AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿರುವವರ ನಾಟಕ: ಪ್ರಲ್ಹಾದ ಜೋಶಿ

ಅಯೋಧ್ಯೆಯ ರಾಮ ಮಂದಿರದ ಆಹ್ವಾನದ ಮಂತ್ರಾಕ್ಷತೆಯನ್ನು ಅನ್ನಭಾಗ್ಯ ಅಕ್ಕಿಯಲ್ಲೇ ಮಂತ್ರಾಕ್ಷತೆ ಕೊಡುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿ ಇರುವವರ ನಾಟಕ ಎಂದಿದ್ದಾರೆ.

ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿರುವವರ ನಾಟಕ: ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ ಮತ್ತು ಡಿಕೆ ಶಿವಕುಮಾರ್Image Credit source: IANS
ಕಿರಣ್​ ಹನಿಯಡ್ಕ
| Updated By: Rakesh Nayak Manchi|

Updated on:Jan 08, 2024 | 7:38 PM

Share

ಬೆಂಗಳೂರು, ಜ.8: ಅಯೋಧ್ಯೆಯ ರಾಮ ಮಂದಿರದ (Ayodhya Ram Mandir) ಆಹ್ವಾನದ ಮಂತ್ರಾಕ್ಷತೆಯನ್ನು ಅನ್ನಭಾಗ್ಯ ಅಕ್ಕಿಯಲ್ಲೇ ಕೊಡುತ್ತಿದ್ದಾರೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿಕೆಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi), ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿ ಇರುವವರ ನಾಟಕ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಜೋಶಿ, “ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದವರು ರಾಮ ಮಂದಿರ ಆಗಬಾರದೆಂದು ಪಣ ತೊಟ್ಟವರು, ಇವತ್ತು ಅಕ್ಷತೆ ಮಾಡುತ್ತಿರುವುದಕ್ಕೆ ಸಂತೋಷ ಪಡುತ್ತಿರುವುದು ಒಂದು ಸಂತೋಷವೇ. ಆದರೆ ಅವರು ಸಂತೋಷ ಪಡುತ್ತಿರುವ ಕಾರಣ ಮಾತ್ರ ವಿಚಿತ್ರ” ಎಂದರು.

ಇದನ್ನೂ ಓದಿ: ರಾಮ ಮಂದಿರ ಆಹ್ವಾನ ಮಂತ್ರಾಕ್ಷತೆ ದೊಡ್ಡ ಆಲಹಳ್ಳಿಯಲ್ಲಿ ಬೆಳೆದು ಕಳುಹಿಸಿರುವುದಾ: ಡಿಕೆ ಶಿವಕುಮಾರ್​ಗೆ ಕುಮಾರಸ್ವಾಮಿ ಪ್ರಶ್ನೆ

“ಕೊಡಲಾಗದ ಅನ್ನ ಭಾಗ್ಯದ ಅಕ್ಕಿಯದೇ ಅಕ್ಷತೆ ಎಂದು ತಿಳಿಯುವುದು ಭ್ರಮಾಲೋಕದಲ್ಲಿ ಇರುವವರ ನಾಟಕ. ಕೊಡಲಾರದ ಅಕ್ಕಿಯಲ್ಲಿ ಅಕ್ಷತೆ ಆಗುತ್ತಿದೆ ಎಂದು ಪ್ರಭು ರಾಮನ ಅಕ್ಷತಾ ವಿಷಯದಲ್ಲೂ ಸುಳ್ಳು ಹೇಳುವ ಪಾಪಿಗಳು ನೀವು” ಎಂದು ಡಿಕೆ ಶಿವಕುಮಾರ್ ವಿರುದ್ಧ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಪ್ರಲ್ಹಾದ ಜೋಶಿ ಟ್ವೀಟ್

