕಾದ ಕೆರೆಗಳೇ ದುಸ್ಥಿತಿಯಲ್ಲಿವೆ. ಚಿತ್ರದುರ್ಗ ಜಿಲ್ಲೆಯ ಬಹುತೇಕ ಕೆರೆಗಳಲ್ಲಿ ಗಿಡ ಗಂಟಿಗಳು ಬೆಳೆದಿದ್ದು, […]

ದುರ್ಗಕ್ಕೆ ಬರಲಿದೆ ಭದ್ರಾ ನೀರು, ಆದ್ರೆ ಇಲ್ಲಿನ ಕೆರೆಕಟ್ಟೆಗೆ ಅದನ್ನ ಹಿಡಿದಿಡುವ ಸಾಮರ್ಥ್ಯ ಇದೆಯಾ?
Follow us
ಸಾಧು ಶ್ರೀನಾಥ್​
|

Updated on:Nov 18, 2019 | 7:55 AM

ಚಿತ್ರದುರ್ಗ: ಬರದನಾಡು ಚಿತ್ರದುರ್ಗ ಜನರ ಬಹುದಿನಗಳ ಕನಸು ಭದ್ರಾ ಮೇಲ್ದಂಡೆ ಯೋಜನೆ ಕೊನೇ ಹಂತದಲ್ಲಿದೆ. ಚಿಕ್ಕಮಗಳೂರು ಜಿಲ್ಲೆ ಮುತ್ತಿನಕೊಪ್ಪ, ಭದ್ರಾ ಡ್ಯಾಂ ಹಾಗೂ ಅಜ್ಜಂಪುರ ಬಳಿ ಭರದಿಂದ ಕೆಲಸ ನಡೀತಿದೆ.

ಈ ಯೋಜನೆಯಿಂದಾಗಿ ಚಿತ್ರದುರ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ 193 ಹಳ್ಳಿಗಳಿಗೆ ನೀರಾವರಿ ಸೌಲಭ್ಯ ಸಿಗಲಿದೆ. ಅಲ್ಲದೆ, ನಾಲ್ಕು ಜಿಲ್ಲೆಗಳ 156 ಕೆರೆಗಳಿಗೆ ನೀರು ತುಂಬಿಸುವ ಉದ್ದೇಶ ಕೂಡ ಇದೆ. ಆದ್ರೆ, ನೀರು ತುಂಬಬೇಕಾದ ಕೆರೆಗಳೇ ದುಸ್ಥಿತಿಯಲ್ಲಿವೆ.

ಚಿತ್ರದುರ್ಗ ಜಿಲ್ಲೆಯ ಬಹುತೇಕ ಕೆರೆಗಳಲ್ಲಿ ಗಿಡ ಗಂಟಿಗಳು ಬೆಳೆದಿದ್ದು, ಹೂಳು ತುಂಬಿಕೊಂಡಿದೆ. ಈ ಬಗ್ಗೆ ನೀರಾವರಿ ಇಲಾಖೆ ಕೂಡ ತಲೆ ಕೆಡಿಸಿಕೊಂಡಿಲ್ಲ. ಹೀಗಾಗಿ, ದುಸ್ಥಿತಿಯಲ್ಲಿರೋ ಕೆರೆಗಳಿಗೆ ನೀರು ಬಂದ್ರೆ ಕಥೆ ಏನು ಅನ್ನೋದು ಸ್ಥಳೀಯರ ಪ್ರಶ್ನೆ.

ಕೆರೆ ಅಭಿವೃದ್ಧಿಗೆ ರೈತರ ಪಟ್ಟು: ಇನ್ನು ಇತ್ತೀಚೆಗೆ ಸುರಿದ ಮಹಾ ಮಳೆಯಿಂದಾಗಿ ನೀರಗುಂದ ಗ್ರಾಮದ ಕೆರೆ ಕಟ್ಟೆ ಒಡೆದು ನೀರು ಹರಿದು ಹೋಗಿದೆ. ಕಾತ್ರಾಳ್ ಕೆರೆ ತೂಬು ಒಡೆದಿದ್ದು ಕಳೆದೊಂದು ತಿಂಗಳಿಂದ ನೀರು ಪೋಲಾಗುತ್ತಿದೆ. ಇಷ್ಟೇ ಅಲ್ಲ. ಚಿತ್ರದುರ್ಗ ತಾಲೂಕಿನ ಮುದ್ದಾಪುರ ಕೆರೆ, ಮಲ್ಲಾಪುರ ಕೆರೆ ಹಾಗು ಗೋನೂರು ಕೆರೆಗಳ ಒಡ್ಡು ಶಿಥಿಲಗೊಂಡಿದೆ.

ಒಂದ್ವೇಳೆ ಕೆರೆ ಏನಾದ್ರೂ ಫುಲ್ ಆದ್ರೆ ಒಡ್ಡು ಒಡೆದು ಹೋಗೋ ಎಲ್ಲಾ ಸಾಧ್ಯತೆ ಇದೆ. ಇದಲ್ಲದೆ, ಜಿಲ್ಲೆಯ 30ಕ್ಕೂ ಹೆಚ್ಚು ಕೆರೆಗಳು ದುಸ್ಥಿತಿಯಲ್ಲಿವೆ. ಹೀಗಾಗಿ, ಭದ್ರಾ ಮೇಲ್ದಂಡೆ ಯೋಜನೆ ನೀರು ಬರುವ ಮುನ್ನ ಕೆರೆಗಳನ್ನ ಅಭಿವೃದ್ಧಿಪಡಿಸಿ ಅಂತ ರೈತರು ಪಟ್ಟು ಹಿಡಿದಿದ್ದಾರೆ.

Published On - 7:03 am, Mon, 18 November 19

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