ಕಸದ ಮಾದರಿಯಲ್ಲಿ ಬಳಸಿದ ಅಡುಗೆ ಎಣ್ಣೆ ಸಂಗ್ರಹಕ್ಕೆ ಪ್ಲಾನ್! ನಗರಗಳಲ್ಲಿ ಮನೆ ಮನೆ ಬರಲಿದ್ದಾರೆ ಸಿಬ್ಬಂದಿ

ಅಡುಗೆ ಎಣ್ಣೆಯ ಮರುಬಳಕೆ ತಡೆಯಲು ಮತ್ತು ಅದಕ್ಕೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಹೊಸ ಯೋಜನೆ ರೂಪಿಸುತ್ತಿದೆ. ಕಸದ ಮಾದರಿಯಲ್ಲಿ ಮನೆ ಮನೆಗೆ ತೆರಳಿ ಬಳಸಿದ ಅಡುಗೆ ಎಣ್ಣೆ ಸಂಗ್ರಹಿಸಿ, ಬಯೋಫ್ಯುಯೆಲ್ ಕಂಪನಿಗಳಿಗೆ ಹಸ್ತಾಂತರಿಸುವ ಯೋಜನೆ ಇದಾಗಿದೆ. ಒಂದು ಲೀಟರ್ ಎಣ್ಣೆ ಇದ್ದರೂ ಸಂಗ್ರಹಿಸಿ, ಪ್ರತಿ ಲೀಟರ್‌ಗೆ ದರ ನೀಡುವ ವ್ಯವಸ್ಥೆ ಜಾರಿಗೆ ತರಲು ಸಿದ್ಧತೆ ನಡೆದಿದೆ.

ಕಸದ ಮಾದರಿಯಲ್ಲಿ ಬಳಸಿದ ಅಡುಗೆ ಎಣ್ಣೆ ಸಂಗ್ರಹಕ್ಕೆ ಪ್ಲಾನ್! ನಗರಗಳಲ್ಲಿ ಮನೆ ಮನೆ ಬರಲಿದ್ದಾರೆ ಸಿಬ್ಬಂದಿ
ಸಾಂದರ್ಭಿಕ ಚಿತ್ರ
Image Credit source: TV9 Network
Edited By:

Updated on: Oct 08, 2026 | 9:09 AM

ಮುಖ್ಯಾಂಶಗಳು

  • ಮನೆ ಮನೆಗೆ ತೆರಳಿ ಬಳಸಿದ ಅಡುಗೆ ಎಣ್ಣೆ ಸಂಗ್ರಹಕ್ಕೆ ಪ್ಲ್ಯಾನ್
  • ಒಂದು ಲೀಟರ್ ಎಣ್ಣೆಯನ್ನೂ ಸಂಗ್ರಹಿಸಲು ಸಿದ್ಧತೆ
  • ಮರುಬಳಕೆ ಎಣ್ಣೆಗೆ ಕಡಿವಾಣ ಹಾಕಲು ಸರ್ಕಾರ ಕ್ರಮ

ಬೆಂಗಳೂರು, ಅಕ್ಟೋಬರ್ 8: ಬಳಸಿದ ಅಡುಗೆ ಎಣ್ಣೆಯನ್ನು ಮರುಬಳಕೆ ಮಾಡುವುದಕ್ಕೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಹೊಸ ಯೋಜನೆ ರೂಪಿಸುತ್ತಿದೆ. ಇನ್ಮುಂದೆ ಕಸದ ಮಾದರಿಯಲ್ಲಿ ಮನೆ ಮನೆಗೆ ತೆರಳಿ ಬಳಸಿದ ಅಡುಗೆ ಎಣ್ಣೆ ಸಂಗ್ರಹಿಸುವ ಯೋಜನೆಗೆ ಸಿದ್ಧತೆ ನಡೆದಿದೆ. ಈ ಸಂಬಂಧ ಕರ್ನಾಟಕ ಜೈವಿಕ ಇಂಧನ ಅಭಿವೃದ್ಧಿ ಸಂಸ್ಥೆಯೊಂದಿಗೆ ಆರೋಗ್ಯ ಇಲಾಖೆ ಮಹತ್ವದ ಸಭೆ ನಡೆಸಿದೆ. ಬಳಸಿದ ಅಡುಗೆ ಎಣ್ಣೆ ಸಂಗ್ರಹಿಸಲು ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸುವ ಯೋಜನೆಯೂ ಇದೆ. ಒಂದು ಲೀಟರ್ ಬಳಸಿದ ಅಡುಗೆ ಎಣ್ಣೆ ಇದ್ದರೂ ಸಾರ್ವಜನಿಕರಿಂದ ಸಂಗ್ರಹಿಸುವ ವ್ಯವಸ್ಥೆ ಕಲ್ಪಿಸಲು ಇಲಾಖೆ ಮುಂದಾಗಿದೆ.

