Urigowda Nanjegowda Movie: ಮುನಿರತ್ನ ಯೂಟರ್ನ್, ಉರಿಗೌಡ ನಂಜೇಗೌಡ ಸಿನಿಮಾಕ್ಕೆ ಬ್ರೇಕ್​ ಹಾಕಿದ ನಿರ್ಮಲಾನಂದನಾಥ ಸ್ವಾಮೀಜಿ

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿರುವ ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್​ ಬಿದ್ದಿದೆ.

Urigowda Nanjegowda Movie: ಮುನಿರತ್ನ ಯೂಟರ್ನ್, ಉರಿಗೌಡ ನಂಜೇಗೌಡ ಸಿನಿಮಾಕ್ಕೆ ಬ್ರೇಕ್​ ಹಾಕಿದ ನಿರ್ಮಲಾನಂದನಾಥ ಸ್ವಾಮೀಜಿ
ಉರಿಗೌಡ-ನಂಜೇಗೌಡ ಸಿನಿಮಾ ಪೋಸ್ಟರ್
Follow us
ರಮೇಶ್ ಬಿ. ಜವಳಗೇರಾ
|

Updated on:Mar 20, 2023 | 11:12 AM

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿರುವ ಉರಿಗೌಡ-ನಂಜೇಗೌಡ ಸಿನಿಮಾಕ್ಕೆ( Urigowda Nanjegowda Movie) ಬ್ರೇಕ್​ ಬಿದ್ದಿದೆ. ನಿರ್ಮಲಾನಂದ ಸ್ವಾಮಿಗಳ ಭೇಟಿ ಬಳಿಕ ಇದ್ದಕ್ಕಿದ್ದಂತೆ ಮುನಿರತ್ನ (Munirathna) ಯೂಟರ್ನ್ ಹೊಡೆದಿದ್ದು, ಉರಿಗೌಡ ನಂಜೇಗೌಡ ಚಿತ್ರದ ಚಿತ್ರೀಕರಣ ನಿರ್ಮಾಣ ಇಲ್ಲ ಎಂದು ಸ್ಙಷ್ಟಪಡಿಸಿದ್ದಾರೆ. ಈ ಮೂಲಕ ಉರಿಗೌಡ-ನಂಜೇಗೌಡ ವಿವಾದಿತ ಚಲನಚಿತ್ರ ಗೊಂದಲಗಳಿಗೆ  ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ತೆರೆ ಎಳೆದಿದ್ದಾರೆ. ನಾನೊಬ್ಬ ನಿರ್ಮಾಪಕನಾಗಿ ಉರಿಗೌಡ-ನಂಜೇಗೌಡ ಚಿತ್ರ ನಿರ್ಮಾಣ ಮಾಡೋಣ ಅಂತಿದ್ದೀನಿ ಆದರೆ ನಾಳೆ (ಮಾರ್ಚ್ 20) ನಿರ್ಮಲಾನಂದನಾಥ ಸ್ವಾಮೀಜಿ. ಅವರೊಟ್ಟಿಗೆ ಚರ್ಚೆ ಮಾಡುವವರೆಗೆ ಸಿನಿಮಾದ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದರು. ಇದೀಗ ಮುನಿರತ್ನ ಅವರು ಮಂಡ್ಯದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಭೇಟಿ ಚರ್ಚೆ ಮಾಡಿದ್ದು, ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿನಿಮಾ ಚಿತ್ರೀಕರಣ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ: ಉರಿಗೌಡ-ನಂಜೇಗೌಡ ಸಿನಿಮಾ ಮುಹೂರ್ತಕ್ಕೆ ದಿನಾಂಕ ನಿಗದಿ: ಸಚಿವ ಅಶ್ವಥ್ ನಾರಾಯಣ ಚಿತ್ರಕತೆ

