AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈನಿಕರ ನೆನಪಿಗೆ ದಾವಣಗೆರೆಯಲ್ಲಿ ನಿರ್ಮಾಣವಾಗುತ್ತಿದೆ ಅಮರ್ ಜವಾನ್ ಪಾರ್ಕ್

ಮಾಹಿತಿ ನೀಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಸದ್ಯ ಮೊದಲ ಹಂತದ ಕಾಮಗಾರಿ ಮುಕ್ತಾಯವಾಗಿದೆ. ಸುಮಾರು 13 ಲಕ್ಷ ವೆಚ್ಚ ಮಾಡಲಾಗಿದೆ. ಜೊತೆಗೆ ಇದನ್ನ ಅನ್ಯರು ಕಬಳಿಸುವ ಸಾಧ್ಯತೆಗಳಿದ್ದವು. ಹೀಗಾಗಿ ಸೈನಿಕರ ಬೇಡಿಕೆಗೆ ಸ್ಪಂದಿಸಿ ಪಾರ್ಕ್ ಆರಂಭಿಸಲಾಗಿದೆ.

ಸೈನಿಕರ ನೆನಪಿಗೆ ದಾವಣಗೆರೆಯಲ್ಲಿ ನಿರ್ಮಾಣವಾಗುತ್ತಿದೆ ಅಮರ್ ಜವಾನ್ ಪಾರ್ಕ್
ಅಮರ್ ಜವಾನ್ ಪಾರ್ಕ್ನ ಸಂಸದ ಜಿ.ಎಂ.ಸಿದ್ದೇಶ್ವರ ಉದ್ಘಾಟಿಸಿದರು
TV9 Web
| Updated By: sandhya thejappa|

Updated on: Jul 06, 2021 | 1:32 PM

Share

ದಾವಣಗೆರೆ: ಜಿಲ್ಲೆಯಲ್ಲಿ ನೂರಾರು ಮಾಜಿ ಸೈನಿಕರು ಇದ್ದಾರೆ. ನಮಗೊಂದು ಸೈನಿಕ ಭವನ ಕಟ್ಟಿಕೊಡಿ ಅಂತ ಬೇಡಿಕೆ ಇಟ್ಟಿದ್ದರು. ಅವರ ಬೇಡಿಕೆಯಂತೆ ಇದೀಗ ಜಿಲ್ಲೆಯಲ್ಲಿ ಅಮರ್ ಜವಾನ್ ಪಾರ್ಕ್ ನಿರ್ಮಾಣವಾಗುತ್ತಿದೆ. ಈಗ ಮೊದಲ ಹಂತದ ಕಾಮಗಾರಿ ಮುಕ್ತಾಯವಾಗಿದೆ. ಪಾರ್ಕ್​ನ ಸಂಸದ ಜಿ.ಎಂ.ಸಿದ್ದೇಶ್ವರ ಉದ್ಘಾಟಿಸಿದರು. ಬಹುದಿನಗಳಿಂದ ನಗರದಲ್ಲಿ ಇಂತಹದೊಂದು ಪಾರ್ಕ್ ಅಗತ್ಯವಿತ್ತು. ದೇಶದ ಗಡಿಯಲ್ಲಿ ಪ್ರಾಣದ ಹಂಗು ತೊರೆದು ದೇಶ ಕಾಯುವ ಸೈನಿಕರನ್ನ ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಹೀಗಾಗಿ ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರ ಸೈನಿಕರಿಗೆ ಗೌರವ ಸಲ್ಲಿಸುವ ಕೆಲಸವನ್ನು ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಸದ್ಯ ಮೊದಲ ಹಂತದ ಕಾಮಗಾರಿ ಮುಕ್ತಾಯವಾಗಿದೆ. ಸುಮಾರು 13 ಲಕ್ಷ ವೆಚ್ಚ ಮಾಡಲಾಗಿದೆ. ಜೊತೆಗೆ ಇದನ್ನ ಅನ್ಯರು ಕಬಳಿಸುವ ಸಾಧ್ಯತೆಗಳಿದ್ದವು. ಹೀಗಾಗಿ ಸೈನಿಕರ ಬೇಡಿಕೆಗೆ ಸ್ಪಂದಿಸಿ ಪಾರ್ಕ್ ಆರಂಭಿಸಲಾಗಿದೆ. ವಾಕಿಂಗ್ ಪಾತ್, ಸೈನಿಕರ ಭವನ, ಭಾರೀ ಗಾತ್ರದ ಅಮರ್ ಜವಾನ್ ಸ್ಥೂಪ ಪಾರ್ಕ್​ನಲ್ಲಿ ಅರಣ್ಯ ಮಾದರಿಯಲ್ಲಿ ಗಿಡ ಬೆಳೆಸಲಾಗುತ್ತದೆ. ಮಾಜಿ ಸೈನಿಕರ ಕುಟುಂಬಗಳ ಕಾರ್ಯಕ್ರಮಕ್ಕೆ ಇಲ್ಲಿ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ನೂರಾರು ಜನ ಮಾಜಿ ಸೈನಿಕರಿದ್ದಾರೆ. ಮೇಲಾಗಿ ಆರು ಜಿಲ್ಲೆಯ ವ್ಯಾಪ್ತಿಯ ಎನ್​ಸಿಸಿ ಕಚೇರಿ ಕೂಡಾ ಇದೆ. ಇಲ್ಲಿ ಕಾರ್ಯ ನಿರ್ವಹಿಸುವ ಬಹುತೇಕರು ಸೈನಿಕರೇ. ಕಳೆದ ಹದಿಮೂರು ವರ್ಷಗಳಿಂದ ಹೋರಾಟ ಮಾಡುತ್ತಿದ್ದರು. ಈಗ ಅದು ಫಲ ನೀಡಿದೆ. ಈ ಪಾರ್ಕ್ ಮಾತ್ರ ನಗರಾಭಿವೃದ್ಧಿ ಪ್ರಾಧಿಕಾರದ ಆಸ್ತಿಯಾಗಿಯೇ ಇರುತ್ತದೆ. ಆದರೆ ಮಾಜಿ ಸೈನಿಕರು ಹಾಗೂ ಅವರ ಕುಟುಂಬ ಸದಸ್ಯರು ಬಳಕೆ ಮಾಡಿಕೊಳ್ಳಲು ಅವಕಾಶವಿದೆ.