ರಾಮನ ಅಕ್ಷತೆ ಕಾಳಿನ ಬಗ್ಗೆಯೂ ಸುಳ್ಳು ಹೇಳಿದ್ದಾರೆ. ಈ ಹಿಂದಿನಿಂದಲೂ ರಾಮನ ಬಗ್ಗೆ ಸುಳ್ಳು ಹೇಳಿಕೊಂಡೇ ಬರುತ್ತಿದ್ದಾರೆ. ರಾಮನೇ ಕಾಲ್ಪನಿಕ ಅಂತ ಹಿಂದೆ ಅಂದಿದ್ದರು. ಇವತ್ತು ಅವರು ಕೊಡಲಾರದ ಅಕ್ಕಿ ಮಂತ್ರಾಕ್ಷತೆ ಎಂದಿದ್ದಾರೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಸುಳ್ಳು ಹೇಳಿಕೆ ಕೊಟ್ಟಿದ್ದಾರೆ ಎಂದರು.

ಡಿಕೆ ಶಿವಕುಮಾರ್ ಹೇಳಿದ್ದೇನು?

ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ್ದ ಡಿ.ಕೆ. ಶಿವಕುಮಾರ್‌, ನಮ್ಮ ಮನೆಯಲ್ಲಿ ಶಿವ, ಹನುಮಂತನ ಫೋಟೋ ಇಟ್ಟು ಪೂಜೆ ಮಾಡುತ್ತೇವೆ. ನಮ್ಮ ಹೃದಯದಲ್ಲಿ ನಮ್ಮ ದೇವರುಗಳನ್ನು ಇಟ್ಟು ಪೂಜಿಸಿಕೊಂಡು ಬಂದಿದ್ದೇವೆ. ಹೀಗಾಗಿ ಧರ್ಮ, ದೇವರ ವಿಚಾರದಲ್ಲಿ ರಾಜಕೀಯ ಮಾಡುವ ಅಗತ್ಯವಿಲ್ಲ. ಆರ್‌ಎಸ್‌ಎಸ್ ಹಾಗೂ ಬಿಜೆಪಿಯವರು ಮಂತ್ರಾಕ್ಷತೆ ನೀಡುತ್ತಿದ್ದಾರೆ. ಅನ್ನಭಾಗ್ಯ ಅಕ್ಕಿಯಲ್ಲೇ ಮಂತ್ರಾಕ್ಷತೆ ಮಾಡಿ ಹಂಚುತ್ತಿದ್ದಾರೆ. ಅದೇ ನಮಗೆ ಸಂತೋಷ ಎಂದಿದ್ದರು.

ಸುಳ್ಳಿನ ಸ್ಪರ್ಧೆಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

ಶ್ರೀಕಾಂತ್ ಪೂಜಾರಿ ಮೇಲಿನ ಕೇಸ್​ಗಳ ಬಗ್ಗೆಯೂ ಸುಳ್ಳು ಹೇಳಿದ್ದಾರೆ. ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸುಳ್ಳಿನ ಸ್ಪರ್ಧೆಯಲ್ಲಿದ್ದಾರೆ. ಇವರಿಗೆ ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದಲ್ಲಿ ಅಮಾಯಕರು ಸಿಗುತ್ತಾರೆ. ಆದರೆ ಹುಬ್ಬಳ್ಳಿ ಪ್ರಕರಣದಲ್ಲಿ ಎಲ್ಲಾ ಕೇಸ್ ತೆರವಾದರೂ ಅಮಾಯಕರು ಎನ್ನಲ್ಲ ಎಂದರು.

ಮಾಜಿ ಮುಖ್ಯಮಂತ್ರಿ ರಾಜ್ಯ ರಾಜಕಾರಣ ಬಿಟ್ಟು ರಾಷ್ಟ್ರ ರಾಜಕಾರಣಕ್ಕೆ ಎಂಟ್ರಿ ಕೊಡುತ್ತಾರೆ, ಅವರಿಗೆ ಕೇಂದ್ರ ಸಂಪುದಲ್ಲಿ ಸ್ಥಾನ ಸಿಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರಲ್ಹಾದ ಜೋಶಿ, ಅದು ನನ್ನ ವ್ಯಾಪ್ತಿಯಲ್ಲಿ ಇಲ್ಲ. ಅದರ ಬಗ್ಗೆ ನನಗೆ‌ ಮಾಹಿತಿ ಇಲ್ಲ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:36 pm, Mon, 8 January 24

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