ನಿರ್ಮಾಲನಾಂದ ಸ್ವಾಮೀಜಿ ಭೇಟಿ ಬಳಿಕ ಮುನಿರತ್ನ ಹೇಳಿದ್ದಿಷ್ಟು

munirathna meets nirmalanandanatha swamij

ನಿರ್ಮಾಲನಾಂದ ಸ್ವಾಮೀಜಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿರತ್ನ, ಉರಿಗೌಡ- ನಂಜೇಗೌಡ ಸಿನಿಮಾ ಮಾಡುವುದನ್ನ ಕೈ ಬಿಡುವಂತೆ ಸ್ವಾಮೀಜಿ ಸಲಹೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ವಾಮೀಜಿ ಯ ಮಾತಿನಂತೆ ಸಿನಿಮಾ ನಿರ್ಮಾಣ ಮಾಡದಿರಲು ಮುನಿರತ್ನ ಘೋಷಣೆ ಮಾಡಿದರು.

ಇದನ್ನೂ ಓದಿ: ಉರಿಗೌಡ ಮತ್ತು ನಂಜೇಗೌಡ ಹೆಸರು ತೆಗೆದುಕೊಂಡು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ: ಒಕ್ಕಲಿಗರ ಸಂಘ

ಉರಿಗೌಡ, ನಂಜೇಗೌಡ ಚಿತ್ರ ನಿರ್ಮಾಣದ ಆಲೋಚನೆ ಇರಲಿಲ್ಲ. ಆದ್ರೆ, ಹೆಚ್​ಡಿ ಕುಮಾರಸ್ವಾಮಿ ಹೇಳಿದ ಬಳಿಕ ಚಿತ್ರ ನಿರ್ಮಾಣಕ್ಕೆ ನಿರ್ಧಾರ ಮಾಡಿದ್ದೆ. ದೊಡ್ಡ ಮಟ್ಟದಲ್ಲಿ ಸಿನಿಮಾ ಮಾಡಬೇಕೆಂದು ಯೋಚನೆ ಮಾಡಿದ್ದೆ. ಆದ್ರೆ, ಇದೀಗ ಈ ಚಿತ್ರ ನಿರ್ಮಾಣ ಮಾಡಲ್ಲ ಎಂದು ನಾನು ಶ್ರೀಗಳಿಗೆ ತಿಳಿಸಿದ್ದೇನೆ. ನಾನೊಬ್ಬ ನಿರ್ಮಾಪಕನಾಗಿ ಈ ಚಿತ್ರ ಮಾಡುತ್ತೇನೆ ಎಂದು ಹೇಳಿದ್ದೆ. ಎಲ್ಲವೂ ಸತ್ಯ ಘಟನೆ ಎಂದು ಸಿನಿಮಾ ಮಾಡಲು ಆಗಲ್ಲ. ಉರಿಗೌಡ, ದೊಡ್ಡ ನಂಜೇಗೌಡ ಬಗ್ಗೆ ಸಂಶೋಧನೆ ನಡೆಯುತ್ತಿದೆ ಎಂದು ಹೇಳಿದರು.

ರಾಜ್ಯ ರಾಜಕೀಯದಲ್ಲಿ (Politics) ವಿವಾದಿತ ಪಾತ್ರಗಳಾಗಿ ಚರ್ಚೆಯಲ್ಲಿರುವ ಉರಿಗೌಡ-ನಂಜೇಗೌಡ (Urigowda Nanjegowda) ಅವರುಗಳನ್ನು ಆಧರಿಸಿದ ಸಿನಿಮಾ ಮಾಡಲು ನಿರ್ಮಾಪಕ, ಹಾಲಿ ಸಚಿವ ಮುನಿರತ್ನ (Munirathna) ಟೈಟಲ್ ರಿಜಿಸ್ಟರ್​ಗೆ ಅರ್ಜಿ ಹಾಕಿದ್ದರು. ಅಲ್ಲದೇ ಸಿನಿಮಾದ ಮುಹೂರ್ತ ದಿನಾಂಕವನ್ನೂ ಘೋಷಿಸಿಬಿಟ್ಟಿದ್ದರು. ಸಾಮಾಜಿಕ ಜಾಲತಾಣ ಖಾತೆಯಲ್ಲಿ ಸಿನಿಮಾದ ಪೋಸ್ಟರ್ ಹಂಚಿಕೊಂಡಿರುವ ಮುನಿರತ್ನ, ಮೇ 18 ರಂದು ಉರಿಗೌಡ-ನಂಜೇಗೌಡ ಸಿನಿಮಾ ಮುಹೂರ್ತ ಮಾಡಲಾಗುವುದು ಎಂದಿದ್ದರು.

