Sanchari Vijay: ಅಮೆರಿಕ ರಾಯಭಾರ ಕಚೇರಿಯಿಂದಲೂ ನಟ ಸಂಚಾರಿ ವಿಜಯ್ ನಿಧನಕ್ಕೆ ಸಂತಾಪ
Sanchari Vijay Death: ರಾಷ್ಟ್ರ ಪ್ರಶಸ್ತಿ ವಿಜೇತರಾಗಿದ್ದ ಸಂಚಾರಿ ವಿಜಯ್ ಅವರ ಅವರ ಕುಟುಂಬಕ್ಕೆ ಮತ್ತು ಅಭಿಮಾನಿ ಬಳಗಕ್ಕೆ ಸಂತಾಪ ಸೂಚಿಸಿರುವ ಅಮೆರಿಕ ರಾಯಭಾರಿ ಕಚೇರಿ, ಚೆನ್ನೈನಲ್ಲಿರುವ ಕಚೇರಿಯಲ್ಲಿ 2018ರಲ್ಲಿ ಪ್ರೈಡ್ ತಿಂಗಳ ಆಚರಣೆಯ ಪ್ರಯುಕ್ತ ತೃತೀಯ ಲಿಂಗಿ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ ನಾನು ಅವನಲ್ಲ ಅವಳು ಪ್ರದರ್ಶನದಲ್ಲಿ ಮತ್ತು ಸಂವಾದದಲ್ಲಿ ಸಂಚಾರಿ ವಿಜಯ್ ಆರ್ಐಪಿ ಎಂದು ಟ್ವೀಟ್ ಮಾಡಿದೆ.
ಚಿಕ್ಕಮಗಳೂರು: ಕನ್ನಡದ ಹೆಮ್ಮೆಯ ನಟ, ಕಲಾವಿದ ಸಂಚಾರಿ ವಿಜಯ್ ನಿಧನಕ್ಕೆ ಚೆನ್ನೈನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಸಂತಾಪ ಸೂಚಿಸಿ ಕನ್ನಡದಲ್ಲೇ ಟ್ವಿಟ್ ಮಾಡಿದೆ. ರಾಷ್ಟ್ರ ಪ್ರಶಸ್ತಿ ವಿಜೇತರಾಗಿದ್ದ ಸಂಚಾರಿ ವಿಜಯ್ ಅವರ ಅವರ ಕುಟುಂಬಕ್ಕೆ ಮತ್ತು ಅಭಿಮಾನಿ ಬಳಗಕ್ಕೆ ಸಂತಾಪ ಸೂಚಿಸಿರುವ ಅಮೆರಿಕ ರಾಯಭಾರಿ ಕಚೇರಿ, ಚೆನ್ನೈನಲ್ಲಿರುವ ಕಚೇರಿಯಲ್ಲಿ 2018ರಲ್ಲಿ ಪ್ರೈಡ್ ತಿಂಗಳ ಆಚರಣೆಯ ಪ್ರಯುಕ್ತ ತೃತೀಯ ಲಿಂಗಿ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ ನಾನು ಅವನಲ್ಲ ಅವಳು ಪ್ರದರ್ಶನದಲ್ಲಿ ಮತ್ತು ಸಂವಾದದಲ್ಲಿ ಸಂಚಾರಿ ವಿಜಯ್ ಆರ್ಐಪಿ ಎಂದು ಟ್ವೀಟ್ ಮಾಡಿದೆ.
ರಾಷ್ಟ್ರ ಪ್ರಶಸ್ತಿ ವಿಜೇತ #SanchariVijay ಅವರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ನಮ್ಮ ಸಂತಾಪಗಳು. 2018ರಲ್ಲಿ ಚೆನ್ನೈನ ಅಮೆರಿಕ ದೂತಾವಾಸದಲ್ಲಿ #Pride ತಿಂಗಳ ಆಚರಣೆಯ ಅಂಗವಾಗಿ LGBTQi+ ಸಮುದಾಯದ ಸಂಘರ್ಷವನ್ನು ಬಿಂಬಿಸುವ ಪ್ರಶಸ್ತಿ ವಿಜೇತ ಚಿತ್ರ “ನಾನು ಅವನಲ್ಲ…ಅವಳು” ಪ್ರದರ್ಶನ-ಸಂವಾದದಲ್ಲಿ ಭಾಗಿಯಾಗಿದ್ದ ಸಂಚಾರಿ ವಿಜಯ್. #RIP
— US Consulate Chennai (@USAndChennai) June 15, 2021
Our condolences to the family and fans of Kannada actor #SanchariVijay. In 2018 we met the National Awardee in Chennai for the #Pride month screening of his award-winning film Nanu Avanalla Avallu, a story about struggles the LGBTQi+ community encounters with identity. #RIP
— US Consulate Chennai (@USAndChennai) June 15, 2021
ಹುಟ್ಟೂರು ಪಂಚನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ನಟ ಸಂಚಾರಿ ವಿಜಯ್ ಅಂತ್ಯಕ್ರಿಯೆ
ಕನ್ನಡದ ಹೆಮ್ಮೆಯ ನಟ, ಕಲಾವಿದ ಸಂಚಾರಿ ವಿಜಯ್ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಚಿಕ್ಕಮಗಳೂರು ಜಿಲ್ಲೆಯ ಕಡೂಡು ತಾಲೂಕಿನ ಪಂಚನಹಳ್ಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ವಿಧಿವಿಧಾನಗಳೊಂದಿಗೆ ನೆರವೇರಿತು. ಸಚಿವ ಮಾಧುಸ್ವಾಮಿ, ಮಾಜಿ ಶಾಸಕ ವೈಎಸ್ವಿ ದತ್ತ ಸರ್ಕಾರದ ಪರವಾಗಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ಕುಪ್ಪೂರು ಯತೀಶ್ವರ ಶಿವಾಚಾರ್ಯಶ್ರೀ ನೇತೃತ್ವದಲ್ಲಿ ಪಾರ್ಥಿವ ಶರೀರವನ್ನು ಸಮಾಧಿಯೊಳಗೆ ಇರಿಸಿ ಸಂಚಾರಿ ವಿಜಯ್ ಅವರ ಸಹೋದರರು ಪೂಜೆ ಸಲ್ಲಿಸಿದರು.
