ರಾಜಕಾರಣಿಗಳ ಹೆಸರು ಹೇಳಿಕೊಂಡು ಚಿಕ್ಕಮಗಳೂರಿನಲ್ಲಿ ಅಕ್ರಮ ಮರಳು ಸಾಗಾಟ

|

Updated on: Apr 28, 2021 | 2:43 PM

ರಾಜಕಾರಣಿಗಳ ಹೆಸರು ಹೇಳಿಕೊಂಡು ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿರುವ ಮಾಹಿತಿ ತಿಳಿದುಬಂದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದಲ್ಲಿ ರಾಜಕಾರಣಿಗಳ ಬೆಂಬಲಿಗರು ಲಾರಿ, ಟ್ರ್ಯಾಕ್ಟರ್ ಮೂಲಕ ಮರಳು ಸಾಗಿಸುತ್ತಿದ್ದಾರೆ.

ರಾಜಕಾರಣಿಗಳ ಹೆಸರು ಹೇಳಿಕೊಂಡು ಚಿಕ್ಕಮಗಳೂರಿನಲ್ಲಿ ಅಕ್ರಮ ಮರಳು ಸಾಗಾಟ
ಮರಳು ಸಾಗಾಟ
Follow us on

ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ. ಕೊರೊನಾ ತಡೆಗಟ್ಟಲು ರಾಜ್ಯ ಸರ್ಕಾರ 14 ದಿನಗಳ ಕಾಲ ಕೊರೊನಾ ಕರ್ಫ್ಯೂ ಜಾರಿಗೊಳಿಸಿದೆ. ನಿನ್ನೆ ರಾತ್ರಿ 9 ಗಂಟೆಯಿಂದ ರಾಜ್ಯದಲ್ಲಿ ಬಹುತೇಕ ಎಲ್ಲವೂ ಬಂದ್ ಆಗಿವೆ. ಕೊರೊನಾ ಮುಕ್ತವಾಗಿಸುವ ಜೊತೆಗೆ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಸರ್ಕಾರ ನಾನಾ ರೀತಿಯಲ್ಲಿ ಯೋಚಿಸುತ್ತಿದೆ. ಈ ನಡುವೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ದಂಧೆ ನಡೆಯುತ್ತಿದೆ.

ರಾಜಕಾರಣಿಗಳ ಹೆಸರು ಹೇಳಿಕೊಂಡು ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿರುವ ಮಾಹಿತಿ ತಿಳಿದುಬಂದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದಲ್ಲಿ ರಾಜಕಾರಣಿಗಳ ಬೆಂಬಲಿಗರು ಲಾರಿ, ಟ್ರ್ಯಾಕ್ಟರ್ ಮೂಲಕ ಮರಳು ಸಾಗಿಸುತ್ತಿದ್ದಾರೆ. ಹಿಟಾಚಿಯಿಂದ ಲೋಡ್ ಮಾಡಿ ನೂರಾರು ಲಾರಿ ಮರಳನ್ನು ಸಾಗಿಸುತ್ತಿದ್ದರೂ, ಪೊಲೀಸ್ ಇಲಾಖೆ ಈ ಬಗ್ಗೆ ಕ್ರಮ ಕೈಗೊಂಡಿಲ್ಲ.

ಪಾಪದವರು ಒಂದು ಹಿಡಿ ಮರಳು ತೆಗೆದರೆ ಕೇಸ್ ಹಾಕುತ್ತಾರೆ. ನೂರಾರು ಲಾರಿ, ಟ್ರ್ಯಾಕ್ಟರ್​ಗಳಲ್ಲಿ ಮರಳು ಹೊಡೆದರೂ ಕೇಳೋರಿಲ್ಲ ಎಂದು ಸ್ಥಳೀಯರ ಮತ್ತು ಮರಳು ದಂಧೆಕೋರರ ನಡುವೆ ಮಾತಿ ಚಕಮಕಿ ನಡೆಯಿತು.

ಮಾತಿನ ಚಕಮಕಿ

ಇದನ್ನೂ ಓದಿ

ಅಕ್ಕಿ ಹೇಳಿದವರಿಗೆ ಸತ್ತುಹೋಗಿ ಎಂದ ಆಹಾರ ಸಚಿವ ಉಮೇಶ್ ಕತ್ತಿ!

ಎಲ್ಲೂ ಆಕ್ಸಿಜನೇಟೆಡ್ ಬೆಡ್‌ಗಳ‌ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ: ಜಿಲ್ಲಾಧಿಕಾರಿ ಮುಲೈ ಮಹಿಲನ್

(using the name of politicians and Sand trafficking illegally in Chikmagalur)