ವೃಷಬಾದ್ರಿ ಪ್ರೊಡಕ್ಷನ್ ನಿರ್ಮಾಣದ ಐತಿಹಾಸಿಕ ಸತ್ಯ ಘಟನೆಗಳ ಆಧಾರಿತ ‘ಉರೀಗೌಡ ನಂಜೇಗೌಡ’ ಚಿತ್ರದ ಮುಹೂರ್ತ ಮೇ 18ರಂದು ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ. ಡಾ.ಸಿ.ಎನ್.ಅಶ್ವಥ್ ನಾರಾಯಣ್ ಚಿತ್ರಕಥೆ ಇರುವ ಈ ಚಿತ್ರವನ್ನು ಆರ್.ಎಸ್.ಗೌಡ ನಿರ್ದೇಶನ ಮಾಡುತ್ತಿದ್ದಾರೆ ಎಂದು ಸಚಿವ ಮುನಿರತ್ನ ಅವರು ಟ್ವೀಟ್‌ ಮೂಲಕ ತಿಳಿಸಿದ್ದರು.

ಉರೀಗೌಡ ನಂಜೇಗೌಡ ಟೈಟಲ್​ಗೆ ಅರ್ಜಿ ಸಲ್ಲಿಸಿದ್ದರ ವಿರುದ್ಧ ಈಗಾಗಲೇ ಆಕ್ಷೇಪ ವ್ಯಕ್ತವಾಗಿದ್ದವು. ಒಕ್ಕಲಿಗ ಯುವಬ್ರಿಗೆಡ್ ಹಾಗೂ ಅನಿವಾಸಿ ಭಾರತೀಯ ಒಕ್ಕಲಿಗ ಯುವಬ್ರಿಗೆಡ್ ವಿರೋಧಿಸಿತ್ತು. ಅಲ್ಲದೇ ಇದಕ್ಕೆ ಅನುಮತಿ ನೀಡಬಾರದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮನವಿ ಮಾಡಿತ್ತು. ‘ವೃಷಭಾದ್ರಿ ಪ್ರೊಡಕ್ಷನ್ಸ್ ಅವರು ಉರೀಗೌಡ, ನಂಜೇಗೌಡ ಚಲನಚಿತ್ರ ನಿರ್ಮಿಸಲು ವಾಣಿಜ್ಯ ಮಂಡಳಿಗೆ ಮನವಿಯನ್ನು ಸಲ್ಲಿಸಿರುತ್ತಾರೆ. ಉರೀಗೌಡ, ನಂಜೇಗೌಡ ಎನ್ನುವ ಇಬ್ಬರೂ ವ್ಯಕ್ತಿಗಳ ಮೇಲೆ ಯಾವುದೇ ತರಹದ ಮಾಹಿತಿ ಸರ್ಕಾರದ ದಾಖಲೆಗಳಲ್ಲಿ, ಇತಿಹಾಸದ ದಾಖಲೆಗಳಲ್ಲಿ ಹಾಗೂ ಸ್ಥಳೀಯ ಆಡಳಿತದಲ್ಲಿ ಸಿಗುವ ಕರಡು ಪ್ರತಿಗಳಲ್ಲಿ ಇಲ್ಲ ಎಂದು ಒಕ್ಕಲಿಗ ಯುವಬ್ರಿಗೆಡ್ ಹಾಗೂ ಅನಿವಾಸಿ ಭಾರತೀಯ ಒಕ್ಕಲಿಗ ಯುವಬ್ರಿಗೆಡ್ ಹೇಳಿದ್ದವು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:47 am, Mon, 20 March 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