ಬೆಂಗಳೂರು, ಮಂಗಳೂರು ಸೇರಿ ನಗರಗಳಲ್ಲಿ ಜಾರಿ

ಸಂಗ್ರಹಿಸಿದ ಎಣ್ಣೆಯನ್ನು ಬಯೋಫ್ಯುಯೆಲ್ ಕಂಪನಿಗಳಿಗೆ ಹಸ್ತಾಂತರಿಸಲಾಗುತ್ತದೆ. ಬಳಸಿದ ಅಡುಗೆ ಎಣ್ಣೆಗೆ ಪ್ರತಿ ಲೀಟರ್‌ಗೆ ದರವನ್ನೂ ನಿಗದಿಪಡಿಸಿ, ಸಾರ್ವಜನಿಕರಿಗೆ ಹಣ ನೀಡುವ ಬಗ್ಗೆ ಯೋಜನೆ ರೂಪಿಸಲಾಗುತ್ತಿದೆ. ಈ ಯೋಜನೆ ಪ್ರಾಯೋಗಿಕ ಹಂತದಲ್ಲಿ ಬೆಂಗಳೂರು, ಮಂಗಳೂರು ಸೇರಿದಂತೆ ಇತರೆ ನಗರಗಳಲ್ಲಿ ಜಾರಿಗೆ ಬರಲಿದೆ.

ಬಳಕೆಯಾದ ಎಣ್ಣೆ ಎಲ್ಲಿಗೆ ಹೋಗ್ತಿದೆ? ಆರೋಗ್ಯ ಇಲಾಖೆಯಿಂದ ನಿಗಾ

ಒಮ್ಮೆ ಬಳಸಿದ ಅಡುಗೆ ಎಣ್ಣೆಯನ್ನು ಮರುಮಾರಾಟ ಮಾಡಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ. ಸ್ಟಾರ್ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಬಳಸಿದ ಅಡುಗೆ ಎಣ್ಣೆಯನ್ನು ಕಡಿಮೆ ದರಕ್ಕೆ ದರ್ಶಿನಿ ಹೋಟೆಲ್‌ಗಳಿಗೆ ಮಾರಾಟ ಮಾಡಲಾಗುತ್ತಿದೆ. ಅಲ್ಲಿಂದ ಬೀದಿ ಬದಿ ಅಂಗಡಿಗಳಿಗೆ ಮಾರಾಟವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಈ ರೀತಿಯ ಬಳಸಿದ ಎಣ್ಣೆಯ ಮರುಬಳಕೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚರಿಕೆ ವಹಿಸಿದೆ. ಬಳಸಿದ ಅಡುಗೆ ಎಣ್ಣೆ ಎಲ್ಲಿಗೆ ಹೋಗುತ್ತಿದೆ, ಯಾರ ಕೈ ಸೇರುತ್ತಿದೆ ಎಂಬುದನ್ನು ಪತ್ತೆಹಚ್ಚಿ, ಮರುಬಳಕೆಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗುತ್ತಿದೆ.

ಎಸ್​​ಒಪಿ, ಮಾರ್ಗಸೂಚಿ ರೂಪಿಸಲು ಸಿದ್ಧತೆ

ಬಳಸಿದ ಅಡುಗೆ ಎಣ್ಣೆ ಸಂಗ್ರಹ ಮತ್ತು ವಿಲೇವಾರಿಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಎಸ್​​ಒಪಿ ಹಾಗೂ ಮಾರ್ಗಸೂಚಿ ನೀಡಲು ಮುಂದಾಗಿದೆ. ಕಸದ ಸಂಗ್ರಹ ಮಾದರಿಯಲ್ಲೇ ಬಳಸಿದ ಅಡುಗೆ ಎಣ್ಣೆ ಸಂಗ್ರಹಿಸುವ ವ್ಯವಸ್ಥೆ ರೂಪಿಸುವ ಉದ್ದೇಶ ಹೊಂದಿದೆ.

ಪ್ರಾಯೋಗಿಕ ಯೋಜನೆ ಯಶಸ್ವಿಯಾದ ಬಳಿಕ ಬಳಸಿದ ಅಡುಗೆ ಎಣ್ಣೆ ಸಂಗ್ರಹ ವ್ಯವಸ್ಥೆಯನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶವಿದೆ. ಈ ಮೂಲಕ ಮರುಬಳಕೆಯ ಅಡುಗೆ ಎಣ್ಣೆ ಬಳಕೆಗೆ ಕಡಿವಾಣ ಹಾಕಲು ಇಲಾಖೆ ಮುಂದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
Loading...
Unable to load recommendations.
Follow Us