ಸಂಚಾರಿ ವಿಜಯ್ ಸ್ನೇಹಿತ ರಘು ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದ್ದು, ಅಂತಿಮ ದರ್ಶನಕ್ಕೆ ಗ್ರಾಮಸ್ಥರು ಮತ್ತು ಸ್ನೇಹಿತರು ನೆರೆದಿದ್ದರು. ಬಿಲ್ವಪತ್ರೆ, ಭಸ್ಮ ಬಳಸಿ ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ಕುಪ್ಪೂರು ಯತೀಶ್ವರ ಶಿವಾಚಾರ್ಯಶ್ರೀ ತಿಳಿಸಿದ್ದಾರೆ. ಸ್ಥಳದಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದು, ಜಿಲ್ಲಾಧಿಕಾರಿ, ಎಸ್ಪಿ ಸ್ಥಳದಲ್ಲೇ ಮೊಕ್ಕಾ ಹೂಡಿದ್ದಾರೆ. ಸಂಚಾರಿ ವಿಜಯ್ ಅಂತ್ಯಸಂಸ್ಕಾರದ ವಿಧಿ ವಿಧಾನಗಳು ನೆರವೇರುವ ಮುನ್ನ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಬೆಟ್ಟದಂತಹ ಕನಸು ಕಂಡಿದ್ದರು.. ಬೆಟ್ಟದಂತಹ ಕನಸು ಕಂಡಿದ್ರು.. ಬಹುದೊಡ್ಡ ಗುರಿ ಕಣ್ಮುಂದೆ ಇತ್ತು. ಕಷ್ಟಗಳು ಎದುರಾದ್ರೂ ಅವಕಾಶಗಳು ಕಡಿಮೆ ಸಿಕ್ಕರೂ ಹಿಂದೆ ಸರಿದಿರಲಿಲ್ಲ. ಸಹನೆ ಕಳೆದುಕೊಳ್ಳಲಿರಲಿಲ್ಲ. ಚಿಕ್ಕ ಚಿಕ್ಕ ಅವಕಾಶಗಳಲ್ಲೇ ತಮ್ಮನ್ನ ತಾವು ಗುರುತಿಸಿಕೊಂಡಿದ್ರು. ಹೀಗೆ ಸಿನಿಮಾ ಕ್ಷೇತ್ರದಲ್ಲೂ ಚಾಪು ಮೂಡಿಸಿದ್ದ ನಟ ಸಂಚಾರಿ ವಿಜಯ್ ಸಂಚಾರ ಮುಗಿಸಿದ್ದಾರೆ. ರಂಗಭೂಮಿ, ಧಾರವಾಹಿ, ಸಿನಿಮಾ ನಟನಾಗಿ ಮಿಂಚಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ಗೆ ಇಂದು ಅಂತಿಮ ನಮನ ಸಲ್ಲಿಸಲಾಗುತ್ತಿದೆ. ಈ ವೇಳೆ ಕುಟುಂಬಸ್ಥರು, ಗಣ್ಯರು, ಸ್ನೇಹಿತರು ಕಂಬನಿಯ ವಿದಾಯ ಹೇಳಿದ್ದಾರೆ. ತಮ್ಮ ಅಂಗಾಂಗ ದಾನ ಮಾಡಿರುವ ನಟ ಸಂಚಾರಿ ವಿಜಯ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
Sanchari Vijay: ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಟೀಸರ್ ನೋಡಿದರೆ ಕಲ್ಲು ಹೃದಯವೂ ಕರಗಲೇಬೇಕು
(US Consulate in Chennai tweeted condolences to Actor Sanchari Vijay death)