ಪಾರ್ಕ್​ನ ಆಕರ್ಷಣೆ ಎಂದರೆ ಅಮರ್ ಜವಾನ್ ಸ್ಥೂಪ ಜೊತೆಗೆ ಸುತ್ತಲು ಮರ ಬೆಳೆಸಲಾಗುತ್ತದೆ. ವಾಯುವಿಹಾರಕ್ಕೆ ಬರುವ ಜನಕ್ಕೆ ವಾಕಿಂಗ್ ಪಾತ್ ನಿರ್ಮಾಣ ಮಾಡಲಾಗುತ್ತದೆ. ದಿನದ 24 ಗಂಟೆಗಳ ಕಾಲ ನೀರು, ವಿದ್ಯುತ್ ಪೂರೈಕೆ ಮಾಡಲಾಗುವುದು. ಕೆಲ ಮಾಜಿ ಸೈಕರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಸೇನೆಯಲ್ಲಿ ಸೇವೆ ಸಲ್ಲಿಸಲು ಇಚ್ಛೆ ವ್ಯಕ್ತಪಡಿಸಿದವರಿಗೆ ತರಬೇತಿ ಆರಂಭಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ

‘ಈಗ’, ‘ಹುಚ್ಚ’; ಸುದೀಪ್​ ಜೀವನದಲ್ಲಿ ಮರೆಯಲಾಗದ ಈ 2 ಸಿನಿಮಾಗಳಿಗೆ ಸ್ಪೆಷಲ್​ ದಿನವಿದು

ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆಗೆ ಸ್ಥಳ ಪರಿಶೀಲಿಸಿದ ಸಿಎಂ ಯಡಿಯೂರಪ್ಪ

(Urban development Authority is building the Amar Jawan Park for memory of soldiers)

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್