AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲೂ ಆಕ್ಸಿಜನೇಟೆಡ್ ಬೆಡ್‌ಗಳ‌ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ: ಜಿಲ್ಲಾಧಿಕಾರಿ ಮುಲೈ ಮಹಿಲನ್

ಜನರಿಗೆ ಕೊರೊನಾ ಬಗ್ಗೆ ಸಂಶಯ, ಗೊಂದಲವಿದ್ದರೆ ಕೂಡಲೇ ಮಾಹಿತಿ ಹಾಗೂ ಚಿಕಿತ್ಸೆಗಾಗಿ ತಾಲೂಕುವಾರು ಕಂಟ್ರೋಲ್‌ ರೂಂ‌ಮ್​ಗಳಿಗೆ ಕರೆ ಮಾಡಿ. ಇದಕ್ಕಾಗಿ ಕಂಟ್ರೋಲ್‌ ರೂಂ‌ಮ್​ ತೆರೆಯುತ್ತಿದ್ದು, ಜನಸೇವೆಗಾಗಿ ತರಬೇತು ಪಡೆದ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹೇಳಿದ್ದಾರೆ.

ಎಲ್ಲೂ ಆಕ್ಸಿಜನೇಟೆಡ್ ಬೆಡ್‌ಗಳ‌ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ: ಜಿಲ್ಲಾಧಿಕಾರಿ ಮುಲೈ ಮಹಿಲನ್
ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮಹಿಲನ್
Follow us
preethi shettigar
|

Updated on:Apr 28, 2021 | 1:59 PM

ಉತ್ತರ ಕನ್ನಡ: ಕೊರೊನಾ ಎರಡನೇ ಅಲೆ ದೇಶದಾದ್ಯಂತ ಹಬ್ಬಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಅದರಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ 1830 ಬೆಡ್‌‌‌ಗಳನ್ನು ತಯಾರುಗೊಳಿಸಲಾಗಿದ್ದು, ಇವುಗಳ ಪೈಕಿ 1085 ಜನರಲ್, 48 ಆಕ್ಸಿಜನ್, 108 ಐಸಿಯು ಹಾಗೂ 368 ಕಾಮನ್ ಬೆಡ್‌ಗಳನ್ನು ಅಣಿಗೊಳಿಸಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮಹಿಲನ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮುಲೈ ಮಹಿಲನ್ ಕಾರವಾರ ಮೆಡಿಕಲ್ ಕಾಲೇಜಿನಲ್ಲಿ ಕೊರೊನಾ ರೋಗಿಗಳಿಗಾಗಿ ಸಿದ್ಧಗೊಳಿಸಿರುವ 70 ಜನರಲ್ ಬೆಡ್‌ನಲ್ಲಿ 19 ರೋಗಿಗಳು, 50 ಐಸಿಯು ಬೆಡ್‌ನಲ್ಲಿ 32 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 65 ಹೆಚ್ಚುವರಿ ಐಸಿಯು ಬೆಡ್‌ಗಳನ್ನು 2 ದಿನದಲ್ಲಿ ಅಣಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಶಿರಸಿ ಹಾಗೂ ಕುಮಟಾದಲ್ಲಿ ಹೆಚ್ಚುವರಿ ಬೆಡ್‌ ಮತ್ತು ಸಿಬ್ಬಂದಿ ನಿಯೋಜನೆಗಾಗಿ ತಯಾರಿ ನಡೆಯುತ್ತಿದ್ದು, ಅಗತ್ಯವಿದ್ದರೆ ಪ್ರಥಮ ಹಾಗೂ ದ್ವಿತೀಯ ಹಂತದಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು. ಎಲ್ಲೂ ಆಕ್ಸಿಜನೇಟೆಡ್ ಬೆಡ್‌ಗಳ‌ ಕೊರತೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ರೋಗಿಗಳಿಗಾಗಿ 367 ಬೆಡ್‌ಗಳಿದ್ದು, ಸದ್ಯಕ್ಕೆ 27 ಮಾತ್ರ ರೋಗಿಗಳಿದ್ದಾರೆ ಎಂದು ಜಿಲ್ಲಾಧಿಕಾರಿ ಮುಲೈ ಮಹಿಲನ್ ಹೇಳಿದ್ದಾರೆ.

ಇನ್ನು ಆಕ್ಸಿಜನ್ ವ್ಯವಸ್ಥೆ ಸಂಬಂಧಿಸಿ ಜಿಲ್ಲೆಯಲ್ಲಿ ಜಂಬೋ ಸಿಲಿಂಡರ್ 557, ಸಣ್ಣ ಸಿಲಿಂಡರ್ 142 ತಯಾರಿದ್ದು, 20 ದಿನಗಳಲ್ಲಿ ಆಕ್ಸಿಜನ್ ಟ್ಯಾಂಕ್ ಅಳವಿಡಿಕೆಗೂ ಸಿದ್ಧತೆ ನಡೆಯುತ್ತಿದೆ. ಶಿರಸಿ, ಕುಮಟಾದಲ್ಲೂ ಆಕ್ಸಿಜನ್ ವ್ಯವಸ್ಥೆ ಹೆಚ್ಚಿಸಲು ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನಿಂದ ಉತ್ತರ ಕನ್ನಡ ಜಿಲ್ಲೆಗೆ ಬರುವವರು ಸ್ವಯಂ ಪ್ರೇರಿತರಾಗಿ 1ವಾರ ಕ್ವಾರಂಟೈನ್ ಕುಳಿತುಕೊಳ್ಳಬೇಕು. ಜನರಿಗೆ ಕೊರೊನಾ ಬಗ್ಗೆ ಸಂಶಯ, ಗೊಂದಲವಿದ್ದರೆ ಕೂಡಲೇ ಮಾಹಿತಿ ಹಾಗೂ ಚಿಕಿತ್ಸೆಗಾಗಿ ತಾಲೂಕುವಾರು ಕಂಟ್ರೋಲ್‌ ರೂಂ‌ಮ್​ಗಳಿಗೆ ಕರೆ ಮಾಡಿ. ಇದಕ್ಕಾಗಿ ಕಂಟ್ರೋಲ್‌ ರೂಂ‌ಮ್​ ತೆರೆಯುತ್ತಿದ್ದು, ಜನಸೇವೆಗಾಗಿ ತರಬೇತು ಪಡೆದ ಸಿಬ್ಬಂದಿ ನಿಯೋಜಿಸಲಾಗಿದೆ. ಇತರ ದೂರುಗಳಿದ್ದರೂ ಜನರು ಜಿಲ್ಲಾಡಳಿತದಿಂದ ನೀಡಲಾಗುವ ಸಂಖ್ಯೆಗೆ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಮುಲೈ ಮಹಿಲನ್ ತಿಳಿಸಿದ್ದಾರೆ.

ಅಗತ್ಯ ಸೇವೆಗಳಿಗೆ ಹೋಗುವವರಿಗೆ ಮಾತ್ರ ಜಿಲ್ಲೆಯಿಂದ ಗೋವಾಕ್ಕೆ ಹೋಗಲು ಅವಕಾಶ ನೀಡಲಾಗುವುದು. ಮಾರುಕಟ್ಟೆಗಳಲ್ಲಿ ಬೆಳಗ್ಗಿನ ಜಾವ ಜನಸಂದಣಿ ಹೆಚ್ಚುತ್ತಿರುವುದರಿಂದ ಮುಂಡಗೋಡು, ಕುಮುಟಾಗಳಲ್ಲಿ ಮಾರುಕಟ್ಟೆಯನ್ನು ಓಪನ್ ಗ್ರೌಂಡ್‌ಗೆ ಸ್ಥಳಾಂತರಿಸಲಾಗುತ್ತದೆ. ಜಿಲ್ಲೆಯ ಉಳಿದ ಭಾಗಗಳಲ್ಲೂ ಇದೇ ಸ್ಥಿತಿಯಾದರೆ ಮಾರುಕಟ್ಟೆಗಳನ್ನು ಆಯಾಯ ಭಾಗದ ಓಪನ್ ಗ್ರೌಂಡ್‌ಗೆ ಸ್ಥಳಾಂತರಿಸಲಾಗುವುದು. ಗರ್ಭಿಣಿ ಮಹಿಳೆಯರಲ್ಲಿ ಕೊವಿಡ್ ರಿಪೋರ್ಟ್ ತರಲು ಹೇಳಬಾರದು ಎಂದು ಸರ್ಕಾರ ಆದೇಶ ಹೊರಡಿಸಿದೆ.‌‌ ಇದನ್ನು ಮೀರಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಹೇಳಿದ್ದಾರೆ.

ಇದನ್ನೂ ಓದಿ:

ಕೊರೊನಾ ಸೋಂಕಿತರ ಚಿಕಿತ್ಸೆಗೆ ಶೇ.50 ರಷ್ಟು ಹಾಸಿಗೆ ಮೀಸಲಿಡಲು ಖಾಸಗಿ ಆಸ್ಪತ್ರೆಗಳಿಗೆ ಗದಗ ಜಿಲ್ಲಾಧಿಕಾರಿ ಸೂಚನೆ

ರಾಜ್ಯದಲ್ಲಿ ಕೊರೊನಾ ನಿಯಂತ್ರಣ, ಚಿಕಿತ್ಸೆಗೆಂದು ಮುಖ್ಯಮಂತ್ರಿ ಯಡಿಯೂರಪ್ಪ- ಪ್ರಧಾನಿ ಮೋದಿಗೆ 11 ಸಲಹೆ ನೀಡಿದ ಸಿದ್ದರಾಮಯ್ಯ

(Uttara Kannada DC Mulai Mahilan assured to look after non shortage of oxygenated beds)

Published On - 1:57 pm, Wed, 28 April 21

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